ನಿವೃತ್ತಿಯಾಗುವಷ್ಟು ಶಿಕ್ಷಕರನ್ನು ಹಿಂದಿನ ವರ್ಷವೇ ನೇಮಕ: ಸಿಎಂ ಬೊಮ್ಮಾಯಿ

ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ ಪ್ರದಾನ

Team Udayavani, Sep 5, 2022, 8:08 PM IST

ಶಿಕ್ಷಕರ ಮೇಲಿನ ಹೊರೆ ತಪ್ಪಿಸಲು ಕ್ರಮ; ಸಿಎಂ ಬೊಮ್ಮಾಯಿ

ಬೆಂಗಳೂರು: ಮುಂದಿನ ದಿನಗಳಲ್ಲಿ ಪ್ರತಿ ವರ್ಷ ನಿವೃತ್ತಿ ಹೊಂದುವಷ್ಟೇ ಸಂಖ್ಯೆಯ ಹೊಸ ಶಿಕ್ಷಕರನ್ನು ಹಿಂದಿನ ವರ್ಷವೇ ನೇಮಿಸಿ, ತರಬೇತಿ ನೀಡಲಾಗುವುದು. ಈ ಮೂಲಕ ಶಿಕ್ಷಕರ ಮೇಲಿನ ಹೊರೆ ತಪ್ಪಿಸುವ ಕೆಲಸ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ವಿಧಾನಸೌಧದ ಬ್ಯಾಕ್ವೆಂಟ್‌ ಹಾಲ್‌ನಲ್ಲಿ ಸೋಮವಾರ ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್‌ ಜನ್ಮದಿನದ ಅಂಗವಾಗಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿದ ಬಳಿಕ ಮಾತನಾಡಿ, ಸರ್ಕಾರ ಏನೇ ಮೂಲ ಸೌಕರ್ಯ ಒದಗಿಸಿದರೂ ಬೋಧನೆಗೆ ಅಗತ್ಯವಾಗಿ ಶಿಕ್ಷಕರು ಮುಖ್ಯ.

ಈ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುತ್ತಿದೆ. ಮುಂದಿನ ವರ್ಷಗಳಲ್ಲಿ ನಿವೃತ್ತಿಯಾಗುವ ಶಿಕ್ಷಕರ ಸಂಖ್ಯೆ ಆಧರಿಸಿ ಹಿಂದಿನ ವರ್ಷವೇ ನೇಮಿಸುವ ವ್ಯವಸ್ಥೆ ರೂಪಿಸಲಾಗುವುದು ಎಂದು ತಿಳಿಸಿದರು.

ಆಗಸ್ಟ್‌ ವೇಳೆಗೆ ಪ್ರತ್ಯೇಕ ಶೌಚಾಲಯ: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೂ ಮುಂದಿನ ವರ್ಷದ ಆ.15ರ ವೇಳೆಗೆ ಬಾಲಕ/ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಲಾಗುವುದು. ಇದೇ ಆ.15ರಂದು ಯೋಜನೆ ಘೋಷಿಸಿದ್ದು, ಮುಂದಿನ ವರ್ಷದ ವೇಳೆಗೆ ಪೂರ್ಣಗೊಳಿಸಲಾಗುವುದು. ಇದೇ ವೇಳೆ 4 ಸಾವಿರ ಅಂಗನವಾಡಿ ಕೇಂದ್ರಗಳನ್ನು ಸಹ ನಿರ್ಮಿಸಲಾಗುತ್ತದೆ ಎಂದರು.

ವಿದ್ಯಾರ್ಥಿಗಳಿಗೆ ಜೀವನದಲ್ಲಿ ಆತ್ಮವಿಶ್ವಾಸ ಮತ್ತು ಆತ್ಮಸ್ಥೈರ್ಯ ಕಲಿಸಿಕೊಡಬೇಕು. ಎಂತಹುದೇ ಸಂದರ್ಭವನ್ನು ಧೈರ್ಯವಾಗಿ ಎದುರಿಸುವಂತಹ ಮನೋಭಾವವನ್ನು ಶಿಕ್ಷಕರು ರೂಢಿಸಬೇಕು. ಮಕ್ಕಳಲ್ಲಿ ಮುಗ್ಧತೆ, ಕಾತುರತೆ ಎಂಬ ಗುಣಗಳಿರುತ್ತವೆ. ಕನಿಷ್ಠ 10ನೇ ತರಗತಿ ವರೆಗೆ ಮಕ್ಕಳಲ್ಲಿ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವಂತಹ ನಡವಳಿಕೆ ತುಂಬಿದರೆ ಅದಕ್ಕಿಂತ ದೊಡ್ಡ ಪ್ರಶಸ್ತಿ ಶಿಕ್ಷಕರಿಗೆ ಇಲ್ಲ ಎಂದು ಬಣ್ಣಿಸಿದರು.

