ಮನೆಯಲ್ಲೇ ನಿಗಾ; ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

ನಿರ್ಬಂಧಕ್ಕೆ ಕೋರಿ ಪ್ರಧಾನಿಗೆ ಪತ್ರ: ಸಚಿವ ಸುಧಾಕರ್‌

Team Udayavani, Dec 1, 2021, 6:25 AM IST

ಮನೆಯಲ್ಲೇ ನಿಗಾ;  ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

ಬೆಂಗಳೂರು/ಹೊಸದಿಲ್ಲಿ: ಒಮಿಕ್ರಾನ್‌ ರೂಪಾಂತರಿಯ ಭೀತಿ ಹೆಚ್ಚುತ್ತಿರುವಂತೆಯೇ ಕರ್ನಾಟಕದಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ವಿದೇಶಗಳಿಂದ ಆಗಮಿಸುವವರಿಗೆ ಹೋಂ ಕ್ವಾರಂಟೈನ್‌ ಮತ್ತು ಆರ್‌ಟಿ-ಪಿಸಿಆರ್‌ ಪರೀಕ್ಷೆಯನ್ನು ಕಡ್ಡಾಯ ಮಾಡಲಾಗಿದೆ.

ಮಂಗಳವಾರ ನಡೆದ ತಾಂತ್ರಿಕ ಸಲಹಾ ಸಮಿತಿ ಸಭೆ ಬಳಿಕ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್‌ ರಾಜ್ಯ ಸರಕಾರದ ನಿರ್ಧಾರದ ಬಗ್ಗೆ ಮಾಹಿತಿ ನೀಡಿದ್ದಾರೆ. ಒಮಿಕ್ರಾನ್‌ ಹೆಚ್ಚಾಗಿ ಹರಡುತ್ತಿರುವ ನಿರ್ದಿಷ್ಟ ದೇಶಗಳಿಂದ ಬರುವ ಪ್ರಯಾಣಿಕರಿಗೆ ಕೆಲವು ನಿರ್ಬಂಧ ಹೇರುವಂತೆ ಮುಖ್ಯಮಂತ್ರಿಗಳು ಪ್ರಧಾನಿಗೆ ಪತ್ರ ಬರೆಯಲಿದ್ದಾರೆ. ವೈರಾಣು ಹರಡುವಿಕೆಯನ್ನು ಆರಂಭಿಕ ಹಂತದಲ್ಲೇ ತಡೆಯಲು ಪ್ರಯತ್ನ ಮಾಡಲಾಗುತ್ತಿದೆ ಎಂದಿದ್ದಾರೆ.

ಹೊಸದಿಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಕಾರ್ಯದರ್ಶಿಗಳ ಜತೆಗೆ ಸಭೆ ನಡೆಸಿದರು. ಒಮಿಕ್ರಾನನ್ನು ರ್ಯಾಪಿಡ್‌ ಆ್ಯಂಟಿಜೆನ್‌ ಟೆಸ್ಟ್‌ (ಆರ್‌ಎಟಿ), ಆರ್‌ಟಿ-ಪಿಸಿಆರ್‌ ಪರೀಕ್ಷೆ ಮೂಲಕ ಪತ್ತೆ ಹಚ್ಚಲು ಸಾಧ್ಯವಿದೆ. ಇದರ ಜತೆಗೆ ಹೋಮ್‌ ಕ್ವಾರಂಟೈನ್‌ ಬಗ್ಗೆಯೂ ಹೆಚ್ಚು ಗಮನ ನೀಡಬೇಕು ಎಂದಿದ್ದಾರೆ. ರಾಜ್ಯಗಳಲ್ಲಿ ಸೋಂಕು ಪತ್ತೆ ಪರೀಕ್ಷೆ, ಆಸ್ಪತ್ರೆಗಳಲ್ಲಿ ಚಿಕಿತ್ಸಾ ವ್ಯವಸ್ಥೆ ಸುಧಾರಿಸಲು ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ಹೋಮ್‌ ಕ್ವಾರಂಟೈನ್‌
ಪ್ರತೀ ದಿನ ವಿದೇಶಗಳಿಂದ ಸುಮಾರು 2,500 ಪ್ರಯಾಣಿಕರು ರಾಜ್ಯಕ್ಕೆ ಬರುತ್ತಾರೆ. ನೆಗೆಟಿವ್‌ ಇದ್ದವರಿಗೆ ಏಳು ದಿನಗಳ ಕಾಲ ಮನೆ ಕ್ವಾರಂಟೈನ್‌ ಮಾಡಲಾಗುತ್ತದೆ. ರೋಗ ಲಕ್ಷಣವಿದ್ದರೂ ನೆಗೆಟಿವ್‌ ಆದವರಿಗೆ 5ನೇ ದಿನ ಮತ್ತೆ ಮನೆಯಲ್ಲೇ ಪರೀಕ್ಷೆ ಮಾಡಲಾಗುತ್ತದೆ. ಲಕ್ಷಣ ರಹಿತರಿಗೆ 7ನೇ ದಿನ ಪರೀಕ್ಷೆ ಮಾಡಲಾಗುತ್ತದೆ. ಪಾಸಿಟಿವ್‌ ಬಂದರೆ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಆದರೆ ಇಂಥವರನ್ನು ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುವುದು ಎಂದರು.

