ಕವಾಡಿಗರಹಟ್ಟಿ ಘಟನೆ ತನಿಖೆಗೆ ರಾಜ್ಯ ತಂಡ: ದಿನೇಶ್ ಗುಂಡೂರಾವ್
Team Udayavani, Aug 5, 2023, 11:29 PM IST
ಚಿತ್ರದುರ್ಗ: ಕವಾಡಿಗರಹಟ್ಟಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮೀಕ್ಷೆ ಮಾಡಿ ವರದಿ ಕೊಡಲು ರಾಜ್ಯ ಸರಕಾರದಿಂದ ತಂಡ ಕಳುಹಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಕಲುಷಿತ ನೀರು ಸೇವಿಸಿ ಐವರು ಮೃತಪಟ್ಟು, 180ಕ್ಕೂ ಹೆಚ್ಚು ಜನರು ಅಸ್ವಸ್ಥರಾದ ಕವಾಡಿಗರಹಟ್ಟಿಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಇದೇ ಸಂದರ್ಭದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿ ಧಿಯಿಂದ 5 ಲಕ್ಷ ರೂ. ಹಾಗೂ ನಗರಸಭೆ ನಿ ಧಿಯಿಂದ 5 ಲಕ್ಷ ರೂ. ಸೇರಿ ತಲಾ 10 ಲಕ್ಷ ರೂ. ಪರಿಹಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಸ್ತಾಂತರಿಸಿದರು.
ಜಿಲ್ಲಾ ಶಸ್ತ್ರಚಿಕಿತ್ಸಕರ ಅಮಾನತಿಗೆ ಸೂಚನೆ
ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದು, ರೋಗಿಗಳಿಂದ ಹಣ ಪಡೆಯುತ್ತಿದ್ದ ಆರೋಪದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಬಸವರಾಜ್ ಅವರನ್ನು ಅಮಾನತು ಮಾಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.