![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 27, 2021, 7:20 AM IST
ದಾವಣಗೆರೆ: ವಿವಿಧ ಸಮುದಾಯಗಳು ಮೀಸಲು ನೀಡಬೇಕು ಎಂದು ಆಗ್ರಹಿಸುತ್ತಿವೆ. ಅದಕ್ಕೆ ಪೂರಕವಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಜಾತಿಯೇ ಗೊತ್ತಿಲ್ಲದ ಅನಾಥ ಮಕ್ಕಳನ್ನು “ವಿಶೇಷ ವರ್ಗ’ಕ್ಕೆ ಸೇರಿಸಲು ಸಜ್ಜಾಗಿದೆ.
ಜಾತಿ ಗೊತ್ತಿಲ್ಲದೆ, ಜಾತಿ ಹಾಗೂ ಆದಾಯ ಪ್ರಮಾಣಪತ್ರ ಸಿಗದೆ ಪರದಾಡುತ್ತಿರುವ ಅನಾಥ ಮಕ್ಕಳಿಗೆ ಶಾಶ್ವತ ಪರಿಹಾರ ಒದಗಿಸುವ ದಿಸೆಯಲ್ಲಿ ಸರಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಈ ಕ್ರಮಕ್ಕೆ ಮುಂದಾಗಿದೆ.
ವಿಶೇಷ ಸೌಲಭ್ಯಕ್ಕೆ ಶಿಫಾರಸು :
ನೆರೆಯ ರಾಜ್ಯಗಳಾಗಿರುವ ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಇತರ ರಾಜ್ಯಗಳಲ್ಲಿ ಅನಾಥ ಮಕ್ಕಳ ಶಿಕ್ಷಣ, ಉದ್ಯೋಗ ದೊರಕಿ ಸುವ ಜವಾಬ್ದಾರಿಯನ್ನು ಸರಕಾರಗಳೇ ಹೊತ್ತಿವೆ. ಇದೇ ಮಾದರಿಯಲ್ಲಿ ರಾಜ್ಯದಲ್ಲಿಯೂ ಕೆಲಸವಾಗ ಬೇಕು ಎಂದು ಶಿಫಾರಸು ಮಾಡಲು ಆಯೋಗ ಕಾರ್ಯೋ ನ್ಮುಖವಾಗಿದೆ.
ಕಾನೂನು ಆಯೋಗ ಸಲಹೆ:
ಜಾತಿ ಗೊತ್ತಿಲ್ಲದ ಅನಾಥ ಮಕ್ಕಳಿಗೆ “ಜಾತಿ ರಹಿತ ವರ್ಗ’ ಎಂದು ವಿಶೇಷವಾಗಿ ಗುರುತಿಸಿ ಅವರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಬೇಕು. ಇದರಿಂದ ಅನಾಥ ಮಕ್ಕಳ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಸುಲಭ ವಾಗಿ ಮೀಸಲಾತಿ ದೊರೆತು ಮುಖ್ಯವಾಹಿನಿಗೆ ಬರಲು ಸಾಧ್ಯ ವಾಗುತ್ತದೆ ಎಂದು ರಾಜ್ಯ ಕಾನೂನು ಆಯೋಗ ಈ ಹಿಂದೆಯೇ ಸರಕಾರಕ್ಕೆ ಸಲಹೆ ನೀಡಿತ್ತು. ಸರಕಾರದ ಸೌಲಭ್ಯಕ್ಕೆ ಜಾತಿ ಪ್ರಮಾಣ ಪತ್ರ ಪ್ರಮುಖ ವಾಗಿದೆ. ಜಾತಿ ಗೊತ್ತಿಲ್ಲದ ಕಾರಣ ಸೌಲಭ್ಯ ವಂಚಿತ ಅನಾಥ ಮಕ್ಕಳಿಗೆ ಆಯೋಗದ ಈ ಕಾರ್ಯ ಹೆಚ್ಚು ಅನುಕೂಲ ಕಲ್ಪಿಸಲಿದೆ ಎಂದು ನಿರೀಕ್ಷಿಸಲಾಗಿದೆ.
ದಾವಣಗೆರೆಯಿಂದ ಆರಂಭ :
ಮಧ್ಯ ಕರ್ನಾಟಕ ಭಾಗದ ದಾವಣಗೆರೆ ಜಿಲ್ಲೆ ಯಿಂದಲೇ ಅನಾಥ ಮಕ್ಕಳ ಸಮೀಕ್ಷೆ ಆರಂಭಿಸಲಾಗಿದೆ. ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ನೇತೃತ್ವದ ತಂಡ ನಗರದ ವೀರೇಶ್ವರ ಪುಣ್ಯಾಶ್ರಮದ ಅನಾಥ ಮಕ್ಕಳನ್ನು ಭೇಟಿಯಾಗುವ ಮೂಲಕ ಚಾಲನೆ ನೀಡಿದೆ.
ರಾಜ್ಯದ ಅನಾಥಾಶ್ರಮಗಳಲ್ಲಿರುವ ಸಾವಿರಾರು ಮಕ್ಕಳಿಗೆ ತಮ್ಮ ಜಾತಿ ಗೊತ್ತಿಲ್ಲದ್ದರಿಂದ ಪ್ರಮಾಣಪತ್ರ ಸಿಗದೆ ತೊಂದರೆ ಯಲ್ಲಿದ್ದಾರೆ. ಅದಕ್ಕೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ವಿಶೇಷ ವರ್ಗವೆಂದು ಪರಿಗಣಿಸುವ ಬಗ್ಗೆ ಶೀಘ್ರ ಸರಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ. -ಕೆ. ಜಯಪ್ರಕಾಶ ಹೆಗ್ಡೆ ,ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ
-ಎಚ್.ಕೆ. ನಟರಾಜ
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.