ಇದನ್ನೂ ಓದಿ:ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!

ಚಿಕಿತ್ಸೆಗೆ ಮಾರ್ಗಸೂಚಿ
ಓಮಿಕ್ರಾನ್‌ ಸೋಂಕು ಉಂಟಾದರೆ ಯಾವ ರೀತಿ ಎದುರಿಸಬೇಕು, ಹೇಗೆ ನಿಯಂತ್ರಿಸಬೇಕು, ಸಿದ್ಧತೆಗಳು ಹೇಗಿದೆ ಎಂದು ಚರ್ಚಿಸಲಾಗಿದೆ. ಕ್ವಾರಂಟೈನ್‌ ಆ್ಯಪ್‌, ಟೆಲಿ ಮೆಡಿಸಿನ್‌ ಮೊದಲಾದ ತಂತ್ರಜ್ಞಾನಗಳನ್ನು ಬಳಸಿಕೊಳ್ಳಲು ಚರ್ಚೆಯಾಗಿದೆ. ಜತೆಗೆ ಚಿಕಿತ್ಸೆಗೆ ಪ್ರತ್ಯೇಕ ಮಾರ್ಗಸೂಚಿ ರೂಪಿಸಲು ತಜ್ಞರ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಚಿಕಿತ್ಸೆ ಸಂಬಂಧಿ ನಿಯಮ ರೂಪಿಸಲಿದೆ ಎಂದರು.

ಲಾಕ್‌ಡೌನ್‌ ಇಲ್ಲ
ಸದ್ಯಕ್ಕೆ ಲಾಕ್‌ಡೌನ್‌ ಪ್ರಶ್ನೆಯೇ ಇಲ್ಲ. ಯಾವುದೇ ಊಹಾಪೋಹಗಳಿಗೆ ಜನ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೆ ಸ್ಪಷ್ಟಪಡಿಸಿದ್ದಾರೆ. ಹೆಚ್ಚು ಜನ ಸೇರುವಲ್ಲಿ ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಂಘ-ಸಂಸ್ಥೆಗಳು ಕಾರ್ಯಕ್ರಮಗಳಲ್ಲಿ ನಿಯಮಗಳನ್ನು ಪಾಲಿಸಬೇಕು ಎಂದು ಬೆಂಗಳೂರಿನಲ್ಲಿ  ಸಿಎಂ ಪುನರುಚ್ಚರಿಸಿದರು.  ಒಮಿಕ್ರಾನ್‌ ಕುರಿತು ನಿಗಾ ಇರಿಸಲಾಗಿದೆ. ಈಗಿರುವ ಡೆಲ್ಟಾ ತಳಿಯಿಂದ ಅಲ್ಲಲ್ಲಿ ಕ್ಲಸ್ಟರ್‌ ಆಗಿವೆ. ಎರಡು ಹಂತಗಳಲ್ಲಿ ಇದನ್ನು ನಿಭಾಯಿಸುವ ಕೆಲಸವನ್ನು ಸರಕಾರ ಮಾಡುತ್ತಿದ್ದು, ವೈಜ್ಞಾನಿಕವಾಗಿ ಕ್ರಮಗಳನ್ನು ಕೈಗೊಂಡಿದೆ. ಹೆಚ್ಚಿನ ತನಿಖೆಗೆ ಎನ್‌ಸಿಬಿಎಸ್‌ಗೂ ಮಾದರಿಗಳನ್ನು ಕಳುಹಿಸಲಾಗಿದೆ. ವಿದೇಶಗಳಿಂದ ಬಂದಿರುವ ಪ್ರಯಾಣಿಕರ ಬಗ್ಗೆ ವಿಶೇಷ ನಿಗಾ ಇರಿಸಿದ್ದು, ಸಂಪರ್ಕಿತರ ಪತ್ತೆ ಹಾಗೂ ಪರೀಕ್ಷೆಗಳನ್ನು ಮಾಡಲಾಗುತ್ತಿದೆ ಎಂದರು.

