State Government 155. 40 ಕೋಟಿ ರೂ. ಅನುದಾನ ಬಿಡುಗಡೆ
Team Udayavani, Nov 8, 2023, 12:56 AM IST
ಬೆಂಗಳೂರು: ಹದಿನೈದನೇ ಹಣಕಾಸು ಆಯೋಗದ ಶಿಫಾರಸಿನ ಅನ್ವಯ 2022-23ನೇ ಹಣಕಾಸು ವರ್ಷಕ್ಕೆ ಸಂಬಂಧಪಟ್ಟಂತೆ 155.40 ಕೋಟಿ ರೂ. ಅನುದಾನವನ್ನು ನಗರ -ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ಚಟುವಟಿಕೆಗಾಗಿ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ರಾಜ್ಯ ಸರಕಾರ ಬಿಡುಗಡೆಗೊಳಿಸಿದೆ.
ಈ ಬಾಬಿ¤ನಲ್ಲಿ ಕೇಂದ್ರದಿಂದ ರಾಜ್ಯಕ್ಕೆ 777 ಕೋಟಿ ರೂ. ಅನುದಾನ ನಿಗದಿಯಾಗಿದೆ. ಆ ಪೈಕಿ ಬಿಡುಗಡೆಯಾದ ಎರಡನೇ ಕಂತಿನ ಹಣವನ್ನು ರಾಜ್ಯ ಸರಕಾರ ಹಂಚಿಕೆ ಮಾಡಿ ಆದೇಶ ಹೊರಡಿಸಿದೆ. ಈ ಹಣವನ್ನು ನಗರ-ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ಕಾರ್ಯಗಳಿಗೆ ಕಡ್ಡಾಯವಾಗಿ ಬಳಸಿಕೊಳ್ಳಬೇಕೆಂದು ಕೇಂದ್ರ ಸರಕಾರ ಸ್ಪಷ್ಟ ನಿರ್ದೇಶನ ನೀಡಿದೆ. ಹೀಗಾಗಿ ಹಂಚಿಕೆಯಾದ ಹಣವನ್ನು ಯಾವುದೇ ಕಾರಣಕ್ಕೂ ಸಂಬಳ ಇತ್ಯಾದಿ ವೆಚ್ಚಕ್ಕೆ ಬಳಸಿಕೊಳ್ಳದಂತೆ ಹಣಕಾಸು ಇಲಾಖೆ ಸೂಚನೆ ನೀಡಿದೆ. ಅನುದಾನ ಬಳಕೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಇದರನ್ವಯವೇ ವೆಚ್ಚ ಮಾಡುವಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶಿಸಲಾಗಿದೆ.
ಮರುನಾಮಕರಣ ಮಾಡಿ ಆದೇಶ
ಬೆಂಗಳೂರು: ನಗರ ಮತ್ತು ಗ್ರಾಮಾಂತರ ಯೋಜನ ನಿರ್ದೇಶಕರ ಕಚೇರಿಯನ್ನು ಸರಕಾರ “ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನ ಆಯುಕ್ತಾಲಯ’ ಎಂದು ಮರುನಾಮಕರಣ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.
31 ನಗರಾಭಿವೃದ್ಧಿ ಪ್ರಾಧಿಕಾರ
ರಾಜ್ಯದಲ್ಲಿ ಪ್ರಸ್ತುತ 31 ನಗರಾಭಿವೃದ್ಧಿ ಪ್ರಾಧಿಕಾರಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳ ಬಜೆಟ್ ಕನಿಷ್ಠ 50ರಿಂದ ಗರಿಷ್ಠ 500 ಕೋಟಿ ರೂ. ಆಗಿದೆ. ಈ ಪ್ರಾಧಿಕಾರಗಳ ಆಡಳಿತ ನಿರ್ವಹಣೆ, ಡಿಜಿಟಲೀಕರಣ, ಮೇಲುಸ್ತುವಾರಿಯಂತಹ ಹಲವು ಕಾರ್ಯಗಳಿಗೆ ಅನುಕೂಲವಾಗುವಂತೆ ಯೋಜನ ನಿರ್ದೇಶಕರ ಕಚೇರಿಯನ್ನು ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನ ಆಯುಕ್ತಾಲಯ ಎಂದು ಮರುನಾಮಕರಣ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.
ಆಯುಕ್ತರಾಗಿ ಐಎಎಸ್ ಅಧಿಕಾರಿ
ಉದ್ದೇಶಿತ ಆಯುಕ್ತಾಲಯಕ್ಕೆ ಇಲಾಖೆಯಲ್ಲಿ ಮಂಜೂರಾದ 35 ಸಹಾಯಕ ನಿರ್ದೇಶಕರ ಹುದ್ದೆಗಳ ಪೈಕಿ ಒಂದು ಹುದ್ದೆಯನ್ನು ಉನ್ನತೀಕರಿಸಿ, ಆ ಹುದ್ದೆಗೆ ಐಎಎಸ್ ಉನ್ನತ ದರ್ಜೆಯ ವೃಂದದ ಅಧಿಕಾರಿಯನ್ನು ಆಯುಕ್ತರನ್ನಾಗಿ ನೇಮಿಸಲು ಉದ್ದೇಶಿಸಲಾಗಿದೆ. ಇದರೊಂದಿಗೆ ಇನ್ನು ಮುಂದೆ ನಗರಾಭಿವೃದ್ಧಿ ಪ್ರಾಧಿಕಾರಗಳು, ನಗರ ಯೋಜನ ಪ್ರಾಧಿಕಾರಗಳು, ನಗರ ಮತ್ತು ಗ್ರಾಮಾಂತರ ಯೋಜನ ಇಲಾಖೆಯು ಸರಕಾರಕ್ಕೆ ಸಲ್ಲಿಸುವ ಎಲ್ಲ ಪ್ರಸ್ತಾವನೆಗಳನ್ನು (ಬಿಡಿಎ, ಬಿಬಿಎಂಪಿ, ಬಿಎಂಆರ್‌ಡಿಎ, ಬಿಎಂಐಸಿಎಪಿಎ ಹೊರತುಪಡಿಸಿ) ಆಯುಕ್ತರ ಮೂಲಕ ಸಲ್ಲಿಸಲು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.