ಉಕ್ರೇನ್‌ನಲ್ಲಿ ರಾಜ್ಯದ ವಿದ್ಯಾರ್ಥಿ ಬಲಿ: ಕಾಂಗ್ರೆಸ್ ಆಕ್ರೋಶ
Team Udayavani, Mar 1, 2022, 10:30 PM IST
ಬೆಂಗಳೂರು: ಉಕ್ರೇನ್‌ನಲ್ಲಿ ಹಾವೇರಿ ವಿದ್ಯಾರ್ಥಿ ನವೀನ್ ಅಸುನೀಗಲು ಕೇಂದ್ರ ಸರ್ಕಾರದ ವೈಫಲ್ಯವೇ ಕಾರಣ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಉತ್ತಮ ಭವಿಷ್ಯದ ಕನಸು ಕಂಡಿದ್ದ ಯುವಕನ ಬಲಿಗೆ ಕೇಂದ್ರ ಸರ್ಕಾರವೇ ಕಾರಣ. ರಷ್ಯಾ ಸರ್ಕಾರ ಸಾಕಷ್ಟು ಮುನ್ನಚ್ಚರಿಕೆ ಕೊಟ್ಟರೂ ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದ ನವೀನ್ ಬಲಿಯಾಗುವಂತಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಪ್ರಧಾನಿ ನರೇಂದ್ರಮೋದಿ ಅವರು ರಾಜತಾಂತ್ರಿಕ ಸಂಪರ್ಕ ಬಳಸಿ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಆತಂಕಕಾರಿ ಬೆಳವಣಿಗೆ
ನಮ್ಮ ವಿದ್ಯಾರ್ಥಿ ಉಕ್ರೇನ್ ನಲ್ಲಿ ಬಲಿಯಾಗಿರುವುದು ಬಹಳ ಆತಂಕ ಮೂಡಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಮ್ಮ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಅಲ್ಲಿಗೆ ತೆರಳಿದ್ದಾರೆ. ನಮ್ಮಲ್ಲಿ ಸಾಕಷ್ಟು ಮೆಡಿಕಲ್ ಕಾಲೇಜುಗಳಿದ್ದರೂ ಬೇಡಿಕೆ ಹೆಚ್ಚಾಗಿರುವುದರಿಂದ ಸಾಕಷ್ಟು ನಮ್ಮ ವಿದ್ಯಾರ್ಥಿಗಳು ಉಕ್ರೇನ್ ಗೆ ತೆರಳಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ವಿಶ್ವದ ಇತರೆ ದೇಶಗಳು ತಮ್ಮ ವಿದ್ಯಾರ್ಥಿಗಳನ್ನು ವಾಪಸ್ ಕರೆಸಿಕೊಂಡಿದ್ದರೆ, ನಮ್ಮ ದೇಶದ ಸರ್ಕಾರ ಇನ್ನೂ ಮೀನಾಮೇಷ ಎಣಿಸುತ್ತಿದೆ ಎಂದು ಟೀಕಿಸಿದ್ದಾರೆ.
ಕೇಂದ್ರ ಸರ್ಕಾರ ನಿನ್ನೆಯಷ್ಟೇ ನಾಲ್ವರು ಸಚಿವರನ್ನು ವಿದ್ಯಾರ್ಥಿಗಳ ರಕ್ಷಣಾ ಕಾರ್ಯಕ್ಕೆ ನಿಯೋಜಿಸಿದೆ. ಕೇಂದ್ರ ಸರ್ಕಾರಕ್ಕೆ ಎಷ್ಟು ಬೇಜವಾಬ್ದಾರಿ ಇದೆ ಎಂಬುದನ್ನು ಇದು ತೋರುತ್ತದೆ.
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನಮ್ಮ ವಿದ್ಯಾರ್ಥಿಗಳ ರಕ್ಷಣೆ ವಿಚಾರದಲ್ಲಿ ವಿಫಲವಾಗಿವೆ. ಇನ್ನಾದರೂ ತುರ್ತು ಕ್ರಮ ಕೈಗೊಂಡು ಭಾರತೀಯರನ್ನು ತಾಯ್ನಾಡಿಗೆ ವಾಪಸ್ ಕರೆಸಿಕೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರಧಾನಿಗಳು ತಾವು ವಿಶ್ವಗುರು ಎಂದು ಬಿಂಬಿಸಿಕೊಳ್ಳುತ್ತಾರೆ. ಇದೇನಾ ವಿಶ್ವಗುರುವಿನ ಲಕ್ಷಣ ಎಂದು ಪ್ರಶ್ನಿಸಿದರು.
ನಮ್ಮ ವಿದೇಶಾಂಗ ನೀತಿ ಸಂಪೂರ್ಣ ವಿಫಲವಾಗಿದ್ದು, ಭಾರತೀಯರು ಆತ್ಮವಿಶ್ವಾಸ ಕಳೆದುಕೊಂಡಿದ್ದಾರೆ. ಸರ್ಕಾರ ಈ ಕೂಡಲೇ ಯುದ್ಧದಲ್ಲಿ ಸಿಲುಕಿರುವ ಭಾರತೀಯರನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’
BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್.ಟಿ. ಸೋಮಶೇಖರ್
Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್. ಸಂತೋಷ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.