ಇಂಗ್ಲೆಂಡ್ ಪ್ರಯಾಣಿಕರಿಗೆ ರಾಜ್ಯ ಪ್ರವೇಶ ಇನ್ನೂ ಮುಕ್ತ !
Team Udayavani, Dec 29, 2020, 11:58 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: “ರೂಪಾಂತರ ವೈರಸ್’ ತೀವ್ರಗೊಂಡ ಹಿನ್ನೆಲೆಯಲ್ಲಿ ಇಂಗ್ಲೆಂಡ್‌ನಿಂದ ಬರುವ ಲೋಹದ ಹಕ್ಕಿಗಳ ಮೇಲೆ ಭಾರತ ನಿರ್ಬಂಧ ವಿಧಿಸಿದೆ. ಆದಾಗ್ಯೂ ಇಂಗ್ಲೆಂಡ್‌ನಿಂದ ಆಗಮಿಸುವ ಪ್ರಯಾಣಿಕರಿಗೆ ಪರೋಕ್ಷವಾಗಿ ರಾಜ್ಯದಲ್ಲಿ ಈಗಲೂ ಪ್ರವೇಶ ಮುಕ್ತವಾಗಿದೆ!
ಇಂಗ್ಲೆಂಡ್‌ನಿಂದ ನೇರವಾಗಿ ಅಥವಾ ಬೇರೆ ದೇಶಗಳ ಮೂಲಕ ಭಾರತಕ್ಕೆ ಬರುವ ವಿಮಾನಗಳ ಮೇಲೆ ಡಿ. 31ರವರೆಗೆ ನಿರ್ಬಂಧ ವಿಧಿಸಿದೆ. ಇದನ್ನು ಇನ್ನಷ್ಟು ದಿನಗಳ ಕಾಲ ವಿಸ್ತರಿಸುವ ಸುಳಿವನ್ನೂ ಸರಕಾರ ನೀಡಿದೆ. ಆದರೆ, ನೆರೆಯ ಹತ್ತಾರು ರಾಷ್ಟ್ರಗಳು ಈಗಲೂ ಇಂಗ್ಲೆಂಡ್ ವಿಮಾನಗಳಿಗೆ ನಿರ್ಬಂಧ ಹೇರಿಲ್ಲ. ಇದರ ಲಾಭ ಪಡೆದು ಕಣ್ತಪ್ಪಿಸಿ ಕರ್ನಾಟಕಕ್ಕೆ ನುಸುಳಲು ಸಾಕಷ್ಟು ಅವಕಾಶಗಳಿವೆ.
ಉದಾಹರಣೆಗೆ ಬ್ರಿಟನ್‌ನಿಂದ ಅಮೆರಿಕಕ್ಕೆ ತೆರಳಿ, ಅಲ್ಲಿ ಮೂರ್‍ನಾಲ್ಕು ದಿನಗಳಿದ್ದು, ನಂತರ ಬೆಂಗಳೂರಿಗೆ ಯಾವುದೇ ನಿರ್ಬಂಧಗಳಿಲ್ಲದೆ ಆಗಮಿಸಬಹುದು. ಹೀಗೆ ಬಂದವರಲ್ಲಿ “ಬ್ರಿಟನ್ ರೂಪಾಂತರ ವೈರಸ್’ ಸೋಂಕು ಮನೆ ಮಾಡಿರುವ ಸಾಧ್ಯತೆ ಇದೆ. ಆದರೆ, ಅಂತಹವರು ಪರೀಕ್ಷೆಗೊಳಪಡುವುದೇ ಇಲ್ಲ. ನೇರವಾಗಿ ನಗರ ಪ್ರವೇಶಿಸುತ್ತಾರೆ. ಹಾಗಾಗಿ, ಇದು ಮತ್ತೂಂದು ಹಂತದ ಸೋಂಕಿನ ತೀವ್ರತೆಗೆ ಕಾರಣವಾಗುವ ಸಾಧ್ಯತೆ ಇದೆ.
ಇಂಗ್ಲೆಂಡ್ ಸೇರಿದಂತೆ ಎರಡು-ಮೂರು ರಾಷ್ಟ್ರಗಳಲ್ಲಿ ರೂಪಾಂತರ ಕೊರೊನಾ ವೈರಸ್ ಹಾವಳಿ ಹೆಚ್ಚುತ್ತಿದೆ. ಈ ಮಧ್ಯೆ ಮಂಗಳವಾರ ಆರು ರೂಪಾಂತರ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದರಿಂದ ನಿಯಮಗಳು ಮತ್ತಷ್ಟು ಬಿಗಿಗೊಳ್ಳುವ ಸಾಧ್ಯತೆ ಇದ್ದು, ಇದು ಅನಿವಾಸಿ ಭಾರತೀಯರಿಗೆ ಇದು ತುಸು ನಿರಾಸೆ ಉಂಟುಮಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.