ಲಸಿಕೆ ಪಡೆಯದಿದ್ದರೆ ಸರಕಾರಿ ಸೌಲಭ್ಯವಿಲ್ಲ
ಎರಡು ಡೋಸ್‌ ಲಸಿಕೆ ಪಡೆಯದೆ ಇರುವವರಿಗೆ ಸರಕಾರಿ ಸವಲತ್ತು ಕಡಿತ ಮಾಡಿ ಎಂದು ತಾಂತ್ರಿಕ ಸಮಿತಿಯ ಸದಸ್ಯರು ಸಲಹೆ ನೀಡಿದ್ದಾರೆ. ಸೋಂಕಿನ ಮೂರನೇ ಅಲೆ ಮತ್ತು ಒಮಿಕ್ರಾನ್‌ ರೂಪಾಂತರಿ ತಡೆಯಲು ಕೊರೊನಾ ತಾಂತ್ರಿಕ ಸಮಿತಿ ಇನ್ನೂ ಹಲವು ಶಿಫಾರಸುಗಳನ್ನು ಮಾಡಿದೆ.

ಪ್ರಮುಖ ಸಲಹೆಗಳು

–  ಪಡಿತರ, ಗ್ಯಾಸ್‌, ನೀರು, ಪೆಟ್ರೋಲ್‌, ಡೀಸೆಲ್‌, ಸಂಬಳ, ಪಿಂಚಣಿಗೆ 2 ಡೋಸ್‌ ಲಸಿಕೆ ಕಡ್ಡಾಯ.

-ಮೆಟ್ರೋ ರೈಲು, ಸಾರ್ವಜನಿಕ ಸಾರಿಗೆಗಳಲ್ಲಿ ಸಂಚಾರಕ್ಕೆ, ಹೊಟೇಲ್ ,ಮಾಲ್ , ಶಾಂಪಿಂಗ್‌ಗೆ ತೆರಳುವುದಕ್ಕೆ 2 ಡೋಸ್‌ ಕಡ್ಡಾಯ.

– ವಾರಕ್ಕೆ ಕನಿಷ್ಠ ಶೇ. 5 ಮಕ್ಕಳಿಗೆ ರ್‍ಯಾಂಡಮ್‌ ಕೊರೊನಾ ಪರೀಕ್ಷೆ.

-ನಿರಂತರವಾಗಿ ಶಿಕ್ಷಕರು ಮತ್ತು ಮಕ್ಕಳಿಗೆ ರ್‍ಯಾಂಡಮ್‌ ಸೋಂಕು ಪತ್ತೆ ಪರೀಕ್ಷೆ ನಡೆಸಬೇಕು.

– ಶಾಲೆ-ಕಾಲೇಜು ಮುಚ್ಚುವ ಅಗತ್ಯವಿಲ್ಲ; ತರಗತಿ ನಡೆಯಲಿ.

ಸಮಿತಿಯ ಶಿಫಾರಸುಗಳು

01 ಜನಸಂದಣಿ ಇರುವ ಪ್ರದೇಶಗಳಲ್ಲಿ ಕಡ್ಡಾಯ ರ್‍ಯಾಂಡಮ್‌ ಟೆಸ್ಟಿಂಗ್‌.

02 ಶಾಲಾ-ಕಾಲೇಜು ಮುಚ್ಚುವ ಅಗತ್ಯ ಇಲ್ಲ. ಆಫ್ಲೈನ್‌, ಆನ್‌ಲೈನ್‌ ತರಗತಿ ನಡೆಸುವುದು ಸೂಕ್ತ.

03 ಜಾಲತಾಣ, ಮಾಧ್ಯಮಗಳಲ್ಲಿ ಸುಳ್ಳುಸುದ್ದಿ ಹರಡುವುದನ್ನು ತಪ್ಪಿಸಲು ಕ್ರಮ.

04 ಪಡಿತರ, ಗ್ಯಾಸ್‌, ನೀರು, ಪೆಟ್ರೋಲ್‌, ಡೀಸೆಲ್‌, ಸಂಬಳ, ಪಿಂಚಣಿ ಪಡೆದುಕೊಳ್ಳಲು 2 ಡೋಸ್‌ ಲಸಿಕೆ ಕಡ್ಡಾಯ ಮಾಡಬೇಕು.

05 ವಿದೇಶದಿಂದ ಬರುವ ಪ್ರಯಾಣಿಕರಿಗೆ 7 ದಿನ ಕಡ್ಡಾಯ ಕ್ವಾರಂಟೈನ್‌.

06 ಒಮಿಕ್ರಾನ್‌ ಸೋಂಕು ಹರಡಿರುವ ದೇಶಗಳಿಂದ ಬರುವ ಪ್ರಯಾಣಿಕರಿಗೆ ಸಾಂಸ್ಥಿಕ ಕ್ವಾರಂಟೈನ್‌.

 

ಟಾಪ್ ನ್ಯೂಸ್

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.