ಎಸೆಸೆಲ್ಸಿ ಮೌಲ್ಯಮಾಪನ ಆರಂಭ: ಶೇ. 70ರಿಂದ 80ರಷ್ಟು ಮೌಲ್ಯಮಾಪಕರು ಭಾಗಿ
Team Udayavani, Jul 14, 2020, 6:57 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಕೋವಿಡ್ 19 ಆತಂಕದ ನಡುವೆ ಎಸೆಸೆಲ್ಸಿ ಉತ್ತರಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಿದ್ದು, ಶೇ.70ರಿಂದ 80 ಮೌಲ್ಯಮಾಪಕರು ಭಾಗವಹಿಸಿದ್ದಾರೆ.
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೌಲ್ಯಮಾಪನ ಮುಂದೂಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಮೌಲ್ಯಮಾಪನ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಗೊಂದಲವಿಲ್ಲದೆ ನಡೆದಿದೆ.
ನಿಗದಿಪಡಿಸಿರುವ ಉತ್ತರ ಪತ್ರಿಕೆಗಳಿಗೆ ಅನುಗುಣವಾಗಿ ಶೇ.70ರಿಂದ 80ರಷ್ಟು ಮೌಲ್ಯ ಮಾಪಕರು ಮೊದಲ ದಿನ ಹಾಜರಾಗಿದ್ದಾರೆ. ಆನ್‌ಲೈನ್ ಅಂಕ ದಾಖಲೀಕರಣವೂ ನಡೆದಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕಿ ವಿ. ಸುಮಂಗಳಾ ಮಾಹಿತಿ ನೀಡಿದ್ದಾರೆ.
ಸರಕಾರವು ಎರಡು ಜಿಲ್ಲೆಗಳಲ್ಲಿ ಮಾತ್ರ ಲಾಕ್‌ಡೌನ್ ಘೋಷಣೆ ಮಾಡಿದ್ದರಿಂದ ಇಲ್ಲಿ ಮೌಲ್ಯಮಾಪನ ಮುಂದೂಡಲಾಗಿದೆ. ಉಳಿದೆಡೆ ಮುಂದುವರಿಕೆ ಅಥವಾ ಮುಂದೂಡಿಕೆ ಲಾಕ್‌ಡೌನ್ ಆದೇಶ ಬಂದ ಬಳಿಕ ಸರಕಾರದ ಮಟ್ಟದಲ್ಲಿಯೇ ತೀರ್ಮಾನವಾಗಲಿದೆ ಎಂದರು.
ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರದ್ದು
ಕೋವಿಡ್ 19 ಭೀತಿ ಮತ್ತು ಲಾಕ್‌ಡೌನ್ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಥಮ ಪಿಯುಸಿ ಪೂರಕ ಪರೀಕ್ಷೆಯನ್ನು ರದ್ದು ಮಾಡಿದೆ. ಆದರೆ ಅನಾರೋಗ್ಯ ಮೊದಲಾದ ಕಾರಣಕ್ಕಾಗಿ ಒಂದು ಪರೀಕ್ಷೆಗೂ ಹಾಜರಾಗದ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಆರಂಭದಲ್ಲಿ ಕಿರು ಪರೀಕ್ಷೆ ಮೂಲಕ ಮೌಲ್ಯಮಾಪನ ಮಾಡಲಾಗುತ್ತದೆ. ಅಧಿಕಾರಿಗಳೊಂದಿಗೆ ಚರ್ಚಿಸಿ, ಪೂರಕ ಪರೀಕ್ಷೆ ರದ್ದು ಮಾಡಿದ್ದೇವೆ.
ಪರೀಕ್ಷೆ ಬರೆದು, ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳನ್ನು ಪಾಸ್ ಮಾಡುತ್ತೇವೆ. ಹಾಗೆಯೇ ಒಂದು ಪರೀಕ್ಷೆಗೂ ಹಾಜರಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ ತೇರ್ಗಡೆ ಮಾಡಲಿದ್ದೇವೆ. ಆದರೆ ಹಾಜರಾತಿ ಕೊರತೆಯಿಂದ ಪರೀಕ್ಷೆ ಬರೆಯದವರಿಗೆ ಪರೀಕ್ಷೆ ನೀಡಲು ಸಾಧ್ಯವಿಲ್ಲ ಮತ್ತು ತೇರ್ಗಡೆ ಮಾಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.