SSC: 20,000 ಹುದ್ದೆ ಆಯ್ಕೆಗೆ ಕನ್ನಡದಲ್ಲೂ ಪರೀಕ್ಷೆ ನಡೆಸಲು ಹೆಚ್ ಡಿಕೆ ಆಗ್ರಹ
ತ್ರಿಭಾಷಾ ಸೂತ್ರಕ್ಕೆ ಸಮಾಧಿ ಕಟ್ಟಲು ಕೇಂದ್ರ ಸರಕಾರ ಹೊರಟಿದೆ ಎಂದು ಅಸಮಾಧಾನ
Team Udayavani, Oct 7, 2022, 5:47 PM IST
ಬೆಂಗಳೂರು: ಕೇಂದ್ರ ಸರ್ಕಾರದಿಂದ 20 ಸಾವಿರ ನೇಮಕಾತಿ ವಿಚಾರಕ್ಕೆ ಸಂಬಂಧಿಸಿಇನ್ನೆರಡು ದಿನಗಳಲ್ಲಿ ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಗೆ ಪತ್ರ ಬರೆಯುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಮಾಧ್ಯಮಗಳ ಜತೆ ಮಾತನಾಡಿ, ಕೇವಲ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಪರೀಕ್ಷೆ ಗೆ ಅವಕಾಶ ನೀಡಲಾಗುತ್ತಿದೆ. ಇದು ಸರಿಯಲ್ಲ ಎಂದು ಕೇಂದ್ರದ ನೀತಿ ವಿರುದ್ಧ ಅಸಮಾಧಾನ ಹೊರಹಾಕಿದರು.
ಆಯಾ ರಾಜ್ಯದಲ್ಲಿ ಭಾಷಾವಾರು ಪರೀಕ್ಷೆಗೆ ಅವಕಾಶ ನೀಡಬೇಕು. ಯುಪಿಎಸ್ ಸಿ ಮಾದರಿಯಲ್ಲೇ ಅವಕಾಶ ನೀಡಬೇಕು. ಈ ಕೂಡಲೇ ಈ ನಿರ್ಧಾರವನ್ನು ವಾಪಸ್ ಪಡೆಯಬೇಕು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಇದನ್ನೂ ಓದಿ : ಪ.ಜಾತಿಗೆ 17%, ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ
ಟ್ವೀಟ್ ಮಾಡಿಯೂ ಹೆಚ್ ಡಿಕೆ ತಮ್ಮ ಅಸಮಾಧಾನವನ್ನು ಹೊರಹಾಕಿದ್ದು, ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗ (SSC) 20,000 ಹುದ್ದೆ ಆಯ್ಕೆಗೆ ಹಿಂದಿ-ಇಂಗ್ಲೀಷ್ʼನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ. ಆಯ್ಕೆಯಾದ ಅಭ್ಯರ್ಥಿಯನ್ನು ಯಾವ ರಾಜ್ಯಕ್ಕಾದರೂ ಕಳುಹಿಸಬಹುದು. ಕನ್ನಡ ಸೇರಿ ಯಾವುದೇ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶವಿಲ್ಲ. ಹಿಂದಿ ಹೇರಿಕೆ, ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ? ಎಂದು ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇಂದ್ರ ಸರಕಾರಕ್ಕೆ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕಲೇಬೇಕು ಎನ್ನುವ ಕೆಟ್ಟ ಹಠವಿದ್ದಂತೆ ಇದೆ. ಕನ್ನಡವೂ ಸೇರಿ ದಕ್ಷಿಣದ ಪ್ರಾದೇಶಿಕ ಭಾಷೆಗಳ ಬಗ್ಗೆ ಇನ್ನಿಲ್ಲದ ಅಸಹನೆ, ದ್ವೇಷ ಮೈಗೂಡಿಸಿಕೊಂಡಿದೆ ಎನಿಸುತ್ತಿದೆ. ತ್ರಿಭಾಷಾ ಸೂತ್ರಕ್ಕೆ ಹೇಗಾದರೂ ಸಮಾಧಿ ಕಟ್ಟಲೇಬೇಕೆಂದು ಹೊರಟಂತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಕ್ಕೂಟ ತತ್ವದಲ್ಲಿ ಆಡಳಿತ ನಡೆಸುವ ಪಕ್ಷಕ್ಕೇ ಒಪ್ಪಿಗೆ ಇಲ್ಲ ಎನ್ನುವುದನ್ನು ಇದು ತೋರಿಸುತ್ತಿದೆ. ಹಿಂದಿ ಭಾಷಿಗರನ್ನು ಕರ್ನಾಟಕ ಹಾಗೂ ದಕ್ಷಿಣ ಭಾರತದಲ್ಲಿ ತುಂಬುವ ದುಸ್ಸಾಹಸವಷ್ಟೇ ಇದು ಎಂದು ಕಿಡಿಕಾರಿದ್ದಾರೆ.
ಈ ವಿಷಯದಲ್ಲಿ ನಮ್ಮ 2 ಬೇಡಿಕೆಗಳಿವೆ. ಕನ್ನಡದಲ್ಲೂ ಪರೀಕ್ಷೆ ನಡೆಸಬೇಕು. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಬೇಕು. ಈ ಬದಲಾವಣೆ ನಂತರವಷ್ಟೇ ಸಿಬ್ಬಂದಿ ಆಯ್ಕೆ ಆಯೋಗ ಪರೀಕ್ಷೆ ನಡೆಸಬೇಕು ಎಂದು ಹೆಚ್ ಡಿಕೆ ಆಗ್ರಹಿಸಿದ್ದಾರೆ.
ಕನ್ನಡದಲ್ಲೇ ಪರಿಕ್ಷೆ ನಡೆಸಿದರೆ ಕರ್ನಾಟಕದ ಅನೇಕ ಪ್ರತಿಭಾವಂತ ಯುವಜನರು ಆಯ್ಕೆ ಆಗಲು ಅನುಕೂಲವಾಗುತ್ತದೆ. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರ ನೇಮಕವಾದರೆ, ಕರ್ನಾಟಕದ ಜನರಿಗೆ ಕನ್ನಡದಲ್ಲಿ ಸೇವೆ ದೊರೆಯುತ್ತದೆ. ತಪ್ಪಿದರೆ, ಕೇಂದ್ರವು ಕನ್ನಡಿಗರ ಆಗ್ರಹಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಟ್ವೀಟ್ ನಲ್ಲಿ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.