SSLC ಪರೀಕ್ಷೆ-2 ಜೂನ್ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ
Team Udayavani, May 10, 2024, 7:40 AM IST
ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿ ಗಳ ಒಟ್ಟಾರೆ ಪ್ರದರ್ಶನ ಉತ್ತಮವಾಗಿಲ್ಲ ದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಶಾಲಾ ಶಿಕ್ಷಣ ಇಲಾಖೆ, ಮುಂದಿನ ವಾರ್ಷಿಕ ಪರೀಕ್ಷೆ 2 ಮತ್ತು 3ಕ್ಕೆ ಮಕ್ಕಳನ್ನು ಸಿದ್ಧಪಡಿಸಲು ಪರಿಹಾರ ಬೋಧನೆ ನಡೆಸಲು ಮುಂದಾಗಿದೆ.
ಪರೀಕ್ಷೆ-1ರಲ್ಲಿ ಉತ್ತಮ ಸಾಧನೆ ಮಾಡದೆ ಮುಂದಿನ ಪರೀಕ್ಷೆ ಗಳಲ್ಲಿ ತಮ್ಮ ಅಂಕಗಳನ್ನು ಉತ್ತಮ ಪಡಿಸಿಕೊಳ್ಳಲು ಬಯಸುವ, ಅನು ತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಮುಂದಿನ 1 ತಿಂಗಳಲ್ಲಿ ಪರಿಹಾರ ಬೋಧನೆ ಯನ್ನು ಶಿಕ್ಷಣ ಇಲಾಖೆ ಆಯೋಜಿಸಲಿದೆ. ವಾರ್ಷಿಕ ಪರೀಕ್ಷೆ- 2ಕ್ಕೆ ನೋಂದಣಿ ಮಾಡಿಕೊಳ್ಳಲು ಮೇ 16 ಕೊನೆಯ ದಿನವಾಗಿದೆ.
ಮರು ಮೌಲ್ಯಮಾಪನ
ಎಸೆಸೆಲ್ಸಿ ಪರೀಕ್ಷೆ-1ರ ಮೌಲ್ಯ ಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ, ಮರು ಎಣಿಕೆ ಹಾಗೂ ಮರು ಮೌಲ್ಯಮಾಪನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.
ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಅರ್ಜಿ ಸಲ್ಲಿಸಲು ಮೇ 16, ಶುಲ್ಕ ಪಾವತಿಸಲು ಮೇ 17ರ ಕೊನೆಯ ದಿನ. ಉತ್ತರ ಪತ್ರಿಕೆಗಳ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಮೇ 13ರಿಂದ ಮೇ 22ರ ವರೆಗೆ ಅರ್ಜಿ ಸಲ್ಲಿಸಬಹುದು. ಶುಲ್ಕ ಪಾವತಿಸಲು ಮೇ 23 ಕೊನೆಯ ದಿನ.
ಮರು ಎಣಿಕೆಗೆ ಭೌತಿಕವಾಗಿ ಅರ್ಜಿ ಸ್ವೀಕರಿಸುವುದನ್ನು ರದ್ದುಗೊಳಿ ಸಲಾಗಿದೆ. ಬದಲಿಗೆ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ಮರು ಎಣಿಕೆ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಂಬಂಧಪಟ್ಟ ವಿಷಯದ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿಯನ್ನು ಪಡೆಯಬೇಕು. ಸ್ಕ್ಯಾನ್ ಪ್ರತಿಯನ್ನು ಪಡೆದ ಬಳಿಕ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಿದ್ದರೆ, ಅದನ್ನೂ ಖಚಿತಪಡಿಸಿಕೊಂಡ ಬಳಿಕವಷ್ಟೇ ಮರುಎಣಿಕೆಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಇನ್ನೂ ಮರುಎಣಿಕೆಯು ಉಚಿತವಾಗಿದ್ದು ಪ್ರತ್ಯೇಕ ಶುಲ್ಕವಿರುವುದಿಲ್ಲ. ಮರು ಎಣಿಕೆ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸ ವಿದ್ದಲ್ಲಿ ಪರಿಶೀಲಿಸಿ, ಬಳಿಕ ಪರಿಷ್ಕೃತ ಪಟ್ಟಿ ಬಿಡುಗಡೆ ಮಾಡಲಾಗುವುದು.
ಸಹಾಯವಾಣಿಗೆ ಕರೆ ಮಾಡಿ
ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಯನ್ನು ಆರಂಭಿಸಲಾಗಿದೆ. ಸಹಾಯ ವಾಣಿ ಸಂಖ್ಯೆ 080-23310075, 23310076ಕ್ಕೆ ಕರೆ ಮಾಡಬಹುದು.
ವೇಳಾಪಟ್ಟಿ
ಎಸೆಸೆಲ್ಸಿ ಪರೀಕ್ಷೆ-2 ಜೂ.7ರಿಂದ 14ರ ವರೆಗೆ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಲಿವೆ.
ಜೂ.7: ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ
ಜೂ.8: ತೃತೀಯ ಭಾಷೆ (ಹಿಂದಿ ಎನ್‌ಸಿಇಆರ್‌ಟಿ), ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಎನ್‌ಎಸ್‌ಕ್ಯುಎಫ್ ವಿಷಯಗಳು
ಜೂ.10: ಗಣಿತ, ಸಮಾಜ ವಿಜ್ಞಾನ
ಜೂ.11: ಅರ್ಥಶಾಸ್ತ್ರ, ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಮೆಕಾನಿಕಲ್, ಎಂಜಿನಿಯರಿಂಗ್ ಗ್ರಾಫಿಕ್ಸ್, ಕಂಪ್ಯೂಟರ್ ಸೈನ್ಸ್ ವಿಷಯ.
ಜೂ.12: ವಿಜ್ಞಾನ, ರಾಜ್ಯಶಾಸ್ತ್ರ; ಹಿಂದೂಸ್ಥಾನಿ ಮತ್ತು ಕರ್ನಾಟಕ ಸಂಗೀತ
( ಮ. 2ರಿಂದ ಸಂ 5.15)
ಜೂ.13: ದ್ವಿತೀಯ ಭಾಷೆ, ಇಂಗ್ಲಿಷ್, ಕನ್ನಡ
ಜೂ.14: ಸಮಾಜ ವಿಜ್ಞಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.