ಬಿ.ಎಸ್.ವೈ. ಸರಕಾರದಿಂದ ಹಣ್ಣು, ತರಕಾರಿ ಬೆಳೆಗಳಿಗೆ 137 ಕೋಟಿ ರೂ. ಪರಿಹಾರ ಘೋಷಣೆ
Team Udayavani, May 14, 2020, 7:31 PM IST
ಬೆಂಗಳೂರು: ಲಾಕ್ ಡೌನ್ ಅವಧಿಯಲ್ಲಿ ತಮ್ಮ ಬೆಳೆಗಳಿಗೆ ಸೂಕ್ತ ಬೇಡಿಕೆ ಹಾಗೂ ಬೆಲೆ ಇಲ್ಲದೆ ಕಂಗಾಲಾಗಿದ್ದ ತರಕಾರಿ ಮತ್ತು ಹಣ್ಣು ಬೆಳೆಗಾರರ ಸಹಾಯಕ್ಕೆ ರಾಜ್ಯ ಸರಕಾರ ಧಾವಿಸಿದೆ.
ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾದ ಪರಿಹಾರ ಪ್ಯಾಕೇಜ್ ಗೆ ಸಮ್ಮತಿ ನೀಡಲಾಯಿತು. ಈ ಉದ್ದೇಶಕ್ಕಾಗಿ ಒಟ್ಟು 137 ಕೋಟಿ ರೂಪಾಯಿಗಳ ಪರಿಹಾರ ಮೊತ್ತವನ್ನು ನಿಗದಿಪಡಿಸಲಾಗಿದೆ.
ಇದರಂತೆ ರಾಜ್ಯದಲ್ಲಿ 50,083 ಹೆಕ್ಟೇರ್ ಗಳಲ್ಲಿ ತರಕಾರಿ ಬೆಳೆದ ರೈತರಿಗೆ ಹಾಗೂ 41,054 ಹೆಕ್ಟೇರ್ ಗಳಲ್ಲಿ ಬೆಳೆದ ಹಣ್ಣು ಬೆಳೆಗಾರರಿಗೆ ಪ್ರತೀ ಹೆಕ್ಟೇರ್ ಗೆ 15,000 ರೂಪಾಯಿಗಳಂತೆ ಪರಿಹಾರ ಧನವನ್ನು ವಿತರಿಸಲು ನಿರ್ಧರಿಸಲಾಗಿದೆ.
ಹಣ್ಣಿನ ಬೆಳೆಗಳು: ಬಾಳೆ, ಪಪ್ಪಾಯಿ, ಟೇಬಲ್ ದ್ರಾಕ್ಷಿ (ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಬೆಳೆದ ದ್ರಾಕ್ಷಿ ಬೆಳೆಗಳು), ಅಂಜೂರ, ಅನಾನಾಸ್, ಕಲ್ಲಂಗಡಿ ಮತ್ತು ಖರಬೂಜ, ಬೋರೆ ಹಾಗೂ ಬೆಣ್ಣೆ ಹಣ್ಣು.
ತರಕಾರಿ ಬೆಳೆಗಳು: ಟೊಮೆಟೋ, ಹಸಿರು ಮೆಣಸಿನಕಾಯಿ, ಹೂಕೋಸು, ಎಲೆ ಕೋಸು, ಸಿಹಿಗುಂಬಳ, ಬೂದುಗುಂಬಳ, ಕ್ಯಾರೆಟ್, ಈರುಳ್ಳಿ, ದಪ್ಪ ಮೆಣಸಿನಕಾಯಿ, ಸೊಪ್ಪು, ಹೀರೆಕಾಯಿ ಮತ್ತು ತೊಂಡೆಕಾಯಿ.
ಇದರ ಜೊತೆಗೆ ಈ ಹಿಂದೆ ಪ್ಯಾಕೇಜ್ ಘೋಷಣೆ ಮಾಡುವ ಸಂದರ್ಭದಲ್ಲಿ ಪ್ರತೀ ಕೈಮಗ್ಗ ನೇಕಾರರಿಗೆ 2,000 ರೂಪಾಯಿಗಳಂತೆ ಪರಿಹಾರ ನೀಡಲು ನಿರ್ಧರಿಸಲಾಗಿತ್ತು. ಪ್ರಸ್ತುತ ಒಂದು ಬಾರಿಗೆ ಈ ಪರಿಹಾರ ಸೌಲಭ್ಯವನ್ನು ರಾಜ್ಯದಲ್ಲಿರುವ 1.25 ಲಕ್ಷ ವಿದ್ಯುತ್ ಚಾಲಿತ ಘಟಕಗಳಿಗೂ ಸಹ ವಿಸ್ತರಿಸಲು ನಿರ್ಧರಿಸಲಾಗಿದೆ.
ಇದರ ಪ್ರಕಾರ ಪ್ರತೀ ವಿದ್ಯುತ್ ಚಾಲಿತ ಘಟಕಗಳಲ್ಲಿ ಕೆಲಸ ಮಾಡುತ್ತಿರುವ ಪ್ರತೀ ಕೂಲಿ ಕಾರ್ಮಿಕರಿಗೆ ತಲಾ 2000 ರೂಪಾಯಿಗಳಂತೆ ಒಟ್ಟು 25 ಕೋಟಿ ರೂಪಾಯಿಗಳನ್ನು ನೀಡಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.