ವಿಚಾರಣಾಧೀನ, ಸಜಾ ಕೈದಿಗಳಿಗೆ ಆರೋಗ್ಯ ಕಾರ್ಡ್
ಸರ್ಕಾರಕ್ಕೆ ರಾಜ್ಯ ಮಾನವ ಹಕ್ಕು ಆಯೋಗ ನಿರ್ದೇಶನ
Team Udayavani, Sep 13, 2022, 6:40 AM IST
ಬೆಂಗಳೂರು: ರಾಜ್ಯದ ವಿವಿಧ ಜೈಲುಗಳಲ್ಲಿರುವ ಅಪರಾಧಿಗಳು ಮತ್ತು ವಿಚಾರಣಾಧೀನ ಕೈದಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ನಿಗಾವಹಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳು ಎಲ್ಲ ಕೈದಿಗಳ ಆರೋಗ್ಯ ಪರೀಕ್ಷೆ ನಡೆಸಿ, ಆರೋಗ್ಯ ಕಾರ್ಡ್‌ಗಳನ್ನು ಸಿದ್ಧಪಡಿಸಿಲು ರಾಜ್ಯ ಮಾನವ ಹಕ್ಕುಗಳ ಆಯೋಗ ಸರ್ಕಾರಕ್ಕೆ ಸೂಚಿಸಿದೆ.
ಕಾರಾಗೃಹಗಳಲ್ಲಿರುವ ಅಪರಾಧಿಗಳು ಹಾಗೂ ವಿಚಾರಣಾಧೀನ ಕೈದಿಗಳು ಅನಾರೋಗ್ಯಕ್ಕೆ ತುತ್ತಾಗಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಮೃತಪಟ್ಟಿರುವ ಪ್ರಕರಣ ಉಲ್ಲೇಖೀಸಿರುವ ಆಯೋಗ, ಅವರಿಗೆ ಸರಿಯಾದ ಸಮಯದಲ್ಲಿ ಜೈಲಿನಲ್ಲಿ ಚಿಕಿತ್ಸೆ ನೀಡಿದ್ದರೆ ಅವರು ಬದುಕುಳಿಯುತ್ತಿದ್ದರು. ಇಂತಹ ಪ್ರಕರಣಗಳನ್ನು ಸಹಜ ಸಾವೆಂದು ಹೇಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಕೈದಿಗಳು ಅನಾರೋಗ್ಯಕ್ಕೆ ತುತ್ತಾಗುವ ಮುನ್ನವೇ ಚಿಕಿತ್ಸೆ ಕೊಡಿಸಿ ಗುಣಮುಖರಾಗುವತ್ತ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ.
ಬೆಂಗಳೂರು ನಗರದಲ್ಲಿ ಪೋಕ್ಸೋ ಪ್ರಕರಣದಲ್ಲಿ ವಿಚಾರಣಾಧೀನ ಆರೋಗ್ಯವಂತ 21 ವರ್ಷದ ಕೈದಿ ಜೈಲು ಸೇರಿದ ಮೂರು ವರ್ಷದಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ಮೃತಪಟ್ಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗದ ಅಧ್ಯಕ್ಷ ಡಿ.ಎಚ್.ವಘೇಲಾ, ಸದಸ್ಯರಾದ ಕೆ.ಬಿ.ಚಂಗಪ್ಪ ಮತ್ತು ಆರ್.ಕೆ.ದತ್ತ ಅವರಿದ್ದ ಪೀಠ, ಸರ್ಕಾರಕ್ಕೆ ಕೈದಿಗಳ ಆರೋಗ್ಯದ ಬಗ್ಗೆ ನಿಗಾ ಇಡಲು ಹಲವು ಶಿಫಾರಸು ನೀಡಿದೆ.
ರಾಜ್ಯ ಸರ್ಕಾರ ಜೈಲಿನಲ್ಲಿರುವ ಸಜಾ ಹಾಗೂ ವಿಚಾರಣಾಧೀನ ಕೈದಿಗಳಿಗೆ ನಿಯಮಿತವಾದ ಆರೋಗ್ಯ ತಪಾಸಣೆಗೆ ಒಳಪಡಿಸಬೇಕು. ಅಗತ್ಯವಿದ್ದವರಿಗೆ ಸಮೀಪ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ, ರೋಗವು ಪ್ರಾಥಮಿಕ ಹಂತದಲ್ಲಿರುವ ವೇಳೆ ಚಿಕಿತ್ಸೆ ನೀಡಿ ಗುಣಪಡಿಸಬೇಕು. ಇದನ್ನು ವ್ಯವಸ್ಥಿತವಾಗಿ ಅಳವಡಿಸಿಕೊಳ್ಳಲು ಹಾಗೂ ದಾಖಲೀಕರಣ ನಡೆಸಲು ಪ್ರತಿ ಕೈದಿಗೂ ಒಂದು ಆರೋಗ್ಯ ಕಾರ್ಡ್ ಸಿದ್ಧಪಡಿಸಿ, ನಿಯಮಿತ ತಪಾಸಣೆ ದಾಖಲೆ ನಿರ್ವಹಣೆ, ಜತೆಗೆ ಮನೋವೈದ್ಯರಿಂದ ಆಪ್ತಸಮಾಲೋಚನೆಗೆ ಒಳಪಡಿಸಬೇಕು. ಧನಾತ್ಮಕ ಒತ್ತಡ ಕಾಪಾಡಲು ದೈಹಿಕ ಮತ್ತು ಮಾನಸಿಕ ಚಟುವಟಿಕೆ, ಜೈಲಿನ ಬ್ಯಾರಕ್ ಮತ್ತು ಹೊರಭಾಗಗಳಲ್ಲಿ ಕೆಲವು ಕ್ರೀಡೆಗಳನ್ನು ಆಯೋಜಿಸಬೇಕು ಎಂದು ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಆಯೋಗ ಶಿಫಾರಸು ಮಾಡಿದೆ.
10 ಲಕ್ಷ ಪರಿಹಾರ: ಅಪರಾಧ ಸಾಬೀತಾಗುವ ಮುನ್ನವೇ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ವಿಚಾರಣಾಧೀನ ಕೈದಿ ಅರವಿಂದ ಕುಮಾರ್ ಮೃತಪಟ್ಟಿದ್ದಾರೆ. ಇಲ್ಲಿ ಸೂಕ್ತ ಚಿಕಿತ್ಸೆ ಲಭ್ಯತೆಯ ಕೊರತೆ ಎದ್ದು ಕಾಣುತ್ತಿದೆ. ಈ ನಿಟ್ಟಿನಲ್ಲಿ ದುಡಿಯುವ ವ್ಯಕ್ತಿಯನ್ನು ಕಳೆದುಕೊಂಡ ಮೃತರ ಕುಟುಂಬಕ್ಕೆ 10 ಲಕ್ಷ ರೂ.ಗಳ ಪರಿಹಾರ ನೀಡಬೇಕು ಎಂದು ಆಯೋಗ ಸರ್ಕಾರಕ್ಕೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.