ರಂಗೇರಿದ ಅಖಾಡ: ಉಪ ಚುನಾವಣೆಗೆ ಬಿರುಸಿನ ಚಟುವಟಿಕೆ
Team Udayavani, Oct 1, 2020, 6:10 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಶಿರಾ ಮತ್ತು ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ನ ನಾಯಕರು ಅಖಾಡ ಪ್ರವೇಶಿಸಿದ್ದಾರೆ.
ಬಿಜೆಪಿ ಇನ್ನೂ ಅಭ್ಯರ್ಥಿಗಳ ಆಯ್ಕೆ ಅಂತಿಮ ಮಾಡಿಲ್ಲವಾದರೂ ಸಿಎಂ ಬಿಎಸ್‌ವೈ ಅವರು ಪಕ್ಷದ ನಾಯಕರ ಜತೆ ಸಮಾಲೋಚನೆ ನಡೆಸಿ ತಳಮಟ್ಟ ದಲ್ಲಿ ಕೆಲಸ ಆರಂಭಿಸಲು ಸೂಚಿಸಿದ್ದಾರೆ. ಗುರುವಾರ ಅಭ್ಯರ್ಥಿಗಳ ಆಯ್ಕೆಗಾಗಿ ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದೆ.
ವಿಪಕ್ಷ ಕಾಂಗ್ರೆಸ್ ಶಿರಾದಲ್ಲಿ ಅಭ್ಯರ್ಥಿ ಅಂತಿಮಗೊಳಿಸಿದೆ. ಆದರೆ ರಾಜರಾಜೇಶ್ವರಿ ನಗರದಲ್ಲಿ ಸಮರ್ಥ ಅಭ್ಯರ್ಥಿಯ ತಲಾಷೆಯಲ್ಲಿದೆ. ಸಂಸದ ಡಿ.ಕೆ. ಸುರೇಶ್ , ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರ್ಯತಂತ್ರದ ಕುರಿತು ಚರ್ಚಿಸಿದ್ದಾರೆ.
ಎಚ್.ಡಿ. ಕುಮಾರಸ್ವಾಮಿ ಅವರು ಬುಧವಾರ ಬೆಳಗ್ಗೆ ಶಿರಾದಲ್ಲಿ, ಸಂಜೆ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮುಖಂಡರ ಜತೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಎರಡು ದಿನಗಳಲ್ಲಿ ಅಭ್ಯರ್ಥಿ ಘೋಷಿಸುವುದಾಗಿ ತಿಳಿಸಿದ್ದಾರೆ.
ಬಿಜೆಪಿಯಿಂದ ರಾಜರಾಜೇಶ್ವರಿ ನಗರದಲ್ಲಿ ತುಳಸಿ ಮುನಿರಾಜುಗೌಡ ಮತ್ತು ಮುನಿರತ್ನ ನಡುವೆ ಟಿಕೆಟ್‌ಗೆ ಪೈಪೋಟಿಯಿದ್ದು, ಕಾದು ನೋಡುವ ತಂತ್ರ ಅನುಸರಿಸಲು ಕಾಂಗ್ರೆಸ್ ತೀರ್ಮಾನಿಸಿದೆ.
ಶಿರಾ ನಮ್ಮದೇ ಕ್ಷೇತ್ರ, ರಾಜರಾಜೇಶ್ವರಿನಗರವೂ ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರ. ಎರಡೂ ಕಡೆ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಸೂಕ್ತ ಹಾಗೂ ನ್ಯಾಯಸಮ್ಮತ ಅಭ್ಯರ್ಥಿಗಳನ್ನು ಶೀಘ್ರವೇ ಘೋಷಿಸಲಾಗುವುದು.
– ಕುಮಾರಸ್ವಾಮಿ, ಮಾಜಿ ಸಿಎಂ
ಶಿರಾ ಕ್ಷೇತ್ರದಲ್ಲಿ ಟಿ.ಬಿ. ಜಯಚಂದ್ರ ಅಭ್ಯರ್ಥಿ ಎಂದು ಘೋಷಿಸಿದ್ದೇವೆ. ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೂ ಅಭ್ಯರ್ಥಿ ನಿಲ್ಲಿಸಲಿದ್ದೇವೆ. ಅಚ್ಚರಿ ಅಭ್ಯರ್ಥಿಯ ವಿಚಾರ ನನಗೆ ಗೊತ್ತಿಲ್ಲ. ಆದರೆ ನಮ್ಮಲ್ಲಿ ಅಭ್ಯರ್ಥಿಗಳ ಕೊರತೆಯಂತೂ ಇಲ್ಲ.
– ಸಿದ್ದರಾಮಯ್ಯ, ಮಾಜಿ ಸಿಎಂ
ಎರಡೂ ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದೇವೆ. ಈಗಾಗಲೇ ಹದಿನೈದು ಕ್ಷೇತ್ರಗಳ ಉಪ ಚುನಾವಣೆ ಎಂಬ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದೇವೆ. ಇಲ್ಲಿಯೂ ಪಾಸ್ ಆಗಲಿದ್ದೇವೆ.
-ಸಿ.ಟಿ. ರವಿ,
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.