ನಕ್ಸಲರು ನುಸುಳುವ ಆತಂಕ: ರಾಜ್ಯದಲ್ಲಿ ಕಟ್ಟೆಚ್ಚರ
Team Udayavani, Mar 10, 2019, 12:20 AM IST
ಮಡಿಕೇರಿ/ಬೆಂಗಳೂರು: ಕೇರಳದ ವಯನಾಡು, ಚಾಮರಾಜನಗರ ಗಡಿ ಸೇರಿದಂತೆ ಕೊಡಗು-ಕೇರಳ ಗಡಿಗಳಿಗೆ ಹೊಂದಿಕೊಂಡಂತಿರುವ ದಟ್ಟ ಅರಣ್ಯಗಳಲ್ಲಿ ಶಂಕಿತ ನಕ್ಸಲರ ಚಲನವಲನ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಗಡಿ ಭಾಗಗಳಲ್ಲಿ ಶೋಧ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ. ಅಂತೆಯೇ ನಕ್ಸಲರು ರಾಜ್ಯಕ್ಕೆ ಆಗಮಿಸುವ ವದಂತಿ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ.
ಕೇರಳದ ವಯನಾಡಿನ ಅರಣ್ಯದಲ್ಲಿ ಶಂಕಿತ ನಕ್ಸಲರು ಮತ್ತು ಕೇರಳದ ಥಂಡರ್ ಬೋಲ್ಟ್ ಕಮಾಂಡೋಗಳ ನಡುವೆ ಪರಸ್ಪರ ಗುಂಡಿನ ಚಕಮಕಿ ನಡೆದಿದೆ ಎನ್ನಲಾಗುತ್ತಿದೆ. ಗುಂಡಿನ ಚಕಮಕಿಯ ಬಳಿಕ ನಕ್ಸಲರು ತಪ್ಪಿಸಿಕೊಂಡಿದ್ದು, ಕೊಡಗು ಜಿಲ್ಲೆಯ ಕಡೆ ನುಸುಳುವ ಸಾಧ್ಯತೆಯಿದೆ ಎಂದು ರಾಜ್ಯ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ನಕ್ಸಲ್ ನಿಗ್ರಹ ದಳದ 2 ತಂಡಗಳ 60 ಶಸ್ತ್ರಸಜ್ಜಿತ ಸಿಬ್ಬಂದಿ ಮತ್ತು ಪೊಲೀಸ್ ಸಶಸ್ತ್ರ ದಳದ ಸಿಬ್ಬಂದಿ ಶೋಧ ನಡೆಸುತ್ತಿದ್ದು, ಕೊಡಗು ಜಿಲ್ಲೆಯ ಗಡಿ ಭಾಗಗಳಲ್ಲಿ ಹದ್ದಿನ ಕಣ್ಣಿಡಲಾಗಿದೆ. ಈ ಕುರಿತು “ಉದಯವಾಣಿ’ ಜತೆ ಮಾತನಾಡಿದ ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಕಮಲ್‌ಪಂಥ್, “ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳು ಚಿಗುರಲು ಅವಕಾಶ ನೀಡದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಕ್ಸಲ್ ಕೇಂದ್ರಿತ ಭಾಗಗಳಲ್ಲಿ ಆಗಾಗ್ಗೆ ಕೂಂಬಿಂಗ್ ಕಾರ್ಯಾಚರಣೆ ಕೂಡ ಮಾಡಲಾಗುತ್ತಿರುತ್ತದೆ ಎಂದು ಹೇಳಿದರು.
ರಾಜ್ಯ ಗುಪ್ತದಳ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ 15 ದಿನಗಳಿಂದ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಕೊಡಗು ಎಸ್‌ಪಿ ಡಾ. ಸುಮನ್ ಪನ್ನೇಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.