ರಾಜ್ಯದಲ್ಲಿ50 ಸಾವಿರ ಕೋಟಿ ರೂ. ಹೂಡಿಕೆ; ಇಂಧನ ಕ್ಷೇತ್ರದಲ್ಲಿ ಭರ್ಜರಿ ಒಪ್ಪಂದ
Team Udayavani, May 25, 2022, 6:35 AM IST
ದಾವೋಸ್: ಕರ್ನಾಟಕದಲ್ಲಿ ನವೀ ಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ಸಂಬಂಧಿಸಿ ರೆನ್ಯೂ ಪವರ್ ಪ್ರೈ.ಲಿ ಕಂಪೆನಿ ರಾಜ್ಯದಲ್ಲಿ 50 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲಿದೆ.
ಈ ಬಗ್ಗೆ ಸ್ವಿಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವ ರು ಕಂಪೆನಿಯ ಪ್ರತಿನಿಧಿಗಳ ಜತೆಗೆ ಮಾತುಕತೆ ನಡೆಸಿ, ಒಪ್ಪಂದಕ್ಕೆ ಸಹಿ ಹಾಕಿದರು.
ಪ್ರಧಾನ ಅಂಶವೆಂದರೆ ಬೊಮ್ಮಾಯಿ ಮುಖ್ಯಮಂತ್ರಿಯಾದ ಅನಂತರ ರಾಜ್ಯದಲ್ಲಿ ಹೂಡಿಕೆ ಯಾಗುತ್ತಿರುವ ದೊಡ್ಡ ಮೊತ್ತದ ಬಂಡವಾಳ ಇದಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಕರ್ನಾಟಕದ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಈ ಒಪ್ಪಂದ ಪ್ರಮುಖ ಮೈಲಿಗಲ್ಲಾಗಿದೆ ಎಂದರು.
ರೆನ್ಯೂ ಪವರ್ ಪ್ರೈ. ಲಿ. ಕಂಪೆನಿ ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋ ಜನ್ ಘಟಕಗಳನ್ನು ಸ್ಥಾಪಿಸಲುದ್ದೇ ಶಿಸಿದೆ. 2 ಹಂತಗ ಳಲ್ಲಿ ಯೋಜನೆಗಳನ್ನು ಕೈಗೊಳ್ಳ ಲಾಗುತ್ತದೆ.
ಮೊದಲ ಹಂತದಲ್ಲಿ ಈಗಾಗಲೇ ಇರುವ ಯೋಜನೆಗಳಿಗೆ 11,900 ಕೋಟಿ ರೂ.ಗಳ ಹೂಡಿಕೆ ಮಾಡಲಿದೆ ಮತ್ತು ಮುಂದಿನ 2 ವರ್ಷಗಳಲ್ಲಿ ಯೋಜನೆಗಳು ಕಾರ್ಯಾರಂಭ ಮಾಡಲಾಗುತ್ತದೆ. ಎರಡನೇ ಹಂತದಲ್ಲಿ ನವೀಕರಿಸಬಹುದಾದ ಇಂಧನ ಹಾಗೂ ಗ್ರೀನ್ ಹೈಡ್ರೋಜನ್ ಘಟಕಗಳನ್ನು 5 ವರ್ಷಗಳಲ್ಲಿ ಸ್ಥಾಪಿಸಲು 37,500 ಕೋಟಿ ರೂ.ಹೂಡಿಕೆ ಮಾಡಲಾಗುತ್ತದೆ. ಈ ಎರಡು ಹಂತದ ಯೋಜನೆಗಳಿಂದ ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ ಎಂದರು.
ರೆನ್ಯೂ ಪವರ್ ಪ್ರೈ.ಲಿ. ಸಂಸ್ಥೆ
ಭಾರತದಲ್ಲಿ ನವೀಕರಿಸ ಬಹುದಾದ ಇಂಧ ನದ ಉತ್ಪಾದನೆಯಲ್ಲಿ ತೊಡಗಿರುವ ಅತ್ಯಂತ ದೊಡ್ಡ ಸಂಸ್ಥೆ. ಭಾರತದ 9 ರಾಜ್ಯಗಳಲ್ಲಿ 120ಕ್ಕೂ ಹೆಚ್ಚು ಪವನ, ಸೌರ ಹಾಗೂ ಹೈಡ್ರೋ ಇಂಧನ ಪ್ರಾಜೆಕ್ಟ್ಗಳನ್ನು ಸ್ಥಾಪಿಸಿದೆ.
ಮೆಗಾ ಡಾಟಾ ಸೆಂಟರ್
ಇದಕ್ಕೂ ಮುನ್ನ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಭಾರ್ತಿ ಎಂಟರ್ ಪ್ರೈಸಸ್‌ನ ಅಧ್ಯಕ್ಷ ಹಾಗೂ ಸಿಇಒ ಸುನಿಲ್ ಭಾರ್ತಿ ಮಿತ್ತಲ್ ಅವರು ರಾಜ್ಯದಲ್ಲಿ ಇನ್ನೊಂದು ಮೆಗಾ ಡಾಟಾ ಸೆಂಟರ್ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಿದರು. ಅಗತ್ಯ ಬೆಂಬಲ ನೀಡುವುದಾಗಿ ಮುಖ್ಯಮಂತ್ರಿಗ ತಿಳಿಸಿದರು.
ಮುಖ್ಯಮಂತ್ರಿ ಬೊಮ್ಮಾಯಿ ಅವರು ಮಂಗಳವಾರ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರೊಂದಿಗೆ ಹಾಗೂ ಜಾನ್ಸನ್ ಕಂಟ್ರೋಲ್ಸನ ಸಿಇಒ ಜಾರ್ಜ್ ಒಲಿವರ್, ಹನಿವೇಲ್ ಹಾಗೂ ಐಬಿಎಂ ಸಂಸ್ಥೆಗಳ ಮುಖ್ಯಸ್ಥರೊಂಂದಿಗೆ ಕರ್ನಾಟಕದಲ್ಲಿನ ಹೂಡಿಕೆಗಳ ಅವಕಾಶ ಗಳ ಬಗ್ಗೆ ಮಾತುಕತೆ ನಡೆಸಿದರು. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ| ಸಿ.ಎನ್. ಅಶ್ವತ್ಥನಾರಾಯಣ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ| ಇ.ವಿ. ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.