ಕಾಂಗ್ರೆಸ್ ನಿಂದ ರಾಜ್ಯಮಟ್ಟ ಕೋವಿಡ್ ಸೆಂಟರ್ ಮಾಡುತ್ತೇವೆ: ಡಿ.ಕೆ.ಶಿವಕುಮಾರ್
Team Udayavani, Apr 27, 2021, 4:55 PM IST
ಬೆಂಗಳೂರು: ಕಾಂಗ್ರೆಸ್ ನಿಂದ ರಾಜ್ಯಮಟ್ಟ ಕೋವಿಡ್ ಸೆಂಟರ್ ಮಾಡುತ್ತೇವೆ. ಖಾಸಗಿ ಆಸ್ಪತ್ರೆಗಳಿಗೆ ಡ್ರಗ್ ,ಔಷದಿ ಸರಬರಾಜು ಮಾಡಲಾಗುತ್ತಿಲ್ಲ. ಅವರ ಸಹಾಯಕ್ಕೂ ಕಾಂಗ್ರೆಸ್ ನಿಲ್ಲುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರು ಕೋವಿಡ್ ಸಮಯದಲ್ಲಿ ಯಾವ ರೀತಿ ಜವಬ್ದಾರಿ ನಿಭಾಯಿಸಬೇಕು ಎಂದು ಸಲಹೆ ನೀಡಿದ್ದಾರೆ. ಆಸ್ಪತ್ರೆಗಳ ಮಾಹಿತಿ ಹೇಗೆ ಪಡೆಯಬೇಕು, ಸಾಮಾನ್ಯ ಜನರಿಗೆ ಹೇಗೆ ಸಹಾಯ ಮಾಡಬೇಕು, ಕಾಂಗ್ರೆಸ್ ಪಕ್ಷ ನಿಭಾಯಿಬೇಕಾದ ಜವಬ್ದಾರಿ ಬಗ್ಗೆ ಸಲಹೆ ನೀಡಿದ್ದಾರೆ ಎಂದರು.
ರಾಜಯದಲ್ಲಿ ಏಕಾಏಕಿಯಾಗಿ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ. ಇದರಿಂದ ಜನ ಸಾಮಾನ್ಯರಿಗೆ ತೊಂದರೆ ಆಗುತ್ತದೆ. ಜನರಿಗೆ ಆರ್ಥಿಕ ಪ್ಯಾಕೇಜ್ ನೀಡಬೇಕು. ಪ್ಯಾಕೇಜ್ ಕೊಡುವಂತೆ ಸರ್ಕಾರಕ್ಕೆ ಒತ್ತಾಯ ಮಾಡುತ್ತೇವೆ. ಯಾವ ರೀತಿ ಒತ್ತಾಯ ಮಾಡಬೇಕು ಎಂದು ನಾವು ಚರ್ಚೆ ಮಾಡುತ್ತೇವೆ ಎಂದರು.
ಇದನ್ನೂ ಓದಿ:ಇನ್ನೆರಡು ತಿಂಗಳು ಉದ್ಘಾಟನೆ, ಶಂಕು ಸ್ಥಾಪನೆ ಕಾರ್ಯಕ್ರಮ ಮಾಡುವಂತಿಲ್ಲ: ಸಚಿವ ಅಶೋಕ್
ಅಕ್ಕಿ ಪ್ರಮಾಣ ಕಡಿತ ವಿಚಾರವಾಗಿ ಮಾತನಾಡಿದ ಅವರು, ಏಳು ಕೆಜಿ ಅಕ್ಕಿ ಕೊಡುತ್ತಿದ್ದರು, ಅದನ್ನು ಎರಡು ಕೆಜಿ ಮಾಡಿದ್ದಾರೆ. ಸರ್ಕಾರಕ್ಕೆ ನಾಚಿಕೆಯಾಗಬೇಕು. ಇವರೇನು ಇವರ ಕೈಯಿಂದ ಕೊಡುತ್ತಿದ್ದಾರೆಯೇ? ಇದಕ್ಕಿಂತ ದುರಂತ ಮತ್ತೊಂದಿಲ್ಲ ಎಂದು ಸರ್ಕಾರದ ನಡೆಗೆ ಡಿಕೆಶಿ ಅಸಮಾಧಾನ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.