ಜೂ.18ರಂದು ಪಿಯುಸಿ, ಜೂ. 25ರಿಂದ ನಡೆಯಲಿದೆ ಎಸ್ ಎಸ್ ಎಲ್ ಸಿ ಪರೀಕ್ಷೆ
Team Udayavani, May 18, 2020, 3:05 PM IST
ಬೆಂಗಳೂರು: ಕೋವಿಡ್-19 ಲಾಕ್ ಡೌನ್ ಕಾರಣದಿಂದ ಮುಂದೂಡಲಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ 4 ರವರೆಗೆ, ಪಿಯುಸಿಯ ಇಂಗ್ಲೀಷ್ ಪರೀಕ್ಷೆಯನ್ನು ಜೂನ್ 18ರಂದು ನಡೆಸಲು ಸರಕಾರ ತೀರ್ಮಾನಿಸಿದೆ.
ಎಸ್ ಎಸ್ ಎಲ್ ಸಿಯ ಇಂಗ್ಲೀಷ್, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆಗಳಿಗೆ ಒಂದೊಂದು ದಿನದ ಅಂತರವಿರಲಿದೆ. ಒಟ್ಟಾರೆ ಎಲ್ಲಾ ಪರೀಕ್ಷೆಗಳು 10 ದಿನದಲ್ಲಿ ಮುಗಿಯಲಿದೆ ಎಂದರು.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಸಚಿವ ಸುರೇಶ್ ಕುಮಾರ್, ಎಸ್ಸೆಸ್ಸೆಲ್ಸಿ ಪರೀಕ್ಷೆ ಬದಲಾದ ಪರಿಸ್ಥಿತಿಯಲ್ಲಿ ಹೆಚ್ಚುವರಿ ಕೊಠಡಿ ಬಳಸುತ್ತೇವೆ. 2879 ಪರೀಕ್ಷಾ ಕೇಂದ್ರಗಳಲ್ಲಿ 43720 ಕೊಠಡಿ ಬಳಸುತ್ತಿದ್ದೇವೆ. ಆರೋಗ್ಯ ಇಲಾಖೆಯ ಅಧಿಕಾರಿಗಳ ಸಲಹೆ ಪಡೆದು ಪ್ರತಿ ಸಭಾಂಗಣದಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡುತ್ತೇವೆ. ಪ್ರತಿ ವಿದ್ಯಾರ್ಥಿ ಮಾಸ್ಕ್ ಕಡ್ಡಾಯ ಮಾಡುತ್ತಿದ್ದೇವೆ. ಇದಕ್ಕಾಗಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ನಿಂದ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಮಾಸ್ಕ್ ನೀಡಲಿದ್ದಾರೆ. ಶಿವನ ಹಳ್ಳಿ ರಾಮಕೃಷ್ಣ ಮಿಷನ್ ನಿಂದ 2 ಲಕ್ಷ ಮಾಸ್ಕ್ ಬೆಂಗಳೂರು ದಕ್ಷಿಣ, ರಾಮನಗರಕ್ಕೆ ನೀಡಲಿದ್ದಾರೆ. ಒಬ್ಬೊಬ್ಬ ವಿದ್ಯಾರ್ಥಿಗೆ ಎರಡು ಮಾಸ್ಕ್ ಸಿಗಲಿದೆ ಎಂದರು. ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಇದ್ದರೆ ಬೇರೆ ಕಡೆ ಪರೀಕ್ಷೆ ಬರೆಯಲು ಅವಕಾಶ ಮಾಡುತ್ತೇವೆ. ಪರೀಕ್ಷೆ ಆರಂಭಕ್ಕೂ ಮೊದಲು ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡುತ್ತೇವೆ ಎಂದರು.
ಮೊರಾರ್ಜಿ ದೇಸಾಯಿ ಶಾಲೆ, ಎಸ್ ಸಿ, ಎಸ್ ಟಿ ಹಾಸ್ಟಲ್ ಗಳನ್ನು ಕ್ವಾರಂಟೈನ್ ಮಾಡಿರುವ ಕಾರಣ ಅಲ್ಲಿನ ವಿದ್ಯಾರ್ಥಿಗಳು ಹತ್ತಿರದ ಶಾಲೆಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಗುವುದು. ವಲಸೆ ಕಾರ್ಮಿಕರ ಮಕ್ಕಳಿಗೆ ಕೂಡಾ ಇದೇ ರೀತಿ ವ್ಯವಸ್ಥೆ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್ ಆಗಲಿ: ವಿ.ಸೋಮಣ್ಣ
BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್
Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…
Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.