Guarantee ಅಪಸ್ವರ ನಿಲ್ಲಿಸಿ: ಸಚಿವರಿಗೆ ಭಂಡಾರಿ ತಾಕೀತು
Team Udayavani, Aug 16, 2024, 6:30 AM IST
ಬೆಂಗಳೂರು: ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಬಗ್ಗೆ ಸಚಿವರ ಅಪಸ್ವರಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, “ಯೋಜನೆಗಳ ವಿಚಾರದಲ್ಲಿ ಅನಗತ್ಯ ಗೊಂದಲಕಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು’ ಎಂದು ತಾಕೀತು ಮಾಡಿದ್ದಾರೆ.
ಸಚಿವರನ್ನು ಕೇಳಿ ಗ್ಯಾರಂಟಿ ಯೋಜನೆಗಳನ್ನು ಮಾಡಿಲ್ಲ. ಕಳೆದ ವಿಧಾನಸಭಾ ಚುನಾವಣೆ ವೇಳೆ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುಜೇìವಾಲ ಅಂದಿನ ವಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೆಲ್ಲರೂ ಸೇರಿ ಕೊರೊನಾದಿಂದ ತತ್ತರಿಸಿದ ಜನರ ಬದುಕಿಗೆ ಆಸರೆ ಆಗಬೇಕು ಎಂಬ ದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಲಾಗಿತ್ತು. ಅವುಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಹಾಗಾಗಿ ಗೊಂದಲದ ಹೇಳಿಕೆಗಳು ಸಲ್ಲದು’ ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.
ಈಗಾಗಲೇ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿ¨ªಾರೆ. ಹೀಗಿದ್ದರೂ ಅನಾವಶ್ಯಕವಾಗಿ ಕೆಲವು ಸಚಿವರು ಮಾತನಾಡುತ್ತಿರುವುದು ಸರಿಯಲ್ಲ. ಅದೇನೇ ಇದ್ದರೂ ಮುಖ್ಯಮಂತ್ರಿಗಳು ಮತ್ತು ಪಕ್ಷದ ಅಧ್ಯಕ್ಷರ ಜತೆ ಚರ್ಚಿಸಿ ಹೇಳಿಕೆ ಕೊಡಬೇಕು ಎಂದು ಪತ್ರಿಕಾ ಪ್ರಕಟನೆೆಯಲ್ಲಿ ಮಂಜುನಾಥ ಭಂಡಾರಿ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.