ಭೂಸ್ವಾಧೀನ ಸಮಸ್ಯೆ ನಿವಾರಣೆ ಹೊಣೆ ರಾಜ್ಯಗಳದ್ದು: ಸಚಿವ ನಿತಿನ್‌ ಗಡ್ಕರಿ

ಹೆದ್ದಾರಿ ಯೋಜನೆಗಳಿಗೆ ಅಗತ್ಯ ನೆರವು ನೀಡಲು ಸಿದ್ಧ

Team Udayavani, Sep 9, 2022, 6:50 AM IST

tdy-10

ಬೆಂಗಳೂರು: ಕರ್ನಾಟಕದಲ್ಲಿ ಹೆದ್ದಾರಿಗೆ ಸಂಬಂಧಿಸಿದ ಯಾವುದೇ ಯೋಜನೆಗಳಿಗೆ ಅಗತ್ಯ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ಧ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಭರವಸೆ ನೀಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದಲ್ಲಿ ಹಮ್ಮಿಕೊಂಡ 2 ದಿನಗಳ “ಮಂಥನ್‌’ಗೆ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯಗಳು ನೀಡುವ ವಾರ್ಷಿಕ ಹೆದ್ದಾರಿ ಯೋಜನೆಗಳ ಮೇಲೆ ಯಾವುದೇ ಮಿತಿ ಅಥವಾ ನಿರ್ಬಂಧ ವಿಧಿಸಿಲ್ಲ. ಎಷ್ಟು ಯೋಜನೆಗಳಿದ್ದರೂ ಪ್ರಸ್ತಾವನೆ ಸಲ್ಲಿಸಲಿ. ಅವುಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಾವು ಸಿದ್ಧ. ಆದರೆ, ಹೀಗೆ ಸಲ್ಲಿಸುವ ಪ್ರಸ್ತಾವನೆಗಳು ಪರಿಪೂರ್ಣವಾಗಿರಬೇಕು’ ಎಂದು ಹೇಳಿದರು.

ಹೆದ್ದಾರಿ ಯೋಜನೆಗಳಿಗೆ ತೊಡಕಾಗಿರುವ ಭೂಸ್ವಾಧೀನದಂತಹ ಸಮಸ್ಯೆಗಳನ್ನು ಬಗೆಹರಿಸುವ ಜವಾಬ್ದಾರಿ ಆಯಾ ರಾಜ್ಯಗಳದ್ದಾಗಿದೆ. ಆದರೆ, ಇದು ನಿರೀಕ್ಷಿತ ಮಟ್ಟದಲ್ಲಿ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನೀವೇ ಪರಿಹಾರ ಕಂಡುಕೊಳ್ಳಿ:

ಭೂಸ್ವಾಧೀನ ಅಥವಾ ಅರಣ್ಯ ಮತ್ತು ಪರಿಸರ ಅನುಮೋದನೆ ದೊರೆಯದೆ ಹಲವು ವರ್ಷಗಳಿಂದ ಯೋಜನೆಗಳು ಅಡಕತ್ತರಿಯಲ್ಲಿ ಸಿಲುಕಿರುತ್ತವೆ. ಹೀಗೆ ಆಯಾ ರಾಜ್ಯಗಳಲ್ಲಿ ಎದುರಾದ ತೊಡಕುಗಳನ್ನು ನಿವಾರಿಸುವ ಹೊಣೆ ಯಾರದ್ದು? ನಾನೇನಾದರೂ ರಸ್ತೆ ನಿರ್ಮಾಣ ಮಾಡುತ್ತಿದ್ದೀನಾ? ನನಗೆ ತಂತ್ರಜ್ಞಾನವೂ ಗೊತ್ತಿಲ್ಲ. ವರ್ಷಗಳು ಕಳೆದರೂ ಯೋಜನೆಗೆ ಅಗತ್ಯವಿರುವ ಭೂಸ್ವಾಧೀನ ಆಗಿರುವುದಿಲ್ಲ. ಯುಟಿಲಿಟಿ ಸ್ಥಳಾಂತರದ ಸಮಸ್ಯೆ ಉಂಟಾಗಿರುತ್ತದೆ. ಹೀಗೆ ಒಂದಿಲ್ಲೊಂದು ಕಾರಣಗಳಿಂದ ನನೆಗುದಿಗೆ ಬಿದ್ದಿರುತ್ತವೆ. ನೀವೇ ಸರ್ಕಾರ (ಸಚಿವರು) ಆಗಿರುತ್ತೀರಿ. ಪರಿಶೀಲನಾ ಸಭೆ ಕರೆದು ಪ್ರತಿ ಬಗೆಯ ಸಮಸ್ಯೆಗೂ ಪರಿಹಾರ ಕಂಡುಕೊಳ್ಳಬೇಕು. ಇದು ನಿಮ್ಮ ಜವಾಬ್ದಾರಿ ಎಂದು ತೀಕ್ಷ್ಣವಾಗಿ ಹೇಳಿದರು.

ಕೇಂದ್ರ ರಸ್ತೆ ನಿಧಿ ಅಡಿ ನೂರರಷ್ಟು ಅನುದಾನದೊಂದಿಗೆ ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳಲ್ಲಿರುವ ರೈಲ್ವೆ ಮೇಲ್ಸೇತುವೆ ಹಾಗೂ ಕೆಳಸೇತುವೆಗಳ ನಿರ್ಮಾಣಕ್ಕೆ ಅವಕಾಶ ಇದೆ. ಆದರೆ, ಇದುವರೆಗೆ ಕೇವಲ ಆರು ರಾಜ್ಯಗಳು ಈ ಸಂಬಂಧ ಒಡಂಬಡಿಕೆ ಮಾಡಿಕೊಂಡು ಪ್ರಸ್ತಾವನೆ ಸಲ್ಲಿಸಿವೆ. ಉಳಿದ ರಾಜ್ಯಗಳು ಯಾಕೆ ಮುಂದೆಬರುತ್ತಿಲ್ಲ ಎಂದು ಕೇಳಿದರು.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.