ಸಿಹಿಸುದ್ದಿ; 362 ಪ್ರೊಬೆಶನರಿ ಅಧಿಕಾರಿಗಳ ನೇಮಕಕ್ಕೆ ಸಂಪುಟ ಅಸ್ತು
Team Udayavani, Mar 1, 2017, 4:10 PM IST
ಬೆಂಗಳೂರು: ಕೆಎಟಿ(ಕರ್ನಾಟಕ ಆಡಳಿತ ನ್ಯಾಯಮಂಡಳಿ) ನೀಡಿರುವ ಆದೇಶದಂತೆ 2011ರ ಬ್ಯಾಚ್ ನ ಪ್ರೊಬೆಶನರಿ ಅಧಿಕಾರಿಗಳ ನೇಮಕಕ್ಕೆ ರಾಜ್ಯ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿರುವುದಾಗಿ ಕಾನೂನು ಸಚಿವ ಟಿಬಿ ಜಯಚಂದ್ರ ಬುಧವಾರ ತಿಳಿಸಿದ್ದು, ಇದರಿಂದಾಗಿ ಕೆಎಎಸ್ ಅಧಿಕಾರಿಗಳಿಗೆ ಸಿಹಿಸುದ್ದಿ ಸಿಕ್ಕಂತಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿತ್ತು. ಸಭೆ ಬಳಿಕ ಸಚಿವ ಜಯಚಂದ್ರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
2011ರ ಸಾಲಿನ 362 ಪ್ರೊಬೆಶನರಿ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲು ಕೆಎಟಿ ಆದೇಶದಂತೆ ಸಚಿವ ಸಂಪುಟ ನಿರ್ಧರಿಸಿದೆ. ಇದರಿಂದ ನಾಲ್ಕು ವರ್ಷಗಳ ಕಾನೂನು ಹೋರಾಟಕ್ಕೆ ತೆರೆ ಎಳೆಯುವುದಾಗಿ ಹೇಳಿದರು. ಆದರೆ ಈ ಬಗ್ಗೆ ಮತ್ತೆ ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡುವ ಸ್ವಾತಂತ್ರ್ಯ ಎಲ್ಲರಿಗೂ ಇದೆ ಎಂದು ತಿಳಿಸಿದರು.
ವಿಧಾನಸೌಧದ ಬಳಿ ಹರ್ಷವ್ಯಕ್ತಪಡಿಸಿದ ಕೆಪಿಎಸ್ ಸಿ ಅಭ್ಯರ್ಥಿಗಳು:
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 2011ನೇ ಸಾಲಿನ 362 ಪ್ರೊಬೆಶನರಿ ಅಧಿಕಾರಿಗಳ ನೇಮಕಕ್ಕೆ ನಿರ್ಧರಿಸಿರುವ ತೀರ್ಮಾನದ ಬಗ್ಗೆ ಕೆಪಿಎಸ್ಸಿ ಅಭ್ಯರ್ಥಿಗಳು ತುಂಬಾ ಸಂತಸ ವ್ಯಕ್ತಪಡಿಸಿದ್ದಾರೆ. ಕಳೆದ 6 ವರ್ಷಗಳಿಂದ ಕಷ್ಟ ಪಟ್ಟಿದ್ದೇವೆ. ಕೊನೆಗೂ ನಮ್ಮ ಹೋರಾಟಕ್ಕೆ ಜಯ ಸಂದಿದೆ. ನಮ್ಮ ಕೆಲಸದ ಮೂಲಕ ನಾವು ಉತ್ತರ ನೀಡುತ್ತೇವೆ ಎಂದು ವಿಧಾನಸೌಧದ ಬಳಿ ಪ್ರತಿಕ್ರಿಯೆ ನೀಡಿದ್ದಾರೆ.
ಮೇಕೆದಾಟು ಯೋಜನೆಯಿಂದ ಹಿಂದೆ ಸರಿಯಲ್ಲ:
ನಾವು ನಮ್ಮ ನೆಲದಲ್ಲಿ ಅಣೆಕಟ್ಟು ಕಟ್ಟುತ್ತಿದ್ದೇವೆ. ಹಾಗಾಗಿ ಮೇಕೆದಾಟು ಅಣೆಕಟ್ಟು ಕಟ್ಟುವ ಯೋಜನೆಯಿಂದ ಹಿಂದೆ ಸರಿಯುವುದಿಲ್ಲ. ತಮಿಳುನಾಡು ಸರ್ಕಾರ ಪ್ರಧಾನಿಗೆ ದೂರು ಕೊಟ್ಟರೂ, ನಾವು ನಮ್ಮ ಯೋಜನೆಯನ್ನು ಕೈಬಿಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆ ನಂತರ ಸುದ್ದಿಗಾರರ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.