42ಕ್ಕೂ ಹೆಚ್ಚು ಬಿಎಂಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ,ಸಂಚಾರ ಸ್ಥಗಿತ
Team Udayavani, Jan 9, 2019, 4:00 AM IST
ಬೆಂಗಳೂರು: ಕೇಂದ್ರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಸರಕಾರದ ನೀತಿ ಖಂಡಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್‌ನ 2 ನೇ ದಿನವಾದ ಬುಧವಾರ ಹಲವೆಡೆ ದುಷ್ಕರ್ಮಿಗಳು ಬಸ್‌ಗಳಿಗೆ ಕಲ್ಲು ತೂರಾಟ ನಡೆಸಿ ದುಷ್ಕೃತ್ಯ ಮೆರೆದಿದ್ದಾರೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ 12 ಬಸ್‌ಗಳಿಗೆ ಕಲ್ಲು ತೂರಾಟ ಮಾಡಲಾಗಿದ್ದು, ಬುಧವಾರ ಬೆಳಗ್ಗೆ 30 ಬಸ್‌ಗಳಿಗೆ ಕಲ್ಲು ತೂರಾಟ ನಡೆಸಲಾಗಿದೆ.
ಕಲ್ಲು ತೂರಾಟ ಹಿನ್ನಲೆಯಲ್ಲಿ ಬಸ್ ಸಂಚಾರವನ್ನು ಅಧಿಕಾರಿಗಳು ಸ್ಥಗಿತಗೊಳಿಸಿದ್ದಾರೆ. ಇದರಿಂದಾಗಿ ಸಾವಿರಾರು ಮಂದಿ ಸಂಚಾರ ಸಾಧ್ಯವಾಗದೆ ಪರದಾಡುತ್ತಿದ್ದಾರೆ.
ಮಂಗಳವಾರದ ಬಂದ್‌ಗೆ ಬೆಂಗಳೂರು ಸಹಿತ ಹಲವೆಡೆ ನಿರೀಕ್ಷಿತ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ. ಅಲ್ಲಲ್ಲಿ ಒತ್ತಾಯ ಪೂರ್ವಕವಾಗಿ ಅಂಗಡಿ-ಮುಂಗಟ್ಟುಗಳಿಗೆ ಬೀಗ ಮತ್ತಿತರ ಅಹಿತಕರ ಘಟನೆ ಗಳ ನಡುವೆ ಸಾರ್ವತ್ರಿಕ ಮುಷ್ಕರಕ್ಕೆ ನಿರೀಕ್ಷಿತ ಬೆಂಬಲ ವ್ಯಕ್ತವಾಗಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್ಬುಕ್ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.