ದೂರು ಸ್ವೀಕರಿಸಲು ಪ್ರತ್ಯೇಕ ಆಯೋಗ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ.ನಾಗೇಶ್‌ ಮಾತನಾಡಿ, ಕೆಲವರು ನಕಲಿ ಎನ್‌ಒಸಿ ಗಳನ್ನು ಇಟ್ಟುಕೊಂಡು ಶಾಲೆಗಳನ್ನು ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ರಾಜ್ಯದ ಖಾಸಗಿ ಶಾಲೆಗಳ ನವೀಕರಣ, ನೋಂದಣಿ, ಎನ್‌ಒಸಿ ಗಳನ್ನು ಪಡೆಯುವಲ್ಲಿ ಅಕ್ರಮ ನಡೆಯುತ್ತಿದ್ದರೆ ಅಥವಾ ಇಲಾಖೆಗೆ ಸಂಬಂಧಿಸಿದ ದೂರುಗಳನ್ನು ನೀಡಲು ಪ್ರತ್ಯೇಕ ಆಯೋಗ ರಚಿಸಲು ತೀರ್ಮಾನಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳ ಜತೆಗೂ ಚರ್ಚಿಸಲಾಗಿದೆ. ದೂರುಗಳನ್ನು ನೀಡಿದರೆ, ಸಂಬಂಧಪಟ್ಟವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು.

ಪ್ರೌಢಶಾಲೆಗೂ ಶಿಕ್ಷಕರ ನೇಮಕ: ಪ್ರಸ್ತುತ 15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಫ‌ಲಿತಾಂಶ ಪ್ರಕಟಿಸಿದ್ದು, ಸದ್ಯದಲ್ಲಿಯೇ 1:2ರ ಅನುಪಾತ ಪಟ್ಟಿ ಪ್ರಕಟಿಸಲಾಗುತ್ತದೆ. ಇದರ ಜತೆಗೆ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರನ್ನು ನೇಮಕಾತಿ ಮಾಡಲಾಗುತ್ತಿದೆ. ಇದೇ ರೀತಿ ಪ್ರೌಢಶಾಲೆಯಲ್ಲಿ ಖಾಲಿ ಇರುವ ಶಿಕ್ಷಕರ ನೇಮಕಾತಿ ಕೂಡ ನಡೆಸಲಾಗುತ್ತದೆ ಎಂದು ತಿಳಿಸಿದರು.

ಶಿಕ್ಷಕರ ದಿನಾಚರಣೆಯಂದು ಸರ್ಕಾರಿ ಶಾಲಾ ಶಿಕ್ಷಕರಿಗೆ ಮಾತ್ರ ಪ್ರಶಸ್ತಿ ನೀಡುತ್ತಿರುವುದರಿಂದ ಖಾಸಗಿ ಶಾಲಾ ಶಿಕ್ಷಕರನ್ನೂ ಪರಿಗಣಿಸಬೇಕೆಂಬ ಒತ್ತಾಯಗಳು ಕೇಳಿಬಂದಿವೆ. ಮುಂದಿನ ದಿನಗಳಲ್ಲಿ ಈ ಬೇಡಿಕೆಯನ್ನು ಈಡೇರಿಸುವ ಕೆಲಸ ಮಾಡಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ 20 ಪ್ರಾಥಮಿಕ, 11 ಪ್ರೌಢಶಾಲಾ ಮತ್ತು 10 ಪದವಿ ಪೂರ್ವ ಕಾಲೇಜುಗಳ ಶಿಕ್ಷಕರು, ಮುಖ್ಯಶಿಕ್ಷಕರು ಉಪನ್ಯಾಸಕರು ಮತ್ತು ಪ್ರಾಂಶುಪಾಲರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಹಾಗೂ 8 ಶಾಲೆಗಳಿಗೆ “ಸ್ವಾಭಿಮಾನಿ ಸಾರ್ವಜನಿಕ ಶಾಲೆ’ ಎಂಬ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಸದಸ್ಯರಾದ ಪುಟ್ಟಣ್ಣ, ಅ. ದೇವೇಗೌಡ, ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆ ಸುಧಾರಣೆಗಳ ಸಲಹೆಗಾರ ಡಾ.ಎಂ.ಆರ್‌. ದೊರೆಸ್ವಾಮಿ, ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್‌ಕುಮಾರ್‌ ಸಿಂಗ್‌, ಆಯುಕ್ತ ಡಾ.ಆರ್‌.ವಿಶಾಲ್‌, ಪಿಯು ಇಲಾಖೆ ನಿರ್ದೇಶಕ ಆರ್‌. ರಾಮಚಂದ್ರನ್‌ ಉಪಸ್ಥಿತರಿದ್ದರು.

ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿದರು. ಸಚಿವ ಬಿ.ಸಿ.ನಾಗೇಶ್‌ ಹಾಗೂ ಇತರರಿದ್ದರು.

ಟಾಪ್ ನ್ಯೂಸ್

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.