ತಾ.ಪಂ., ಜಿ.ಪಂ. ಕ್ಷೇತ್ರಗಳ ಗಡಿ ನಿಗದಿ ಪ್ರಕ್ರಿಯೆ “ತ್ರಿಶಂಕು’ ಸ್ಥಿತಿಯಲ್ಲಿ

Team Udayavani, Jan 18, 2022, 6:20 AM IST

ತಾ.ಪಂ., ಜಿ.ಪಂ. ಕ್ಷೇತ್ರಗಳ ಗಡಿ ನಿಗದಿ ಪ್ರಕ್ರಿಯೆ “ತ್ರಿಶಂಕು’ ಸ್ಥಿತಿಯಲ್ಲಿ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ಗಳ ಕ್ಷೇತ್ರಗಳ ಗಡಿಗಳನ್ನು ನಿರ್ಣಯಿಸುವ ಹಾಗೂ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಗೆ ತ್ರಿಶಂಕು ಸ್ಥಿತಿ ಎದುರಾಗಿದೆ.

ತಿದ್ದುಪಡಿ ಕಾಯ್ದೆ ಪ್ರಕಾರ ಕೆಲಸ ಮಾಡಬೇಕು ಎಂದು ಕರ್ನಾಟಕ ರಾಜ್ಯ ಸೀಮಾ ನಿರ್ಣಯ ಆಯೋಗ ಹೇಳುತ್ತಿದ್ದರೆ, ಹಿಂದೆ ಮಾಡಲಾದ ಕ್ಷೇತ್ರಗಳ ವಿಂಗಡಣೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಬಹುತೇಕ ಜಿಲ್ಲಾಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಈ ಮಧ್ಯೆ, ಸೀಮಾ ನಿರ್ಣಯ ಆಯೋಗ ರಚಿಸಲು ಪಂಚಾಯತ್‌ರಾಜ್‌ ಕಾಯ್ದೆಗೆ ತಂದಿರುವ ತಿದ್ದುಪಡಿ ಪ್ರಶ್ನಿಸಿ ರಾಜ್ಯ ಚುನಾವಣ ಆಯೋಗ ಹೈಕೋರ್ಟ್‌ ಮೆಟ್ಟಿಲೇರಿದೆ.

ಜಿ.ಪಂ. ತಾ.ಪಂ.ಗಳ ಕ್ಷೇತ್ರಗಳಿಗೆ ಗಡಿಗಳನ್ನು ನಿರ್ಣಯಿಸಿ, ಮೀಸಲಾತಿ ನಿಗದಿಪಡಿಸಲು ಸರಕಾರ “ಕರ್ನಾಟಕ ಸೀಮಾ ನಿರ್ಣಯ ಆಯೋಗ’ ರಚಿಸಿದೆ. ಆದರೆ, ಸರಕಾರದ ಹಿಂದಿನ ಮಾರ್ಗಸೂಚಿ ಹಾಗೂ ರಾಜ್ಯ ಚುನಾವಣ ಆಯೋಗದ ನಿರ್ದೇಶನದಂತೆ ಈ ಹಿಂದೆ ಮಾಡಿದ್ದ ಪ್ರಕ್ರಿಯೆ ಸರಿ ಇದ್ದು, ಯಾವುದೇ ಸಮಸ್ಯೆ ಇಲ್ಲ ಎಂಬುದು ಬಹುತೇಕ ಜಿಲ್ಲಾಧಿಕಾರಿಗಳ ಅಭಿಪ್ರಾಯ.

ಇತ್ತೀಚೆಗೆ ಸೀಮಾ ನಿರ್ಣಯ ಆಯೋಗ ನಡೆಸಿದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದ್ದು, ಕ್ಷೇತ್ರಗಳ ವಿಂಗಡಣೆಯಲ್ಲಿ ಸಮಸ್ಯೆ ಇಲ್ಲ, ಯಾವುದೇ ಆಕ್ಷೇಪಣೆ ಅಥವಾ ದೂರುಗಳು ಸಲ್ಲಿಕೆಯಾಗಿಲ್ಲ ಎಂದು 15ಕ್ಕೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹೇಳಿದ್ದಾರೆ ಎನ್ನಲಾಗಿದೆ. ಉಳಿದಂತೆ ಕ್ಷೇತ್ರಗಳ ಹೆಸರು-ಸಂಖ್ಯೆ ಬಗ್ಗೆ ಆಕ್ಷೇಪಗಳು ಕೇಳಿ ಬಂದಿವೆ ಎಂದು ಕೆಲವು ಜಿಲ್ಲಾಧಿಕಾರಿಗಳು ತಿಳಿಸಿದ್ದರೆ, ಸಮಸ್ಯೆ ಇದೆ ಎಂದು ಒಂದಿಬ್ಬರು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ಆದಾಗ್ಯೂ, ಸೀಮಾ ನಿರ್ಣಯ ಆಯೋಗ ಹೊರಡಿಸುವ ಪರಿಷ್ಕೃತ ಮಾರ್ಗಸೂಚಿಗಳ ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಎಲ್ಲ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.ಆದರೆ, ಇದಕ್ಕೆ ಸ್ಪಷ್ಟನೆ ನೀಡಿರುವ ಸೀಮಾ ನಿರ್ಣಯ ಆಯೋಗ, ಹಿಂದಿನ ಕ್ಷೇತ್ರಗಳ ವಿಂಗಡಣೆಯಲ್ಲಿ ಸಮಸ್ಯೆ ಇಲ್ಲ ಎಂದು ಜಿಲ್ಲಾಧಿಕಾರಿಗಳ ಅಭಿಪ್ರಾಯ ಇರಬಹುದು. ಆದರೆ, ಮುಂದಿನ ಎಲ್ಲ ಪ್ರಕ್ರಿಯೆಗಳು ತಿದ್ದುಪಡಿ ಕಾಯ್ದೆಯ ಪ್ರಕಾರ ನಡೆಯಬೇಕಾಗಿರುವುದರಿಂದ ಹಿಂದಿನ ಪ್ರಕ್ರಿಯೆ ಬಗ್ಗೆ ಜಿಲ್ಲಾಧಿಕಾರಿಗಳ ಅಭಿಪ್ರಾಯಗಳಿಗೆ ಈಗ ಮಹತ್ವವಿಲ್ಲ ಎಂದಿದೆ.

ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಾಮರಾಜನಗರ, ವಿಜಯಪುರ, ಬೆಳಗಾವಿ, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ, ಬೀದರ್‌ ಜಿಲ್ಲಾಧಿಕಾರಿಗಳು ಯಾವುದೇ ಸಮಸ್ಯೆ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ:ಅವಂತಿಪೋರಾದಲ್ಲಿ ಸ್ಫೋಟಕ ಸಹಿತ ಇಬ್ಬರು ಜೈಶ್ ಉಗ್ರರ ಸಹಚರರ ಬಂಧನ

ಹಾಸನ, ಮಂಡ್ಯ, ಬಾಗಲಕೋಟೆ, ಧಾರವಾಡ, ಗದಗ, ಉತ್ತರ ಕನ್ನಡ, ಹಾವೇರಿ ಜಿಲ್ಲಾಧಿಕಾರಿಗಳು ಆಕ್ಷೇಪಣೆಗಳು ಬಂದಿವೆ ಎಂದಿದ್ದಾರೆ. ಉಳಿದ ಜಿಲ್ಲಾಧಿಕಾರಿಗಳು ಕೆಲವು ತಾಂತ್ರಿಕ ಸಮಸ್ಯೆಗಳನ್ನು ಮುಂದಿಟ್ಟಿದ್ದಾರೆ ಎನ್ನಲಾಗಿದೆ.
ಸಿಎಂ ಕಚೇರಿಗೆ ಪರಿಷ್ಕೃತ ಮಾರ್ಗಸೂಚಿ 2021-26ರ ಅವಧಿಯ ತಾ.ಪಂ. ಮತ್ತು ಜಿ.ಪಂ. ರಚನೆಗೆ ಚುನಾವಣ ಕ್ಷೇತ್ರಗಳನ್ನು ನಿಗದಿಗೊಳಿಸುವ, ಚುನಾಯಿತ ಸದಸ್ಯ ಸಂಖ್ಯೆಯನ್ನು ನಿರ್ಧರಿಸುವ ಸಂಬಂಧ ಸೀಮಾ ನಿರ್ಣಯ ಆಯೋಗ ಪರಿಷ್ಕೃತ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದ್ದು, ಅವುಗಳನ್ನು ಮುಖ್ಯಮಂತ್ರಿ ಕಚೇರಿಗೆ ಕಳಿಸಿಕೊಡಲಾಗಿದೆ. ಅಲ್ಲಿಂದ ಅನುಮೋದನೆ ಸಿಕ್ಕ ಬಳಿಕ ಪರಿಷ್ಕೃತ ಮಾರ್ಗಸೂಚಿಗಳನ್ನು ಎಲ್ಲ ಜಿಲ್ಲಾಧಿಕಾರಿಗಳಿಗೆ ರವಾನಿಸಲಾಗುವುದು. ಜತೆಗೆ ರಾಜ್ಯದ ಗ್ರಾಮೀಣ ಜನಸಂಖ್ಯೆ ಗುರುತಿಸಿ ಆಯೋಗಕ್ಕೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳ ಹಂತದ ಪ್ರಕ್ರಿಯೆಗಳು ಮುಗಿದ ಒಂದು ತಿಂಗಳೊಳಗೆ ಆಯೋಗ ಅಂತಿಮ ಪ್ರಕ್ರಿಯೆ ಕೈಗೊಳ್ಳಲಿದೆ ಎಂದು ಸೀಮಾ ನಿರ್ಣಯ ಆಯೋಗದ ಅಧ್ಯಕ್ಷ ಎಂ. ಲಕ್ಷ್ಮೀನಾರಾಯಣ ಹೇಳಿದ್ದಾರೆ.

