ಆಗಸ್ಟ್ ಮೊದಲ ವಾರ ಎಸ್ಎಸ್ಎಲ್ ಸಿ ಫಲಿತಾಂಶ: ಸಚಿವ ಸುರೇಶ್ ಕುಮಾರ್
Team Udayavani, Jul 20, 2020, 5:07 PM IST
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸೋಮವಾರ ಬೆಂಗಳೂರು ನಗರದ ವಿವಿಧೆಡೆಯ ಐದು ಎಸ್ಎಸ್ಎಲ್ ಸಿ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿ ಮೌಲ್ಯಮಾಪನ ಪ್ರಕ್ರಿಯೆಯನ್ನು ವೀಕ್ಷಿಸಿ, ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯಾದ್ಯಂತ 220 ಮೌಲ್ಯಮಾಪನ ಕೇಂದ್ರದಲ್ಲಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದೆ ಎಂದರು.
ಇದರಲ್ಲಿ ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನು ಎರಡು ದಿನಗಳಲ್ಲಿ 180 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಮುಗಿಯಲಿದೆ. ಬೆಂಗಳೂರು ಮಹಾನಗರದ 28 ಕೇಂದ್ರಗಳಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಮೌಲ್ಯಮಾಪನಕ್ಕೆ ಶೇ. 45ರಷ್ಟು ಶಿಕ್ಷಕರು ಹಾಜರಾಗಿದ್ದು, ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಮೌಲ್ಯಮಾಪನ ನಡೆಯುತ್ತಿದೆ ಎಂದರು.
ಇನ್ನು 10 ದಿನಗಳಲ್ಲಿ ರಾಜ್ಯದ ಎಲ್ಲಾ ಕೇಂದ್ರಗಳ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, 8.5 ಲಕ್ಷ ವಿದ್ಯಾರ್ಥಿಗಳ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸುವ ಆಲೋಚನೆ ಹೊಂದಲಾಗಿದೆ ಎಂದರು.
ಇಂದು ಸಚಿವರು ಬೆಂಗಳೂರಿನ ಮಲ್ಲೇಶ್ವರದ ಸ್ಟೆಲ್ಲಾ ಮೇರಿಸ್ ಪ್ರೌಢಶಾಲೆ, ಎಂಎಲ್ಎ ಪ್ರೌಢಶಾಲೆ, ನಿರ್ಮಲಾರಾಣಿ ಪ್ರೌಢಶಾಲೆ, ರಾಜಾಜಿನಗರದ ಎಸ್ ಜೆ ಆರ್ ಸಿ ಕಾಲೇಜು, ಸೇಂಟ್ ಆನ್ಸ್ ಪ್ರೌಢಶಾಲೆಗಳ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿ ಮೌಲ್ಯಮಾಪನ ಪ್ರಕ್ರಿಯೆ ವೀಕ್ಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.