ರಾಜ್ಯ ಸರ್ಕಾರ ಮಲಗಿಕೊಂಡಿಲ್ಲ: ಆರ್.ವಿ.ದೇಶಪಾಂಡೆ
Team Udayavani, May 16, 2019, 3:06 AM IST
ಬೆಂಗಳೂರು: ರಾಜ್ಯದಲ್ಲಿ ಉದ್ಭವಿಸಿರುವ ತೀವ್ರ ಬರ ಪರಿಸ್ಥಿತಿ ನಿರ್ವಹಣೆಯನ್ನು ಯಶಸ್ವಿಯಾಗಿ ನಿಭಾಯಿಸಲಾಗುತ್ತಿದೆ. ರಾಜ್ಯ ಸರ್ಕಾರ ಮಲಗಿಕೊಂಡಿಲ್ಲ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಬಿಜೆಪಿ ನಾಯಕರ ಹೇಳಿಕೆಗಳಿಗೆ ತಿರುಗೇಟು ನೀಡಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬರ ನಿರ್ವಹಣೆ ಸಭೆ ನಡೆಸಿ, ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಸಚಿವರು ಹೇಳಿದ್ದಿಷ್ಟು
* ಪ್ರತಿಪಕ್ಷದ ನಾಯಕರು ಬರಗಾಲ ಪರಿಹಾರ ಕೈಗೊಳ್ಳುವಲ್ಲಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸುತ್ತಿದ್ದಾರೆ. ಆದರೆ, ರಾಜ್ಯ ಸರ್ಕಾರ ಬರ ನಿರ್ವಹಣೆಯನ್ನು ಸಮರ್ಥವಾಗಿ ಮಾಡುತ್ತಿದೆ. ಇದಕ್ಕೆ ಹಣಕಾಸಿನ ಕೊರತೆಯೂ ಇಲ್ಲ. ಈಗಾಗಲೇ ಜಿಲ್ಲಾಧಿಕಾರಿಗಳ ಬಳಿ 713 ಕೋಟಿ ರೂ.ಇದೆ. ಸರ್ಕಾರ ನಿದ್ದೆ ಮಾಡುತ್ತಿಲ್ಲ.
* ರಾಜ್ಯದ ಕೆಲವು ಕಡೆ ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆ ಇದೆ. ಆದರೆ, ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗೂ ಅಧಿಕಾರಿಗಳ ಜತೆ ಸಭೆ ನಡೆಸುವ ಅಧಿಕಾರವಿಲ್ಲ. ರಾಜ್ಯದಲ್ಲಿ ಮತದಾನ ಮುಗಿದಿರುವುದರಿಂದ ಸಭೆ ನಡೆಸಲು ಅವಕಾಶ ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಸಭೆ ನಡೆಸಲು ಆಯೋಗ ಅವಕಾಶ ನೀಡಿದೆ. ಆದರೆ, ಶಾಸಕರಿಗೆ ಈ ಅವಕಾಶ ನೀಡಿಲ್ಲ. ಅದನ್ನೂ ಸಡಿಲಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ.
* 2018-19ನೇ ಸಾಲಿನಲ್ಲಿ ಮುಂಗಾರಿನಲ್ಲಿ 100 ತಾಲೂಕುಗಳು ಹಾಗೂ ಹಿಂಗಾರಿನಲ್ಲಿ 156 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಕುಡಿಯುವ ನೀರಿನ ಅಭಾವವಿರುವ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಕೆಲಸ ನಡೆದಿದೆ. ಕೆಲವೆಡೆ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆದಿದ್ದೇವೆ. 12 ವಾರಗಳಿಗೆ ಆಗುವಷ್ಟು ಮೇವಿನ ಸಂಗ್ರಹ ಇದೆ. ಕೆಲವು ಜಿಲ್ಲೆಗಳಿಗೆ 8 ರಿಂದ 10 ವಾರಗಳಿಗೆ ಆಗುವಷ್ಟು ಮೇವು ಲಭ್ಯವಿರುವುದರಿಂದ ಅಲ್ಲಿ ಮೇವಿನ ಸಂಗ್ರಹ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
* ರಾಜ್ಯದ ಇತಿಹಾಸದಲ್ಲಿ ದಾಖಲೆಯ ನರೇಗಾ ಉದ್ಯೋಗ ಸೃಷ್ಠಿ ಮಾಡಲಾಗಿದೆ. ಜಾನುವಾರುಗಳಿಗೆ ಕುಡಿಯುವ ನೀರು, ಮೇವಿನ ಸಮಸ್ಯೆಯಾಗದಂತೆ, ಜನರು ಗುಳೆ ಹೋಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ.
