State Railway Project; ಸಚಿವ ಅಶ್ವಿನಿ ವೈಷ್ಣವ್ ಜತೆ ಎಚ್‌ಡಿಕೆ ಚರ್ಚೆ
ನನೆಗುದಿಗೆ ಬಿದ್ದಿರುವ, ಚಾಲ್ತಿಯಲ್ಲಿರುವ ಯೋಜನಗಳ ಬಗ್ಗೆ ಮಾತುಕತೆ
Team Udayavani, Jun 19, 2024, 9:03 PM IST
ಬೆಂಗಳೂರು: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಕಳೆದ ಒಂದು ವಾರದಿಂದ ರಾಜ್ಯದಲ್ಲೇ ಇದ್ದ ಎಚ್.ಡಿ. ಕುಮಾರಸ್ವಾಮಿ, ಬುಧವಾರ ನವದೆಹಲಿ ತಲುಪಿದ್ದು, ರಾಜ್ಯದ ರೈಲ್ವೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಬುಧವಾರ ಮುಂಜಾನೆ 4.30ಕ್ಕೆ ಬೆಂಗಳೂರಿನಿಂದ ಹೊರಟು 9 ಗಂಟೆಗೆ ದೆಹಲಿ ತಲುಪಿದ ಅವರು, ರೈಲ್ವೆ ಭವನಕ್ಕೆ ತೆರಳಿ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ 1 ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು. ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವುದು, ಹೊಸ ರೈಲ್ವೆ ಕಾಮಗಾರಿಗಳಿಗೆ ಅನುಮೋದನೆ ನೀಡುವುದು, ಹಣಕಾಸಿನ ಅನುದಾನ ಒದಗಿಸುವ ಬಗ್ಗೆ ಸಮಾಲೋಚನೆ ನಡೆಸಿದರು.
ಪ್ರಮುಖವಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕಾಲದಲ್ಲಿ ಮಂಜೂರಾಗಿದ್ದ ಕನಕಪುರ- ಮಳವಳ್ಳಿ ಮಾರ್ಗವಾಗಿ ಬೆಂಗಳೂರು – ಸತ್ಯಮಂಗಲ – ಚಾಮರಾಜನಗರ ನಡುವಿನ ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು ಆದಷ್ಟು ಶೀಘ್ರ ಪೂರ್ಣಗೊಳಿಸಲು ಮನವಿ ಮಾಡಿದರು.
ರಾಜ್ಯದ ವಿದ್ಯಮಾನ ಚರ್ಚೆ:
ಗೃಹ ಸಚಿವ ಅಮಿತ್ ಶಾ ಅವರ ನಿವಾಸಕ್ಕೂ ತೆರಳಿದ ಕುಮಾರಸ್ವಾಮಿ, ರಾಜ್ಯದ ಹಲವು ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ. ಉದ್ಯೋಗ ಭವನದಲ್ಲಿ ವಿವಿಧ ನಿಯೋಗಗಳ ಭೇಟಿ ಮಾಡಿದ ಅವರು, ಉಕ್ಕು ಮತ್ತು ಭಾರೀ ಕೈಗಾರಿಕೆ ರಾಜ್ಯ ಖಾತೆ ಸಚಿವ ಭೂಪತಿರಾಜು ಶ್ರೀನಿವಾಸವರ್ಮ ಅವರನ್ನೂ ಒಳಗೊಂಡು ಇಲಾಖೆಯ ಅಧಿಕಾರಿಗಳ ಜತೆಗೆ ಸಭೆ ನಡೆಸಿದ್ದಾರೆ.
ಉದ್ಯೋಗ ಭವನದಲ್ಲಿಅಧಿಕಾರಿಗಳ ಜತೆಗೆ ಸಭೆ ನಡೆಸಿದ ಎಚ್‌ಡಿಕೆ, ನಂತರ ಭಾರತ್ ಹೆವಿ ಎಲೆಕ್ಟ್ರಿಕಲ್ ಕಂಪನಿ (ಬಿಎಚ್‌ಇಎಲ್) ಆಡಳಿತ ಮಂಡಳಿ ಸಭೆಯಲ್ಲಿ ಪಾಲ್ಗೊಂಡರು. ವಿದ್ಯುತ್, ರಕ್ಷಣೆ, ಕೈಗಾರಿಕೆ, ಸಂಶೋಧನೆ ಮತ್ತು ಅಭಿವೃದ್ಧಿ ವಲಯಗಳಲ್ಲಿ ಬಿಎಚ್‌ಇಎಲ್ ಕಾರ್ಯಚಟುವಟಿಕೆ ಕುರಿತು ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಕೆ.ಸದಾಶಿವಮೂರ್ತಿ ಅವರು ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಿದರು. ಈ ವೇಳೆ ಸಚಿವಾಲಯದ ಕಾರ್ಯದರ್ಶಿ ಕಮರನ್ ರಿಜ್ವಿ ಸೇರಿದಂತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ
Winter Session Issue: ಬಂಧನ, ಪೊಲೀಸ್ ದೌರ್ಜನ್ಯ: ಡಿಜಿಪಿಗೆ ಸಿ.ಟಿ.ರವಿ ದೂರು
Valmiki Nigama: ಜಪ್ತಿ ಮಾಡಿರುವ 6.11 ಕೋಟಿ ರೂ. ಬಿಡುಗಡೆಗೆ ಸೂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.