ಶಾಲಾರಂಭ: ತಜ್ಞರೊಂದಿಗೆ ಇಂದು ಶ್ರೀರಾಮುಲು ಸಭೆ
Team Udayavani, Oct 6, 2020, 2:14 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಶಾಲಾರಂಭಕ್ಕೆ ಸಂಬಂಧಿಸಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಮಂಗಳವಾರ ಶಿಕ್ಷಣ ಇಲಾಖೆ ಅಧಿಕಾರಿಗಳು, ಕೋವಿಡ್ ಕಾರ್ಯಪಡೆ ಸದಸ್ಯರು ಮತ್ತು ತಜ್ಞರೊಂದಿಗೆ ಸಭೆ ನಡೆಸಲಿದ್ದಾರೆ.
ಕೇಂದ್ರ ಸರಕಾರ ಅ.15ರ ಬಳಿಕ ಶಾಲಾರಂಭಕ್ಕೆ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಕೊರೊನಾ ಸುರಕ್ಷೆಯೊಂದಿಗೆ ಶಾಲೆಗಳನ್ನು ಹೇಗೆ ಆರಂಭಿಸ ಬಹುದು ಎಂಬುದಕ್ಕೆ ಸಂಬಂಧಿಸಿ ಈಗಾಗಲೇ ಶಿಕ್ಷಣ ಇಲಾಖೆ ಪ್ರಮಾಣಿತ ಕಾರ್ಯಸೂಚಿ ವಿಧಾನ(ಎಸ್‌ಒಪಿ) ಸಿದ್ಧಪಡಿಸಿದೆ. ಇದಕ್ಕೆ ಆರೋಗ್ಯ ಇಲಾಖೆ ಮತ್ತು ಕಾರ್ಯಪಡೆಯ ಅನುಮೋದನೆಯೂ ಅಗತ್ಯವಿದೆ.
ಶಾಲಾರಂಭಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದ್ದರೂ ಕೇಂದ್ರ ಸರಕಾರ ಹಾಗೂ ಆರೋಗ್ಯ ಇಲಾಖೆಯ ಅನುಮತಿ ಅಗತ್ಯವಾಗಿದೆ. ಅ.15ರ ಬಳಿಕ ಪರಿಸ್ಥಿತಿ ಅವಲೋಕಿಸಿ ಶಾಲಾರಂಭಿಸಲು ಕೇಂದ್ರ ಗೃಹ ಇಲಾಖೆ ಈಗಾಗಲೇ ಅನುಮತಿ ಕಲ್ಪಿಸಿದೆ.
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಶ್ರೀರಾಮುಲು ಅವರಿಗೆ ಪತ್ರ ಬರೆದು ರಾಜ್ಯದಲ್ಲಿ ಶಾಲೆಗಳನ್ನು ಯಾವಾಗ ಪ್ರಾರಂಭಿಸಬಹುದು, ಶಾಲಾರಂಭ ಮಾಡಿದಲ್ಲಿ ಯಾವ ತರಗತಿಗಳನ್ನು ಮೊದಲು ಆರಂಭಿಸಬಹುದು, ಸಮುದಾಯ ಹಾಗೂ ಜನಪ್ರತಿನಿಧಿಗಳಿಂದ ಶಿಕ್ಷಣ ಇಲಾಖೆ ಯಾವ ರೀತಿಯಿಂದ ಸಹಕಾರ ನಿರೀಕ್ಷಿಸಬಹುದು ಎಂಬ ಬಗ್ಗೆ ಸಲಹೆ ಕೇಳಿದ್ದರು.
ತಜ್ಞರ ಸಲಹೆಯ ಆಧಾರದಲ್ಲಿ ಸರಕಾರವು ಶಾಲಾರಂಭದ ಬಗ್ಗೆ ಮುಂದಿನ ನಿರ್ಣಯ ತೆಗೆದುಕೊಳ್ಳಲು ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.