* ಈ ವರ್ಷ ಪೂರ್ವ ಮುಂಗಾರಿನಲ್ಲಿ ಶೇ.41ರಷ್ಟು ಮಳೆ ಕಡಿಮೆಯಾಗಿದೆ. ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಈ ಅವಧಿಗೆ ಸುಮಾರು 2.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಬೇಕಿತ್ತು. ಆದರೆ, 30 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ.
* ಮಲೆನಾಡು ಭಾಗದಲ್ಲಿ ಅತಿವೃಷ್ಟಿ ತಡೆಯುವ ಬಗ್ಗೆಯೂ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
* ಕುಡಿಯುವ ನೀರಿನ ಸಮಸ್ಯೆಗೆ ಕರೆ ಮಾಡಲು ತಾಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದೆ. ಕಂಟ್ರೋಲ್ ರೂಂ ನಂಬರ್ 1077/1070 ಸಂಖ್ಯೆಗೆ ಯಾವುದೇ ನೆಟ್‌ವರ್ಕ್‌ನಿಂದ ಉಚಿತ ಕರೆ ಮಾಡಬಹುದು. ಪ್ರತಿ ಹೋಬಳಿಗೆ ಜಿಲ್ಲಾಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಿ, ಕುಡಿಯುವ ನೀರಿನ ಸಮಸ್ಯೆ, ಉದ್ಯೋಗ ಸೃಷ್ಟಿ, ಮೇವಿನ ಸಮಸ್ಯೆ ಪರಿಹರಿಸಲು ಸೂಚಿಸಲಾಗಿದೆ.
* ಪ್ರತಿ ಹದಿನೈದು ದಿನಗಳಿಗೊಮ್ಮೆ ನೀರಿನ ಬಿಲ್ ಪಾವತಿಸಲು ಸೂಚಿಸಲಾಗಿದ್ದು, ನೀರಿನ ಟ್ಯಾಂಕರ್‌ಗಳಿಗೆ ಜಿಪಿಎಸ್ ಅಳವಡಿಸಲು ಸೂಚಿಸಲಾಗಿದೆ.
* ರಾಜ್ಯದಲ್ಲಿ 16 ಗೋಶಾಲೆಗಳನ್ನು ತೆರೆಯಲಾಗಿದ್ದು, 14,054 ಜಾನುವಾರುಗಳನ್ನು ಸಂರಕ್ಷಿಸಲಾಗಿದೆ. ಮುಂದಿನ ದಿನಗಳಲ್ಲಿ ಹಸಿರು ಮೇವು ಬೆಳೆಯಲು 42.07 ಕೋಟಿ ರೂ.ವೆಚ್ಚದಲ್ಲಿ 16.80 ಲಕ್ಷ ಮಿನಿ ಕಿಟ್‌ಗಳನ್ನು ರೈತರಿಗೆ ಉಚಿತವಾಗಿ ವಿತರಿಸಲಾಗಿದೆ. ಇದರಿಂದ 63 ಲಕ್ಷ ಮೆಟ್ರಿಕ್ ಟನ್ ಹಸಿರು ಮೇವು ಉತ್ಪಾದನೆಯಾಗಿದೆ.
ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ
* ರಾಜ್ಯದ 2999 ಗ್ರಾಮಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆಯಿದೆ.
* 1632 ಗ್ರಾಮಗಳಲ್ಲಿ 2322 ಟ್ಯಾಂಕರ್ ಮೂಲಕ ನೀರು ಸರಬರಾಜು.
* 1373 ಬೋರ್‌ವೆಲ್ ಬಾಡಿಗೆ ಪಡೆದು ನೀರು ಪೂರೈಕೆ.
* 6428 ನಗರಸಭೆ ವಾರ್ಡ್‌ಗಳಲ್ಲಿ, 451 ವಾರ್ಡ್‌ಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು.
* 15 ದಿನಕ್ಕೊಮ್ಮೆ ನೀರಿನ ಬಿಲ್ ಪಾವತಿಸಲು ಸೂಚನೆ.
* ಜಿಲ್ಲಾಧಿಕಾರಿಗಳ ಅಕೌಂಟ್‌ನಲ್ಲಿ 713 ಕೋಟಿ ರೂ.ಜಮಾ.
* ಟಾಸ್ಕ್ಪೋರ್ಸ್‌ಗಳಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಮೂಲಕ 200 ಕೋಟಿ ರೂ. ನೀಡಿಕೆ.
* ಪ್ರತಿ ತಾಲೂಕಿಗೂ 1 ಕೋಟಿ ರೂ.ಬಿಡುಗಡೆ.
* ನೀರಿನ ಸಮಸ್ಯೆಗೆ ಟೋಲ್ ಫ್ರೀ ನಂಬರ್* 1077/1070
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.