ಇಂದಿನಿಂದ 2ನೇ ಡೋಸ್ ಲಸಿಕೆ ಆರಂಭ
Team Udayavani, Feb 15, 2021, 12:49 AM IST
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ (ಫೆ.15) ಕೊರೊನಾ ಲಸಿಕೆ ಎರಡನೇ ಡೋಸ್ ವಿತರಣೆ ಆರಂಭವಾಗುತ್ತಿದೆ. ಮೊದಲ ಡೋಸ್ ಪಡೆದು 28 ದಿನ ಪೂರೈಸಿದವರಿಗೆ ಎರಡನೇ ಡೋಸ್ ನೀಡಲಾಗುತ್ತಿದೆ.
ಈ ಕುರಿತು ಆರೋಗ್ಯ ಇಲಾಖೆಯು ರವಿವಾರ ಜಿಲ್ಲಾವಾರು ಸಭೆ ನಡೆಸಿದೆ. 2ನೇ ಡೋಸ್‌ಗೆ ಅರ್ಹರಾಗಿರುವ ಫಲಾನುಭವಿಗಳ ಮಾಹಿತಿಯನ್ನು ಅಪ್‌ಲೋಡ್ ಮಾಡುವಂತೆ ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ (ಆರ್‌ಸಿಎಚ್) ಅಧಿಕಾರಿ ಗಳಿಗೆ ಸೂಚಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಮಾಹಿತಿ ಕೊರತೆಯಿಂದ ಪೋರ್ಟಲ್‌ಗೆ ಹೆಸರನ್ನು ನೀಡಲು ಸಾಧ್ಯವಾಗಿಲ್ಲ. ಅಂತಹ ಕಡೆಗಳಲ್ಲಿ ಒಂದು ದಿನ ತಡವಾಗಿ ಎರಡನೇ ಡೋಸ್ ಆರಂಭವಾಗಲಿದೆ. ಎರಡನೇ ಡೋಸ್ ಪಡೆಯುವುದು ಒಂದೆರಡು ದಿನ ವ್ಯತ್ಯಯವಾದರೂ ಸಮಸ್ಯೆಯಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತಿಕಾಯ ಉತ್ಪತ್ತಿಗೆ 15 ದಿನ :
ಎರಡನೇ ಡೋಸ್ ಪಡೆದ 15 ದಿನಗಳ ಬಳಿಕ ದೇಹದಲ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಡುವ ಪ್ರತಿಕಾಯಗಳು ಉತ್ಪತ್ತಿಯಾಗುತ್ತವೆ. ಆದ್ದರಿಂದ ಮಾಸ್ಕ್ ಧರಿಸುವುದನ್ನು ಮುಂದುವರಿಸಬೇಕು ಎಂದು ವೈದ್ಯರು ತಿಳಿಸಿದ್ದಾರೆ.
ಶೇ. 47ರಷ್ಟು ಗುರಿ ಸಾಧನೆ :
ರಾಜ್ಯದಲ್ಲಿ ಈವರೆಗೆ 5.17 ಲಕ್ಷ ಮಂದಿ ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ. 11.08 ಲಕ್ಷ ಮಂದಿಯನ್ನು ಲಸಿಕೆಗೆ ಆಹ್ವಾನಿಸಿದ್ದು, ಆ ಮೂಲಕ ಒಟ್ಟಾರೆ ಶೇ.47ರಷ್ಟು ಮಾತ್ರ ಗುರಿ ಸಾಧನೆಯಾಗಿದೆ. ಅದರಲ್ಲೂ ಆರೋಗ್ಯ ಕಾರ್ಯಕರ್ತರಲ್ಲಿ ಶೇ. 53, ಇತರ ಇಲಾಖೆಯ ಮುಂಚೂಣಿ ಕಾರ್ಯಕರ್ತರಲ್ಲಿ ಶೇ.30 ರಷ್ಟು ಗುರಿಸಾಧನೆಯಾಗಿದೆ. 15 ಅಡ್ಡಪರಿಣಾಮ ಪ್ರಕರಣಗಳು ವರದಿಯಾಗಿವೆ. ಮುಂದಿನ ಒಂದು ವಾರ ಮೊದಲ ಡೋಸ್ ನೀಡುವ ಪ್ರಕ್ರಿಯೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.