ಸೆಪ್ಟೆಂಬರ್‌ ಕೊನೆಯಲ್ಲಿ ರಾಜ್ಯಮಟ್ಟದ ಅರ್ಚಕರ ಸಮಾವೇಶ: ಸಚಿವೆ ಶಶಿಕಲಾ ಜೊಲ್ಲೆ

ರಾಜ್ಯದ ಹಲವಾರು ಧಾರ್ಮಿಕ ವಿಷಯಗಳ ಬಗ್ಗೆ ಚರ್ಚೆ

Team Udayavani, Jul 18, 2022, 5:37 PM IST

shashikala-jolle

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ಅಧೀನದಲ್ಲಿರುವ ದೇವಸ್ಥಾನಗಳ ಅರ್ಚಕರ ರಾಜ್ಯಮಟ್ಟದ ಸಮಾವೇಶವನ್ನು ಸೆಪ್ಟೆಂಬರ್‌ ಕೊನೆಯ ವಾರದಲ್ಲಿ ಆಯೋಜಿಸಲಾಗುವುದು ಎಂದು  ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಸೋಮವಾರ ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ 3ನೇ ರಾಜ್ಯ ಧಾರ್ಮಿಕ ಪರಿಷತ್ತಿನ 16 ನೇ ಸಭೆಯಲ್ಲಿ ರಾಜ್ಯದ ಹಲವಾರು ಧಾರ್ಮಿಕ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಧಾರಗಳನ್ನು ತಗೆದುಕೊಳ್ಳಲಾಯಿತು. ರಾಜ್ಯ ಸರಕಾರ ಮುಜರಾಯಿ ಅರ್ಚಕರ ಅಭಿವೃದ್ದಿಗಾಗಿ ಹಲವಾರು ಯೋಜನೆಗಳನ್ನು ಹೊರತಂದಿದೆ. ತಸ್ಥಿಕ್‌ ಹಣ ಹೆಚ್ಚಳ, ಅರ್ಚಕರುಗಳಿಗೆ ವಿಮಾ ಸೌಲಭ್ಯ ಸೇರಿದಂತೆ ಹಲವಾರು ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಇದಕ್ಕಾಗಿ ಮುಜರಾಯಿ ಇಲಾಖೆಯ ವತಿಯಿಂದ ಅರ್ಚಕರ ಸಮಾವೇಶ ಏರ್ಪಡಿಸುವಂತೆಯೂ ಸದಸ್ಯರು ಕೋರಿಕೆ ಸಲ್ಲಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಸೆಪ್ಟೆಂಬರ್‌ ಕೊನೆಯ ವಾರದಲ್ಲಿ ರಾಜ್ಯಮಟ್ಟದ ಸಮಾವೇಶವನ್ನು ಏರ್ಪಡಿಸುವುದಾಗಿ ತಿಳಿಸಿದರು.

ತೆರವಾಗಿರುವ ರಾಜ್ಯ ಧಾರ್ಮಿಕ ಪರಿಷತ್ತಿನ ನ್ಯಾಯಿಕ ಸದಸ್ಯರ ಸ್ಥಾನವನ್ನು ಶೀಘ್ರವಾಗಿ ತುಂಬುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಜರಾಯಿ ಇಲಾಖೆಯ ಶೇಕಡಾ 60 ರಷ್ಟು ಹುದ್ದೆಗಳು ಖಾಲಿಯಿವೆ. ಇದನ್ನು ತುಂಬಲು ನೇಮಕಾತಿಗೆ ಅವಕಾಶ ನೀಡುವಂತೆ ಆರ್ಥಿಕ ಇಲಾಖೆಗೆ ಪತ್ರಬರೆಯಲಾಗಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಶೀಘ್ರ ಕ್ರಮ ತಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯದ ಪ್ರಮುಖ ಶ್ರದ್ದಾಕೇಂದ್ರ ಕುಕ್ಕೆಯಲ್ಲಿ ಭಕ್ತಾದಿಗಳಿಗೆ ಇನ್ನೂ ಹೆಚ್ಚಿನ ಉತ್ತಮ ಸೌಕರ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪರೀಶೀಲನೆ ನಡೆಸುವಂತೆ ಆಯುಕ್ತರಿಗೆ ಸೂಚನೆ ನೀಡಲಾಯಿತು. ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸಭೆಗಳನ್ನು ಕಡ್ಡಾಯವಾಗಿ ನಡೆಸಲು ಕ್ರಮ ಕೈಗೊಳ್ಳುವಂತೆಯೂ ಹಾಗೂ ನೂತನ ಜಿಲ್ಲೆ ವಿಜಯನಗರದಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್‌ ರಚನೆಗೆ ಕ್ರಮವಹಿಸುವಂತೆ ಆಯುಕ್ತರಿಗೆ  ಸೂಚನೆ ನೀಡಿದರು.

ಕಾಶಿಯ ಕರ್ನಾಟಕ ಛತ್ರ ಸಂಪೂರ್ಣ ನವೀಕರಣ ಹಾಗೂ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ
ಕಾಶಿಯಲ್ಲಿರುವ ಕರ್ನಾಟಕ ಛತ್ರವನ್ನು ಸಂಪೂರ್ಣ ನವೀಕರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಆಯುಕ್ತರಿಗೆ ಸೂಚನೆ ನೀಡಿದರು. ಅಲ್ಲದೇ, ಕೂಡಲೇ ಅಗತ್ಯವಿರುವ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲು ಸಚಿವರು ಆದೇಶಿಸಿದರು.

ಸಭೆಯಲ್ಲಿ ರಾಜ್ಯಧಾರ್ಮಿಕ ಪರಿಷತ್ತಿನ ಸದಸ್ಯ ಕಾರ್ಯದರ್ಶಿಗಳು ಹಾಗೂ ಮುಜರಾಯಿ ಇಲಾಖೆ ಆಯುಕ್ತರಾದ ಶ್ರೀಮತಿ ರೋಹಿಣಿ ಸಿಂಧೂರಿ, ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯರುಗಳಾದ ಡಾ| ಮಹರ್ಷಿ ಆನಂದ ಗುರೂಜಿ, ಎಸ್‌ ಗೋವಿಂದ ಭಟ್‌, ಕೆ. ಸೂರ್ಯ ಕಷೇಕೋಡಿ, ಸುಭಾಷ ಕಾಂಬ್ಳೆ, ರಾಮಚಂದ್ರ ಮಟ್ಟಿ, ವಿಜಯಲಕ್ಷ್ಮಿ ಹಿರೇಮಠ, ವೈ.ಎಸ್‌. ಸಿದ್ದಲಿಂಗಪ್ರಭು ಹಾಗೂ ಇಲಾಖೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

accident2

Gangolli: ಸ್ಕೂಟರ್‌ – ಬೈಕ್‌ ಢಿಕ್ಕಿ; ಗಾಯ

ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

Congress Session: ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.