ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಬೆಸ್ಟ್ ಆಫ್ ಲಕ್
Team Udayavani, Mar 25, 2024, 7:10 AM IST
ಬೆಂಗಳೂರು: ವಿದ್ಯಾರ್ಥಿ ಜೀವನದ ಮಹತ್ವದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-1 ಸೋಮವಾರದಿಂದ ಆರಂಭಗೊಳ್ಳಲಿದ್ದು ಏ. 6ರವರೆಗೆ ನಡೆಯಲಿದೆ. ಮೊದಲ ದಿನ ಪ್ರಥಮ ಭಾಷೆಯ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30 ರಿಂದ ಪರೀಕ್ಷೆ ಆರಂಭಗೊಳ್ಳಲಿದೆ.
ಈ ಬಾರಿಯ ಪರೀಕ್ಷೆಗೆ 4,41,910 ಬಾಲಕರು ಮತ್ತು 4,28,058 ಬಾಲಕಿಯರು ಸೇರಿ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ 8,10,368 ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪರೀಕ್ಷೆ ನಡೆಸುವ ಜವಾಬ್ದಾರಿ ಹೊತ್ತಿದ್ದು ಒಟ್ಟು 2,750 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿ/ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.
ತನ್ಮೂಲಕ ಪರೀಕ್ಷಾ ಅಕ್ರಮ, ಪ್ರಶ್ನೆ ಪತ್ರಿಕೆ ಸೋರಿಕೆ ಮುಂತಾದ ಅಕ್ರಮ ಚಟುವಟಿಕೆ ನಡೆಯದಂತೆ ಬಿಗಿ ಕ್ರಮ ಕೈಗೊಳ್ಳಲಾಗಿದೆ.ನಿರ್ದೇಶಕರು ಮತ್ತು ಸಹ ನಿರ್ದೇಶಕರ ವೃಂದದ ಅಧಿಕಾರಿಗಳನ್ನು ಜಿಲ್ಲಾ ಮೇಲುಸ್ತುವಾರಿ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಡಯಟ್ ಪ್ರಾಂಶುಪಾಲರನ್ನು ಆಯಾ ಜಿಲ್ಲೆಗೆ ಜಿಲ್ಲಾ ವೀಕ್ಷಕರನ್ನಾಗಿ ನೇಮಿಸಲಾಗಿದೆ. ಡಯಟ್ ಉಪನ್ಯಾಸಕರನ್ನು ಪರೀûಾ ಕೇಂದ್ರಗಳಿಗೆ ವಿಚಕ್ಷಣ ಜಾಗೃತ ದಳದ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.
ಜಿಲ್ಲಾಧಿಕಾರಗಳ ಹಂತದಲ್ಲಿ ವಿಚಕ್ಷಣ ಜಾಗೃತದಳ ನೇಮಿಸಲು ತಿಳಿಸಲಾಗಿದೆ. ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಕನ್ನಡ, ಆಂಗ್ಲ, ಹಿಂದಿ, ತೆಲುಗು, ತಮಿಳು, ಉರ್ದು ಮತ್ತು ಮರಾಠಿ ಸೇರಿ ಒಟ್ಟು 7 ಮಾಧ್ಯಮಗಳಲ್ಲಿ ಪರೀಕ್ಷೆ ನಡೆಯುತ್ತಿದೆ.
ಎಸ್‌ಎಸ್‌ಎಲ್‌ಸಿಯಲ್ಲಿ ಮೊದಲ ಬಾರಿಗೆ ಮೂರು ಅಂತಿಮ ಪರೀಕ್ಷೆ ಬರೆಯುವ ಅವಕಾಶವನ್ನು ನೀಡಲಾಗಿದೆ. ಸೋಮವಾರದಿಂದ ಮೊದಲ ಪರೀಕ್ಷೆ ಆರಂಭಗೊಳ್ಳಲಿದ್ದು ಏ.6ರವರೆಗೆ ನಡೆಯಲಿದೆ.ಏತನ್ಮಧ್ಯೆ ಹೈಕೋರ್ಟ್‌ನ ಅನುಮತಿಯ ಮೇರೆಗೆ ಸೋಮವಾರದಿಂದ 5,8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಯು ನಡೆಯಲಿದೆ.
ಸಿಸಿ ಕ್ಯಾಮರಾ ಅಳವಡಿಕೆ
ಎಲ್ಲ 2,750 ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತೆ ವಹಿಸಲಾಗಿದ್ದು ಹೆಚ್ಚುವರಿ ನಿಗಾ ಇಡುವ ಉದ್ದೇಶದಿಂದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಸಿಸಿಟಿವಿ ಕ್ಯಾಮರಾ ಮೂಲಕ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಪರೀಕ್ಷಾ ಅವ್ಯವಹಾರಗಳು ನಡೆದರೂ ಪತ್ತೆ ಹಚ್ಚಲಾಗುತ್ರದೆ ಎಂದು ಪರೀಕ್ಷಾ ಮಂಡಳಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.