ಅಂತಾರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ರಾಜ್ಯ ಶೀಘ್ರ ಸೇರ್ಪಡೆ

ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇಲಾಖೆ ವಿನೂತನ ಹೆಜ್ಜೆ: ಸಿಎಂ

Team Udayavani, Sep 28, 2022, 8:22 PM IST

ಅಂತಾರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ರಾಜ್ಯ ಶೀಘ್ರ ಸೇರ್ಪಡೆ

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ಮುಂದಿನ ಕೆಲವೇ ದಿನಗಳಲ್ಲಿ ಅಂತಾರಾಷ್ಟ್ರೀಯ ನಕ್ಷೆಯಲ್ಲಿ ಸೇರ್ಪಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ರಾಜ್ಯಕ್ಕೆ ಆಗಮಿಸುತ್ತಿರುವ 30 ಲಕ್ಷ ಪ್ರವಾಸಿಗರನ್ನು ಮುಂದಿನ ಮೂರು ವರ್ಷದಲ್ಲಿ ಒಂದು ಕೋಟಿಗೆ ಮುಟ್ಟಿಸುವ ಕೆಲಸವನ್ನು ನಾವೆಲ್ಲರೂ ಸೇರಿ ಮಾಡಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಪ್ರವಾಸಿಗರ ಹೆಜ್ಜೆಗಳನ್ನು ಹೆಚ್ಚಿಸಬೇಕು. ವಿದೇಶಿಯರನ್ನು ಆಕರ್ಷಿಸಿ, ಸ್ಥಳೀಯರಿಗೆ ಕೆಲಸ ಕೊಡಬೇಕು. ಪ್ರವಾಸೋದ್ಯಮಕ್ಕೆ ಸೂಕ್ತವಾಗಿರುವ ಹಲವು ಸ್ಥಳಗಳು ಕರ್ನಾಟಕದಲ್ಲಿವೆ.

ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ವಿನೂತನ ಹೆಜ್ಜೆ ಇಟ್ಟಿದ್ದು, ಪ್ರವಾಸಿಗರಿಗಾಗಿ ನೂತನ ಕ್ಯಾರಾವ್ಯಾನ್‌ ವಾಹನ ಪರಿಚಯಿಸಿದೆ ಎಂದರು.

ಸಚಿವ ಆನಂದ್‌ ಸಿಂಗ್‌ ಅವರು ಬಂದ ನಂತರ ಹಲವಾರು ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಯಾಣ, ಚಿಕ್ಕಮಗಳೂರಿನಲ್ಲಿ ರೋಪ್‌ ವೇ, ಹೋಟೇಲುಗಳನ್ನು ಪುನಶ್ಚೇತನ ಮಾಡುವ ಕೆಲಸ ಮಾಡುತ್ತಿದ್ದಾರೆ. ಎರಡು ಸರ್ಕಿಟ್‌ ಗಳನ್ನು ರೂಪಿಸಲಾಗಿದೆ. ಸಿಆರ್‌ ಝೆಡ್‌ ಸಾಧನೆ ಅದ್ಭುತವಾಗಿದೆ. ಅದರಲ್ಲಿ ಆನಂದ್‌ ಸಿಂಗ್‌ ಅವರ ಪಾತ್ರ ಮುಖ್ಯವಾಗಿದೆ ಎಂದು ಶ್ಲಾ ಸಿದರು.

ರಾಜ್ಯದಲ್ಲಿ 2 ಪ್ರವಾಸೋದ್ಯಮ ಸರ್ಕಿಟ್‌ ಅಂದರೆ ಬೇಲೂರು ಹಳೆಬೀಡು, ಸೋಮನಾಥಪುರ ಸುತ್ತಮುತ್ತಲ ಪ್ರವಾಸಿ ತಾಣಗಳನ್ನೊಳಗೊಂಡ ಮೈಸೂರು ಸರ್ಕಿಟ್‌ , ಬಿಜಾಪುರದಿಂದ ಬಾದಾಮಿ, ಪಟ್ಟದಕಲ್ಲು, ಹಂಪಿ ಇತ್ಯಾದಿಗಳನ್ನೊಳಗೊಂಡ ಹಂಪಿ ಸರ್ಕಿಟ್‌ಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಅಭಿವೃದ್ಧಿಪಡಿಸಲು ಸರ್ಕಾರ ಯೋಜನೆ ರೂಪಿಸಿದೆ. ಮುಂದಿನ 2 ತಿಂಗಳ ಒಳಗಾಗಿ ಎರಡು ಸರ್ಕಿಟ್‌ಗಳನ್ನು ಕಾರ್ಯಾರಂಭ ಮಾಡಲಾಗುವುದು. ಟೆಂಪಲ್‌ ಟೂರಿಸಂ, ನೈಸರ್ಗಿಕ ಟೂರಿಸಂಗಳಿಗೆ ಪ್ರಾಶಸ್ತ್ಯ ನೀಡಲಾಗುವುದು ಎಂದು ಹೇಳಿದರು.

