ಜನರಿಗೆ ವ್ಯವಸ್ಥೆಯ ಬಗ್ಗೆ ವಿಶ್ವಾಸ ಮೂಡಿಸುವ ರೀತಿಯಲ್ಲಿ SSLC ಪರೀಕ್ಷೆ: ಸುರೇಶ್ ಕುಮಾರ್
Team Udayavani, Jun 10, 2020, 1:32 PM IST
ಬೆಂಗಳೂರು: ರಾಜ್ಯದ ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಗಳನ್ನು ಇಡೀ ಸಮಾಜ ಎದುರು ನೋಡುತ್ತಿದ್ದು, ಯಾವುದೇ ಅಚಾತುರ್ಯಗಳಿಗೆ ಅವಕಾಶ ನೀಡದೇ ಪರೀಕ್ಷೆಗಳನ್ನು ಯಶಸ್ವಿಯಾಗಿ ನಿರ್ವಹಿಸಬೇಕೆಂದು ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎಸ್ಎಸ್ಎಲ್ ಸಿ ಪರೀಕ್ಷಾ ಪೂರ್ವ ಸಿದ್ಧತೆಯ ಕುರಿತಂತೆ ರಾಜ್ಯಾದ್ಯಂತ 31 ಜಿಲ್ಲಾ ಕೇಂದ್ರಗಳಿಗೆ ಕಳೆದ ಹದಿನೈದು ದಿನಗಳಲ್ಲಿ ಸುಮಾರು ಐದು ಸಾವಿರ ಕಿಲೋ ಮೀಟರ್ ಗಳಷ್ಟು ಸಂಚಾರ ಕೈಗೊಂಡು, ಸಭೆ ನಡೆಸಿ ನಿರ್ದೇಶನ ನೀಡಿರುವ ಸಚಿವ ಸುರೇಶ್ ಕುಮಾರ್, ಇಂದು ತಮ್ಮ ಅಭಿಯಾನದ ಕಡೆಯ ಭಾಗವಾಗಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾಡಳಿತಗಳೊಂದಿಗೆ ಸಭೆ ನಡೆಸಿದರು.
ಉಚ್ಛ ನ್ಯಾಯಾಲಯದ ನಿರ್ದೇಶನದ ಅನುಸಾರ ನಡೆಯುತ್ತಿರುವ ಪರೀಕ್ಷೆಗಳು ಸಮಾಜಕ್ಕೆ ಭರವಸೆಯನ್ನು ಮೂಡಿಸುವ ರೀತಿಯಲ್ಲಿ ಅಚ್ಚುಕಟ್ಟಾಗಿ ನಿರ್ವಹಣೆಯಾಗಬೇಕು. ಪರೀಕ್ಷೆಗಳು ನಡೆಯುತ್ತಿರುವ ಇದೊಂದು ವಿಶಿಷ್ಟ ಸಾಮಾಜಿಕ ಸಂದರ್ಭವನ್ನು ಪ್ರತಿಷ್ಠೆಯಾಗಿ ಪರಿಗಣಿಸದೇ ನಮ್ಮ ಸಾಮಾಜಿಕ ಬದ್ಧತೆಗೆ ಸವಾಲಾಗಿ ಪರಿಗಣಿಸಿ ಎಲ್ಲ ಅಧಿಕಾರಿಗಳು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಬೇಕೆಂದು ಸಚಿವರು ಸೂಚಿಸಿದರು.
ವಿದ್ಯಾರ್ಥಿ ಪೋಷಕರ ನಿರೀಕ್ಷೆಗೆ ಅನುಗುಣವಾಗಿ ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುಸೂತ್ರವಾಗಿ ನಡೆಯಬೇಕೆಂದ ಶಿಕ್ಷಣ ಸಚಿವ ಸುರೇಶ್ ಕುಮಾರ್
ಪರೀಕ್ಷೆಗೆ ಮುಂಚೆಯೇ ಎಲ್ಲ ಪರೀಕ್ಷಾ ಕೇಂದ್ರಗಳನ್ನು ಸ್ಥಳೀಯ ಆಡಳಿತ ಸಂಸ್ಥೆಗಳ ಸಹಕಾರದಿಂದ ಸ್ಯಾನಿಟೈಜ್ ಮಾಡಬೇಕಲ್ಲದೇ, ಪ್ರತಿ ದಿನದ ಪರೀಕ್ಷೆಯ ಬಳಿಕವೂ ಸ್ಯಾನಿಟೈಜ್ ಕ್ರಮಗಳನ್ನು ಅನುಸರಿಸಬೇಕೆಂದು ಅವರು ಸೂಚಿಸಿದರು.
ಜೂನ್ 12 ರಿಂದ 17 ರವರೆಗೆ ದೂರದರ್ಶನ ದ ಚಂದನದಲ್ಲಿ ವಿಶೇಷ ಪುನರ್ಮನನ
ಪ್ರಶ್ನೆ ಪತ್ರಿಕೆಯಾಧಾರಿತವಾದ ವಿಶೇಷ ಪುನರ್ಮನನ ತರಗತಿಗಳನ್ನು ಇದೇ ತಿಂಗಳ 12 ರಿಂದ 17 ರವರೆಗೆ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತಿರುವ ಬಗ್ಗೆ ಮಾಹಿತಿ ನೀಡಿದ ಸಚಿವ ಸುರೇಶ್ ಕುಮಾರ್, ಎಲ್ಲ ವಿದ್ಯಾರ್ಥಿಗಳು ಇದರ ಸದ್ಬಳಕೆಯನ್ನು ಮಾಡಿಕೊಳ್ಳಬೇಕೆಂದು ಹೇಳಿದರು.
ಆರೋಗ್ಯ ಇಲಾಖೆಯ ಸಹಕಾರವನ್ನು ಸರಿಯಾಗಿ ಬಳಸಿಕೊಳ್ಳಿ
ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯು ಇಂತಹ ಸಂದರ್ಭದಲ್ಲಿ ಶಿಕ್ಷಣ ಇಲಾಖೆಗೆ ತನ್ನ ಸಂಪೂರ್ಣ ಸಹಕಾರವನ್ನು ನೀಡುತ್ತಿದ್ದು, ಮಕ್ಕಳು ಹಾಗೂ ಪೋಷಕರಲ್ಲಿ ಭರವಸೆಯನ್ನು ಮೂಡಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ನಿಟ್ಟಿನಲ್ಲಿ ಮಾಹಿತಿ ಕರಪತ್ರಗಳು, ವಿಡಿಯೋ ಸಂದೇಶಗಳನ್ನು ರಾಜ್ಯಾದ್ಯಂತ ಪ್ರತಿ ಪೋಷಕ, ವಿದ್ಯಾರ್ಥಿಗೆ ತಲುಪಿಸುವ ಕ್ರಮಕ್ಕೆ ಮುಂದಾಗಲಾಗುವುದೆಂದ ಸಚಿವರು, ಶಿಕ್ಷಣ ಇಲಾಖೆಯ ಸಿಬ್ಬಂದಿಯು ಇಲಾಖೆಯ ಈ ಸದಾಶಯವನ್ನು ವಿದ್ಯಾರ್ಥಿ-ಪೋಷಕರಿಗೆ ತಲುಪಿಸುವ ವಾಹಕರಾಗಿ ಕಾರ್ಯ ನಿರ್ವಹಿಸಬೇಕೆಂದು ಹೇಳಿದರು.
ಶಿಕ್ಷಣ ಇಲಾಖೆ ಆಯುಕ್ತ ಡಾ.ಜಗದೀಶ್, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಈ ಜಿಲ್ಲೆಗಳ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.