ಹೈಕೋರ್ಟ್‌ ಮೆಟ್ಟಿಲೇರಿದ ಚುನಾವಣ ಆಯೋಗ
ಸೀಮಾ ನಿರ್ಣಯ ಆಯೋಗ ರಚನೆಗೆ ಅವಕಾಶ ಮಾಡಿಕೊಡಲು ಪಂಚಾಯತ್‌ರಾಜ್‌ ಕಾಯ್ದೆಗೆ ತರಲಾದ ತಿದ್ದುಪಡಿಯನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿರುವ ರಾಜ್ಯ ಚುನಾವಣ ಆಯೋಗ, ಕಾಲಮಿತಿಯೊಳಗೆ ಚುನಾವಣೆ ನಡೆಸುವ ತನ್ನ ಸಾಂವಿಧಾನಿಕ ಹೊಣೆಗಾರಿಕೆ ನಿರ್ವಹಿಸಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡುವ ಮೂಲಕ ಪರೋಕ್ಷವಾಗಿ ಸೀಮಾ ನಿರ್ಣಯ ಆಯೋಗದ ರಚನೆಯನ್ನು ಪ್ರಶ್ನಿಸಿದೆ
ಸಂವಿಧಾನದ ಪರಿಚ್ಛೇದ 243 ಇ(3) ಪ್ರಕಾರ ಪಂಚಾಯತ್‌ಗಳ ಅಧಿಕಾರಾವಧಿ ಪೂರ್ಣಗೊಳ್ಳುವ ಮೊದಲೇ ಚುನಾವಣೆ ನಡೆಸಬೇಕು. ಇದಕ್ಕಾಗಿ ಚುನಾವಣ ಸಾಕಷ್ಟು ಸಮಯ ಹಾಗೂ ಹಣ ಖರ್ಚು ಮಾಡಿ ಸಿದ್ಧತೆ ಮಾಡಿಕೊಂಡಿತ್ತು. ಆದರೆ, ಸೀಮಾ ನಿರ್ಣಯ ಆಯೋಗದ ರಚನೆಯಿಂದ ಇದಕ್ಕೆ ಹಿನ್ನಡೆಯಾಗಿದೆ. ಕಾಲಮಿತಿಯೊಳಗೆ ಚುನಾವಣೆ ನಡೆಸುವ ಸಾಂವಿಧಾನಿಕ ಹೊಣೆಗಾರಿಕೆ ನಿರ್ವಹಿಸಲು ಅವಕಾಶ ಮಾಡಿಕೊಡಬೇಕು. ಈಗಿನ ಬೆಳವಣಿಗೆಗಳು ಗಮನಿಸಿದರೆ ಚುನಾವಣೆ ಪೂರ್ಣಗೊಳಿಸಲು ಕನಿಷ್ಠ ಒಂದು ವರ್ಷ ಬೇಕಾಗಬಹುದು. ಆದ್ದರಿಂದ ಕಾಯ್ದೆ ತಿದ್ದುಪಡಿಯನ್ನು ಅಸಾಂವಿಧಾನಿಕ ಎಂದು ಘೋಷಿಸಿ, ಚುನಾವಣ ಆಯೋಗವು ಈಗಾಗಲೇ ಮಾಡಿಕೊಂಡಿರುವ ಸಿದ್ಧತೆಗಳ ಪ್ರಕಾರ ಚುನಾವಣೆಗಳನ್ನು ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ಚುನಾವಣ ಆಯೋಗದ ಮನವಿಯಾಗಿದೆ. ಈ ಅರ್ಜಿಯ ವಿಚಾರಣೆ ಜ.18 (ಮಂಗಳವಾರ) ನಡೆಯಲಿದೆ.

ಪಂಚಾಯತ್‌ರಾಜ್‌ ಕಾಯ್ದೆಯ ತಿದ್ದುಪಡಿಯಂತೆ ಸೀಮಾ ನಿರ್ಣಯ ಆಯೋಗ ಕಾರ್ಯನಿರ್ವಹಿಸಬೇಕಿದೆ. ಅದೇ ರೀತಿ ಸರಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳು ಕೆಲಸ ಮಾಡಬೇಕಾಗುತ್ತದೆ. ಹಿಂದಿನ ಪ್ರಕ್ರಿಯೆ ಸರಿ ಇದೆ ಎಂದು ಹಲವರ ಅಭಿಪ್ರಾಯ ಇರಬಹುದು. ಆದರೆ, ಕಾಯ್ದೆ ತಿದ್ದುಪಡಿ ಬಳಿಕ ಹಿಂದಿನ ಎಲ್ಲ ಅಧಿಸೂಚನೆ, ಪ್ರಕ್ರಿಯೆಗಳು ರದ್ದಾಗಿವೆ. ಈಗೇನಿದ್ದರೂ ಜಿಲ್ಲಾಧಿಕಾರಿಗಳು ಹೊಸ ಮಾರ್ಗಸೂಚಿಗಳ ಪ್ರಕಾರ ಅಭಿಪ್ರಾಯಗಳನ್ನು ನೀಡಬೇಕಾಗುತ್ತದೆ.’
– ಎಂ. ಲಕ್ಷ್ಮೀನಾರಾಯಣ, ಅಧ್ಯಕ್ಷರು, ಸೀಮಾ ನಿರ್ಣಯ ಆಯೋಗ.

-ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.