ಖಾತೆ ಹಂಚಿಕೆಗೆ ವೇಣು ಸರ್ಕಸ್
Team Udayavani, Dec 26, 2018, 5:45 AM IST
ಬೆಂಗಳೂರು: ಸಂಪುಟ ಪುನಾರಚನೆಯಾಗಿ ನಾಲ್ಕು ದಿನ ಕಳೆದರೂ ಪ್ರಬಲ ಖಾತೆಗಳಿಗೆ ನೂತನ ಸಚಿವರು ಪಟ್ಟು ಹಿಡಿದಿರುವುದರಿಂದ ಗೊಂದಲ ನಿವಾರಿಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಬುಧವಾರ ರಾಜ್ಯ ನಾಯಕರ ಜತೆ ಸಭೆ ನಡೆಸಲು ನಿರ್ಧರಿಸಿದ್ದಾರೆ. ಮಂಗಳವಾರ ಸಂಜೆಯೇ ಬೆಂಗಳೂರಿಗೆ ಆಗಮಿಸಿರುವ ಕೆ.ಸಿ. ವೇಣುಗೋಪಾಲ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ್ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವೆ ಎಂದು ಹೇಳಿದ್ದ ರಮೇಶ್ ಜಾರಕಿಹೊಳಿ, ಸಂಧಾನ ಮಾತುಕತೆಗೆ ವೇದಿಕೆ ಸಜ್ಜಾಗುತ್ತಿರುವ ಹಾಗೆಯೇ ಬೆಂಗಳೂರು ತೊರೆದು ಬೆಳಗಾವಿಯ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಸಚಿವ ಸ್ಥಾನ ಕಳಕೊಂಡ ಅನಂತರ ಯಾರ ಕೈಗೂ ಸಿಗದೆ ಇರುವ ರಮೇಶ್ ಜತೆ ಸಿದ್ದರಾಮಯ್ಯ ಮಾತುಕತೆ ನಡೆಸುತ್ತಾರೆ ಎನ್ನಲಾಗಿತ್ತಾದರೂ ಅದು ಸಾಧ್ಯವಾಗಿಲ್ಲ. ಈ ನಡುವೆ ಉತ್ತರ ಕರ್ನಾಟಕ ಭಾಗಕ್ಕೆ ಪ್ರಬಲ ಖಾತೆಗಳನ್ನು ನೀಡಬೇಕು ಎಂದು ಎಂ.ಬಿ. ಪಾಟೀಲ್ ಮತ್ತು ಸತೀಶ್ ಜಾರಕಿಹೊಳಿ ಪಟ್ಟು ಹಿಡಿದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಡಿ.ಕೆ. ಶಿವಕುಮಾರ್ ಹಿಂದೇಟು
ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ತಾವು ನಿಭಾಯಿಸಿದ್ದ ಜಲ ಸಂಪನ್ಮೂಲ ಖಾತೆ ನೀಡುವಂತೆ ಎಂ.ಬಿ. ಪಾಟೀಲ್ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಆದರೆ ಜಲ ಸಂಪನ್ಮೂಲ ಖಾತೆಯನ್ನು ಡಿ.ಕೆ. ಶಿವಕುಮಾರ್ ಹೊಂದಿದ್ದು, ಬಿಟ್ಟುಕೊಡಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಜಲ ಸಂಪನ್ಮೂಲ ಖಾತೆ ನೀಡದೆ ಹೋದರೆ ಗೃಹ ಖಾತೆಯನ್ನಾದರೂ ನೀಡುವಂತೆ ಎಂ.ಬಿ. ಪಾಟೀಲ್ ಪಕ್ಷದ ನಾಯಕರ ಮುಂದೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದ್ದು, ಹಾಲಿ ಗೃಹ ಸಚಿವ ಪರಮೇಶ್ವರ್ ಬಿಟ್ಟುಕೊಡಲು ಒಪ್ಪುತ್ತಿಲ್ಲ. ತಾವು ಉಪ ಮುಖ್ಯಮಂತ್ರಿ ಆಗಿರುವುದರಿಂದ ಕನಿಷ್ಠ ಎರಡು ಖಾತೆಗಳಾದರೂ ಇರಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಇನ್ನು ಸತೀಶ್ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಖಾತೆ ನೀಡುವಂತೆ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದ್ದು, ಈ ಖಾತೆಯನ್ನು ಕೃಷ್ಣ ಬೈರೇಗೌಡ ಹೊಂದಿದ್ದಾರೆ. ತಾನು ಹೆಚ್ಚುವರಿಯಾಗಿ ಹೊಂದಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಬಿಟ್ಟುಕೊಡಲು ಮುಂದಾಗಿದ್ದಾರೆ. ಹೀಗಾಗಿ ಬುಧವಾರ ಸಭೆಯಲ್ಲಿ ಯಾರ ಖಾತೆ ಯಾರಿಗೆ ಸಿಗಲಿದೆ ಎಂಬುದು ನಿರ್ಧಾರವಾಗಲಿದೆ.
ಸಿದ್ದು ಸಂಧಾನ ಯಶಸ್ವಿ
ಸಂಪುಟದಲ್ಲಿ ಸ್ಥಾನ ಸಿಗದೆ ಮುನಿಸಿಕೊಂಡಿರುವ ರಾಮಲಿಂಗಾ ರೆಡ್ಡಿ, ಸುಧಾಕರ್, ಭೀಮಾ ನಾಯ್ಕ ಅವರನ್ನು ಸಮಾಧಾನ ಪಡಿಸುವಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಇವರೆಲ್ಲರನ್ನೂ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಸುಮ್ಮನಿರಿ, ಮುಂದೆ ಅವಕಾಶ ಸಿಕ್ಕೇ ಸಿಗುತ್ತದೆ ಎಂದು ಭರವಸೆ ನೀಡಿದ್ದಾರೆ ಎಂಬುದಾಗಿ ಮೂಲಗಳು ಹೇಳಿವೆ.
ಸಚಿವ ಸ್ಥಾನ ಹೋಗಿರುವುದರಿಂದ ರಮೇಶ ಜಾರಕಿಹೊಳಿಗೆ ನೋವಾಗಿರಬಹುದು. ಆದರೆ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ ಎಂಬುದು ಸುಳ್ಳು. ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ.
– ಸತೀಶ್ ಜಾರಕಿಹೊಳಿ, ನೂತನ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.