ಅಂಬಿ ಸಾವನ್ನೂ ಎಳೆತಂದ ರೇವಣ್ಣ : ಸುಮಲತಾ ಕುರಿತ ಹೇಳಿಕೆಗೆ ಆಕ್ರೋಶ
Team Udayavani, Mar 9, 2019, 12:30 AM IST
ಬೆಂಗಳೂರು: “ಗಂಡ ತೀರಿಹೋಗಿ ತಿಂಗಳಾಗಿಲ್ಲ, ಆಗಲೇ ರಾಜಕೀಯಕ್ಕೆ ಬಂದಿದ್ದಾರೆ” ಎಂಬ ಸುಮಲತಾ ಕುರಿತ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣಅವರ ಹೇಳಿಕೆ ಭಾರೀ ವಿವಾ ದ ಸೃಷ್ಟಿಸಿದೆ. ಪ್ರತಿಪಕ್ಷ ಬಿಜೆಪಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ರೇವಣ್ಣ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದ್ದರೆ, ಪ್ರಚೋದನಕಾರಿ ಹೇಳಿಕೆ ನೀಡಿ, ನನ್ನಿಂದ ಬೇರೆ ಯದೇ ಮಾತು ಗಳನ್ನಾಡಿಸುವ ಯಾರ ಯತ್ನವೂ ಸಫಲವಾಗುವುದಿಲ್ಲ. ನನ್ನ ಆತ್ಮ ಸ್ಥೈರ್ಯ ಕುಗ್ಗಿ ಸಲೂ ಆಗುವುದಿಲ್ಲ ಎಂದು ಅಂಬಿ ಪತ್ನಿ ಸುಮಲತಾ ತಿರುಗೇಟು ನೀಡಿದ್ದಾರೆ.
ಬಿಜೆಪಿ ಆಕ್ಷೇಪ: ರೇವಣ್ಣ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವ ಸುರೇಶ್ ಕುಮಾರ್ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್, ಅಂತಾರಾಷ್ಟ್ರೀಯ ಮಹಿಳಾದಿನದಂದೇ ಜವಾಬ್ದಾರಿ ಸಚಿವರೊಬ್ಬರು ಈರೀತಿ ಯ ಹೇಳಿಕೆ ನೀಡಿರುವುದು ಸರಿಯಲ್ಲ. ಇದು ಇಂದಿನ ರಾಜಕಾರಣಿಗಳ ಹಾಗೂ ರಾಜಕೀಯ ಪರಿಸ್ಥಿತಿಯನ್ನು ಎತ್ತಿ ತೋರಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಜನರಿಗೆ ಸಿನಿಮಾ ಟಿಕೆಟ್; ಕುಟುಂಬಕ್ಕೆ ಎಂಪಿ, ಎಂಎಲ್‌ಎ, ಎಂಎಲ್‌ಸಿ, ಜಿಪಂ ಟಿಕೆಟ್ ಎನ್ನುವ ಸಿದ್ಧಾಂತ ದೇವೇಗೌಡರ ಕುಟುಂಬ ಹೊಂದಿದೆ. ಸಚಿವ ರೇವಣ್ಣನವರ ಹೇಳಿಕೆ ಅತ್ಯಂತ ಸಣ್ಣ ಮನಸ್ಸಿನಿಂದ, ದ್ವೇಷದಿಂದ ಕೂಡಿದೆ. ಇವರ ಕುಟುಂಬ ಬಿಟ್ಟು ಬೇರೆ ಯಾರೂ ರಾಜಕೀಯವಾಗಿ ಬೆಳೆಯಬಾರದು, ಹೀಗಾಗಿ ಸುಮಲತಾ ಅಂಬರೀಶ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಇದು ರಾಜ್ಯ ಮಹಿಳೆಯರಿಗೆ ಅವಮಾನ ಮಾಡಿದಂತೆ. ಸಚಿವ ರೇವಣ್ಣ ಕೂಡಲೇ ಕ್ಷಮೆಯಾಚಿಸಬೇಕು ಎಂದು ರವಿಕುಮಾರ್ ಆಗ್ರಹಿಸಿದರು. ಜಾಲತಾಣಗಳಲ್ಲೂ ಈ ಬಗ್ಗೆ ಭಾರೀ ಚರ್ಚೆಯಾಗಿದೆ.
ನಾವೆಲ್ಲಾ ಸಾಮಾಜಿಕ ಕ್ಷೇತ್ರದಲ್ಲಿರುವವರು. ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು. ಯಾವುದು, ಸರಿ, ತಪ್ಪು ಎಂಬ ತಿಳಿವಳಿಕೆಯಿಂದ ಮಾತನಾಡಬೇಕು.
●ಸುಮಲತಾ, ಅಂಬರೀಶ್ ಪತ್ನಿ
ರೇವಣ್ಣ ಹೇಳಿದ್ದೇನು?
ದೆಹಲಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳಿದ್ದ ಎಚ್.ಡಿ.ರೇವಣ್ಣ ಅವರು ಮಾಧ್ಯಮದವರ ಜತೆ ಮಾತನಾ ಡುತ್ತಾ, ಅಂಬರೀಷ್ ಅವರು ತೀರಿ ಹೋಗಿ ಇನ್ನೂ ಒಂದು ತಿಂಗಳಾಗಿಲ್ಲ,ಆಗಲೇ ಸುಮಲತಾ ಅವರು ರಾಜಕೀಯಕ್ಕೆ ಬಂದಿದ್ದಾರೆ. ಸಿಎಂ ಕುಮಾರಸ್ವಾಮಿ ಯವರು, ಅಂಬರೀಷ್ ನಿಧನರಾದಾಗ ಯಾವ ರೀತಿ ಕೆಲಸ ಮಾಡಿದರು ಎಂಬುದನ್ನೂ ಇವರು ತಿಳಿದುಕೊಳ್ಳ ಬೇಕಾಗುತ್ತದೆ ಎಂದು ಹೇಳಿದ್ದರು.
ಡೋಂಟ್ ಕೇರ್
ಅಂಬರೀಶ್ ಯಾರು ಏನೇ ಮಾತನಾಡಿದರೂ, ಡೋಂಟ್ ಕೇರ್ ಎನ್ನುತ್ತಿದ್ದರು. ನಾನು ಕೂಡ ಅಂಬರೀಶ್ ಮಾರ್ಗದರ್ಶನ ದಲ್ಲೇ ಹೋಗು ತ್ತೇನೆ. ಪ್ರಚೋ ದನ ಕಾರಿ ಹೇಳಿಕೆ ನೀಡಿ ನನ್ನಿಂದ ಬೇರೆ ಯದ್ದೇ ಮಾತುಗಳನ್ನಾಡಿಸಬಹುದು ಎಂಬ ಪ್ರಯತ್ನ ಯಾವುದೇ ಕಾರಣಕ್ಕೂ ಫಲ ನೀಡುವುದಿಲ್ಲ ಎಂದು ಸುಮಲತಾ
ಸ್ಪಷ್ಟಪಡಿಸಿದರು. ಮಹಿಳೆಯರ ಬಗ್ಗೆ ಕ್ಷುಲ್ಲಕ ಮಾತುಗಳು ಆಡಬಾರದು. ನಾನು ಈ ಬಗ್ಗೆ ಯಾವುದೇ ಪ್ರತಿ ಕ್ರಿ ಯೆ ನೀಡುವುದಿಲ್ಲ. ಏನೇ ಮಾತನಾಡಿದರೂ ಜನಕ್ಕೆ ಸಂದೇಶ ರವಾನೆಯಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.