ಕರಾವಳಿ ಪ್ರದೇಶದ ಅಭಿವೃದ್ಧಿಗೆ ಪೂರಕವಾಗಿ ಸಿಆರ್‌ಝೆಡ್‌ ಆದೇಶ ಕೇಂದ್ರ ಸರ್ಕಾರ ವಿನಾಯಿತಿ ನೀಡಿದ್ದು, ಕರಾವಳಿ ಭಾಗದ ಪ್ರವಾಸೋದ್ಯಮಕ್ಕೆ ದೊಡ್ಡ ಪ್ರಮಾಣದಲ್ಲಿ ಸಹಾಯವಾಗಲಿದೆ. ಕರಾವಳಿ ಪ್ರದೇಶದ ಪ್ರವಾಸೋದ್ಯಮಕ್ಕೆ ಪೂರಕವಾಗಿ ಕರಾವಳಿ ಅಭಿವೃದ್ಧಿ ಯೋಜನೆ ರೂಪಿಸಲಾಗುತ್ತಿದೆ ಎಂದರು.

500 ಕೋಟಿ ರೂ. ಯೋಜನೆ: ಪ್ರವಾಸೋದ್ಯಮ ಸಚಿವ ಆನಂದ್‌ಸಿಂಗ್‌ ಮಾತನಾಡಿ, ಕೇಂದ್ರ ಸರ್ಕಾರದ ಸ್ವದೇಶ ದರ್ಶನ 2.0 ಅಡಿ ರಾಜ್ಯದ ಐದು ಪ್ರವಾಸಿ ತಾಣಗಳನ್ನು ಅಂದಾಜು 500 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಕೇಂದ್ರ ಸರ್ಕಾರದ ಪರ್ವತ ಮಾಲಾ ಯೋಜನೆಯಡಿ ರಾಜ್ಯದ 15 ಪ್ರವಾಸಿ ತಾಣಗಳಲ್ಲಿ ರೋಪ್‌ ವೇ ಅಳವಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ ನಂದಿಬೆಟ್ಟ ಮತ್ತು ಅಂಜನಾದ್ರಿಯಲ್ಲಿ ರೋಪ್‌ವೇ ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಸಚಿವರಾದ ಗೋವಿಂದ ಕಾರಜೋಳ, ಆರ್‌.ಅಶೋಕ, ಕೆಎಸ್‌ಟಿಡಿಸಿ ಅಧ್ಯಕ್ಷ ಕಾ.ಪು.ಸಿದ್ಧಲಿಂಗಸ್ವಾಮಿ, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಎನ್‌.ವಿ.ಪ್ರಸಾದ್‌, ನಿರ್ದೇಶಕ ವೆಂಕಟೇಶ್‌, ಜೆಎಲ್‌ಆರ್‌ ಎಂಡಿ ಮನೋಜ್‌ ಕುಮಾರ್‌, ಕೆಎಸ್‌ಟಿಡಿಸಿ ಎಂಡಿ ಜಗದೀಶ್‌ ಉಪಸ್ಥಿತರಿದ್ದರು.

ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶ
ಕರಾವಳಿ ನಿಯಂತ್ರಣ ವಲಯದ ಪ್ರಸ್ತಾವನೆಗೆ ಅನುಮೋದನೆ ಪಡೆದ ದೇಶದ ಎರಡನೇ ಹಾಗೂ ದಕ್ಷಿಣ ಭಾರತದ ಮೊದಲ ರಾಜ್ಯ ಕರ್ನಾಟಕವಾಗಿದ್ದು, ರಾಜ್ಯದಲ್ಲಿ ಸಮುದ್ರ ತೀರ ಪ್ರದೇಶದ ಪ್ರವಾಸಿ, ವಾಣಿಜ್ಯೋದ್ಯಮದ ಚಟುವಟಿಕೆಗಳು ಗರಿಗೆದರಲಿವೆ.

ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು 17 ಜಿಲ್ಲೆ ಹಾಗೂ ಇತರೆ ಪ್ರಮುಖ ಪ್ರವಾಸಿತಾಣಗಳನ್ನು “ಆದ್ಯತಾ ಪ್ರವಾಸೋದ್ಯಮ ತಾಣಗಳು’ ಎಂದು ಗುರುತಿಸಿದ್ದು, ಇದರಿಂದಾಗಿ ಹೆಚ್ಚಿನ ಬಂಡವಾಳ ಹೂಡಿಕೆಯಾಗಲಿದ್ದು, ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ದೊರೆಯಲಿವೆ ಎಂದು ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಹೇಳಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.