ಐಟಿಐ ಕಾಲೇಜುಗಳಲ್ಲಿ 2011 ಹುದೆ ªಭರ್ತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ
Team Udayavani, Mar 17, 2017, 7:04 AM IST
ವಿಧಾನಪರಿಷತ್: ರಾಜ್ಯದ ಐಟಿಐ ಕಾಲೇಜುಗಳಲ್ಲಿ ಖಾಲಿಯಿರುವ 2011 ಹುದ್ದೆ ಭರ್ತಿಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಪ್ರಶ್ನೋತ್ತರ ಚರ್ಚೆ ವೇಳೆ ಬಿಜೆಪಿಯ ಮಹಾಂತೇಶ ಕವಟಗಿ ಮಠ ಪ್ರಶ್ನೆಗೆ ಉತ್ತರಿಸಿ, ರಾಜ್ಯದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಬಹಳಷ್ಟು ಹುದ್ದೆಗಳು ಖಾಲಿಯಿರುವುದು ನಿಜ. ತರಬೇತಿಗೆ ಅಗತ್ಯವಾದ ಸಲಕರಣೆಗಳೆಲ್ಲ ಇದ್ದು, ಅತಿಥಿ ಉಪನ್ಯಾಸಕರನ್ನು ನೇಮಿಸಲಾಗಿದೆ. ತುರ್ತು ಅಗತ್ಯವಿರುವ 2011 ಹುದ್ದೆ ಭರ್ತಿ ಪ್ರಸ್ತಾವ ಹಣಕಾಸು ಇಲಾಖೆಗೆ ಸಲ್ಲಿಸಲಾಗಿದೆ. ಒಪ್ಪಿಗೆ ದೊರೆತ ಕೂಡಲೇ ನೇಮಕ ಮಾಡಿಕೊಳ್ಳಲಾಗುವುದು ಎಂದರು.
2014-15ನೇ ಸಾಲಿನಲ್ಲಿ 100 ಹೊಸ ಐಟಿಐ ಕಾಲೇಜು ಆರಂಭಿಸಲಾಯಿತು. 55 ಕಡೆ ಸರ್ಕಾರಿ ಕಟ್ಟಡಗಳಲ್ಲಿ, 45 ಕಡೆ ಬಾಡಿಗೆ ಕಟ್ಟಡದಲ್ಲಿ ಸ್ಥಳಾವಕಾಶ ಕಲ್ಪಿಸಲಾಗಿದೆ. ಸರ್ಕಾರಿ ಭೂಮಿ ಲಭ್ಯವಾದ ಕೂಡಲೇ ಸ್ವಂತ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು. ಇದಕ್ಕೂ ಮೊದಲು ಮಾತನಾಡಿದ ಮಹಾಂತೇಶ ಕವಟಗಿಮಠ, “100 ಐಟಿಐ ಕಾಲೇಜುಗಳು
ಶುರುವಾದರೂ ಉಪನ್ಯಾಸಕರು, ತರಬೇತಿದಾರರ ಕೊರತೆ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತಿದೆ. ಶೇ.50ರಷ್ಟು ಹುದ್ದೆಗಳು ಖಾಲಿಯಿರುವುದು ಆತಂಕದ ವಿಷಯ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
MUST WATCH
ಹೊಸ ಸೇರ್ಪಡೆ
Shirva: ಹಿಂದೂ ಜೂನಿಯರ್ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.