ಮಂಜುನಾಥ್, ನಲಪಾಡ್, ರಕ್ಷಾ ನಡುವೆ ಪೈಪೋಟಿ
Team Udayavani, Jan 11, 2021, 1:26 AM IST
ಬೆಂಗಳೂರು: ತೀವ್ರ ಕುತೂಹಲ ಹಾಗೂ ಪೈಪೋಟಿಗೆ ಕಾರಣವಾಗಿರುವ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹತ್ತು ಜಿಲ್ಲೆಗಳಲ್ಲಿ ರವಿವಾರ ಮತದಾನ ನಡೆದು ಮೊದಲ ದಿನ 59,418 ಮತ ಚಲಾವಣೆಯಾಗಿದೆ.
ಇದೇ ಮೊದಲ ಬಾರಿಗೆ ಆನ್‌ಲೈನ್ ಮತದಾನ ನಡೆದಿರುವುದು ವಿಶೇಷ. ಒಟ್ಟು 4.20 ಲಕ್ಷ ಮತದಾರ ರಿದ್ದು ಸೋಮವಾರ ಮತ್ತು ಮಂಗಳವಾರವೂ ಮತದಾನ ನಡೆಯಲಿದೆ.
ಎನ್‌ಎಸ್‌ಯುಐ ಅಧ್ಯಕ್ಷ ಎಚ್.ಎಸ್. ಮಂಜುನಾಥ್, ಮಾಜಿ ಸಚಿವ ಎಂ.ಆರ್. ಸೀತಾರಾಮ್ ಪುತ್ರ ರಕ್ಷಾ ರಾಮಯ್ಯ, ಶಾಸಕ ಎನ್.ಎ. ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ನಡುವೆ ಪೈಪೋಟಿಯಿದೆ ಎಂದು ಹೇಳಲಾಗಿದೆ. ಸಂದೀಪ್ ನಾಯಕ್, ಭವ್ಯಾ, ಖಾಲೀದ್ ಸಹ ಕಣದಲ್ಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಮಿಥುನ್ ರೈ ಶನಿವಾರ ದಿಢೀರ್ ಕಣದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದರಿಂದ ಮಂಜುನಾಥ್ ಹಾಗೂ ರಕ್ಷಾ ರಾಮಯ್ಯ ಅವರಿಗೆ ಸಹಕಾರಿಯಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಮೊದಲ ದಿನ ಬೆಂಗಳೂರು ದಕ್ಷಿಣ, ಕೋಲಾರ, ಮೈಸೂರು ನಗರ, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ ನಗರ, ಗ್ರಾಮಾಂತರ, ಬಳ್ಳಾರಿ ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕೋಡಿಯಲ್ಲಿ ಮತದಾನ ನಡೆಯಿತು.
ತಾಂತ್ರಿಕ ತೊಂದರೆಯಿಂದಾಗಿ ಆ್ಯಪ್ ಕೈಕೊಟ್ಟ ಹಿನ್ನೆಲೆಯಲ್ಲಿ ಎರಡು ಗಂಟೆ ಮತದಾನದ ಸಮಯ ವಿಸ್ತರಿಸಲಾಗಿತ್ತು. ಬೆಳಗ್ಗೆ 9ರಿಂದ 4ರ ವರೆಗೆ ನಿಗದಿಯಾಗಿತ್ತಾದರೂ ತಾಂತ್ರಿಕ ಸಮಸ್ಯೆ ಎದುರಾಗಿ ಮತದಾನ ಸ್ಥಗಿತಗೊಂಡ ಕಾರಣ ಚುನಾವಣಾಧಿಕಾರಿಗಳು ಮತದಾನದ ಸಮಯವನ್ನು 6 ಗಂಟೆವರೆಗೆ ವಿಸ್ತರಿಸಿದರು.
ದ.ಕ. ಜಿಲ್ಲೆಯಲ್ಲಿ ಇಂದು ಮತದಾನ :
ಸೋಮವಾರ ಬೆಂಗಳೂರು ಕೇಂದ್ರ, ವಿಜಯಪುರ, ಬಳ್ಳಾರಿ ಗ್ರಾಮಾಂತರ, ದಕ್ಷಿಣ ಕನ್ನಡ, ಗದಗ, ಹುಬ್ಬಳ್ಳಿ ಧಾರವಾಡ, ಕೊಪ್ಪಳ, ಮೈಸೂರು ಗ್ರಾಮಾಂತರ, ತುಮಕೂರು, ಉತ್ತರ ಕನ್ನಡ, ಯಾದಗಿರಿ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.
ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಹಸ್ತಕ್ಷೇಪ ಇಲ್ಲ: ಡಿ.ಕೆ. ಶಿವಕುಮಾರ್ :
ಬೆಂಗಳೂರು: ‘ಯೂತ್ ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಪಾರದರ್ಶಕವಾಗಿ ನಡೆಯಲಿ. ಪಕ್ಷ ಸಂಘಟನೆ ಮಾಡುವ ಉತ್ತಮ ನಾಯಕನ ಆಯ್ಕೆಯಾಗಲಿ ಎಂಬುದು ತಮ್ಮ ಆಶಯ. ತಾವು ಈ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ರವಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ತಾಲೂಕು ಮಟ್ಟದಿಂದ ರಾಷ್ಟ್ರಮಟ್ಟದವರೆಗೂ ನಾಯಕರು ಬೆಳೆಯಬೇಕೆಂಬುದು ರಾಜೀವ್ ಗಾಂಧಿ ಅವರ ಚಿಂತನೆ. ಅದಕ್ಕಾಗಿ ಅವರು ಸಂವಿಧಾನ ತಿದ್ದುಪಡಿ ತಂದರು. ನಾವು ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಿಲ್ಲಿಸಿದ್ದೇವೆ. ಹೀಗಾಗಿ ಯೂತ್ ಕಾಂಗ್ರೆಸ್ ಚುನಾವಣೆ ನಡೆಯುತ್ತಿದೆ ಎಂದರು.
ಮಂಗಳೂರಿನಲ್ಲಿ ಮಿಥುನ್ ರೈಗೆ ಹೆಚ್ಚಿನ ಜವಾಬ್ದಾರಿ ಇದೆ. ಹಿಂದೆ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ನಾನು ಅವರಿಗೆ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಸಲಹೆ ಕೊಟ್ಟೆ ಎಂದು ಡಿಕೆಶಿ ಸ್ಪಷ್ಟನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.