ಎಸ್ಸೆಸ್ಸೆಲ್ಸಿ ಪೂರ್ವಭಾವಿ ಪ್ರಶ್ನೆ ಪತ್ರಿಕೆಯೂ ಸೋರಿಕೆ
Team Udayavani, Feb 20, 2020, 3:04 AM IST
ಬೆಂಗಳೂರು: ಎಸ್ಸೆಸ್ಸೆಲ್ಸಿ ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟು ವಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವಿಫಲವಾಗಿದೆ. ಎಸ್ಸೆಸ್ಸೆಲ್ಸಿ ಪೂರ್ವಭಾವಿ ಪರೀಕ್ಷೆಗೆ ರಾಜ್ಯದಿಂದಲೇ ಪ್ರಶ್ನೆಪತ್ರಿಕೆ ಒದಗಿಸಲಾಗಿದೆ. ಮಂಗಳವಾರ ನಡೆದ ಗಣಿತ ವಿಷಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಬೆನ್ನಲ್ಲೇ ಬುಧವಾರ ಬಳ್ಳಾರಿಯಲ್ಲಿ ಆಂಗ್ಲ ಭಾಷೆ ಪ್ರಶ್ನೆ ಪತ್ರಿಕೆಯೂ ಸೋರಿಕೆಯಾಗಿದೆ.
ಬುಧವಾರ ಎಸ್ಸೆಸ್ಸೆಲ್ಸಿ ಪೂರ್ವಭಾವಿ ಪರೀಕ್ಷೆಯ ಇಂಗ್ಲಿಷ್ ಪರೀಕ್ಷೆ ನಡೆಸಲಾ ಗಿತ್ತು. ಇದರ ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆ ಆಗಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಈ ಬಾರಿ ಆ್ಯಪ್ ಮೂಲಕ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿರುವುದು ಇನ್ನಷ್ಟು ಆತಂಕ ಮೂಡಿಸಿದೆ.
ಈ ಬಗ್ಗೆ ಮಂಡಳಿಯಿಂದ ದೂರು ನೀಡಿರುವುದು ಹೊರತುಪಡಿಸಿ ಬೇರ್ಯಾವುದೇ ಕ್ರಮ ಆಗಿಲ್ಲ. ಪರೀಕ್ಷೆ ಯನ್ನು ಕಟ್ಟುನಿಟ್ಟಾಗಿ ನಡೆಸಲು ಸರ್ಕಾರ ದಿಂದ ಹಾಗೂ ಮಂಡಳಿಯಿಂದ ಸೂಚನೆ ನೀಡಿದ ಬಳಿಕವೂ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವುದು ಮುಂದಿನ ತಿಂಗಳಲ್ಲಿ ನಡೆಯಲಿರುವ ವಾರ್ಷಿಕ ಪರೀಕ್ಷೆ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.
ಬುಧವಾರ ವಾಟ್ಸಪ್ ಹಾಗೂ ಇನ್ನಿತರ ಸೋಷಿಯಲ್ ಮೀಡಿಯಾದಲ್ಲಿ ಇಂಗ್ಲಿಷ್ ಪ್ರಶ್ನೆ ಪತ್ರಿಕೆ ವೈರಲ್ ಆಗಿತ್ತು. ಪ್ರಶ್ನೆ ಪತ್ರಿಕೆ ಲೀಕ್ ಆದರೂ, ಬುಧವಾರ ಬೆಳಗ್ಗೆ 9.30ರಿಂದ ಪರೀಕ್ಷೆ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಿದ್ದೇವೆ ಮತ್ತು ವಾರ್ಷಿಕ ಪರೀಕ್ಷೆಯನ್ನು ಇನ್ನಷ್ಟು ಕಟ್ಟುನಿಟ್ಟಾಗಿ ನಡೆಸುವುದಾಗಿ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.