ಸಾರ್ವಜನಿಕ ಗಣೇಶ ಹಬ್ಬಕ್ಕೆ ಗ್ರೀನ್ ಸಿಗ್ನಲ್ ನೀಡಿದ ಸರ್ಕಾರ; ಷರತ್ತುಗಳು ಅನ್ವಯ
Team Udayavani, Sep 5, 2021, 2:47 PM IST
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚರ್ಚೆಯ ಕೇಂದ್ರ ಬಿಂದುವಾಗಿರುವ ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಬಗ್ಗೆ ಕೊನೆಗೂ ಸರ್ಕಾರ ನಿರ್ಧಾರ ಪ್ರಕಟಿಸಿದೆ. ಇಂದು ತಜ್ಞರ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದ್ದಾರೆ.
ಸೆ.10ರಂದು ಗಣೇಶ ಹಬ್ಬ ನಡೆಯಲಿದೆ. ಆ.30ರಂದು ಈ ಬಗ್ಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೆ.5ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದರು. ಅದರಂತೆ ಇಂದು ಸಭೆ ನಡೆಸಿದ್ದಾರೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಶೋಕ್, ಗಣೇಶ ಮೂರ್ತಿಯನ್ನು ಐದು ದಿನದೊಳಗೆ ವಿಸರ್ಜನೆ ಮಾಡಬೇಕು. ನಗರಗಳಲ್ಲಿ ವಾರ್ಡ್ ಗೆ ಒಂದು ಮಾತ್ರ ಗಣೇಶ ಮೂರ್ತಿ ಇಡಬಹುದು. ಹಳ್ಳಿಗಳಷ್ಟು ಸ್ಥಳಿಯಾಡಳಿತದ ಅನುಮತಿಯ ಮೇರೆಗೆ ಮೂರ್ತಿ ಪ್ರತಿಷ್ಠೆ ಮಾಡಬೇಕು ಎಂದರು.
ಇದನ್ನೂ ಓದಿ:ನಾಳೆಯಿಂದಲೇ ಶಾಲೆಗಳ ಪುನಾರಂಭ; ಕೋವಿಡ್ ನಿಯಮದಡಿ ಶಾಲೆ ಶುರು
ಕೋವಿಡ್ ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಕಡಿಮೆ ಇದ್ದಲ್ಲಿ ಮಾತ್ರ ಅವಕಾಶ ನೀಡಲಾಗುವುದು. ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಿರುವ ಕಡೆಗಳಲ್ಲಿ ಗಣೇಶೋತ್ಸವ ನಡೆಸಲು ಅವಕಾಶ ನೀಡುವುದಿಲ್ಲ. ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸ್ಥಳಗಳಲ್ಲಿ ಕೋವಿಡ್ ಲಸಿಕಾ ಕ್ಯಾಂಪ್ ನಡೆಸಲಾಗುವುದು. 50 ಅಡಿಗಿಂತ ಹೆಚ್ಚು ಪೆಂಡಾಲ್ ಹಾಕುವಂತಿಲ್ಲ ಎಂದು ಅಶೋಕ್ ಹೇಳಿದರು.
ಗಣೇಶೋತ್ಸವ ಸಮಯದಲ್ಲಿ ಮನರಂಜನೆ, ಡಿಜೆ ಗಳಿಗೆ ಅವಕಾಶವಿಲ್ಲ. ಯಾವುದೇ ಮೆರವಣಿಗೆಗೂ ಅವಕಾಶವಿಲ್ಲ. ಶಾಲಾ ಕಾಲೇಜುಗಳಲ್ಲಿ ಗಣೇಶ ಕೂರಿಸುವಂತಿಲ್ಲ. ಅಪಾರ್ಟ್ ಮೆಂಟ್ ಗಳಲ್ಲಿ 20 ಜನರಿಗಿಂತ ಹೆಚ್ಚಿನ ಜನರು ಸೇರುವಂತಿಲ್ಲ ಎಂದು ಅಶೋಕ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.