ದಲಿತ ಯುವಕನ ಹತ್ಯೆ: ಆರೋಪಿಗಳಿಗೆ ಕಠಿಣ ಕಾನೂನು ಕ್ರಮ: ಸಚಿವ ನಿರಾಣಿ
Team Udayavani, May 27, 2022, 6:05 PM IST
ಬೆಂಗಳೂರು: ಕಲುಬುರಗಿಯಲ್ಲಿ ನಡೆದ ದಲಿತ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಎಚ್ಚರಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ನಡೆದ ತಕ್ಷಣವೇ ಪೊಲೀಸರು ಕಾರ್ಯೋನ್ಮುಖರಾಗಿ ತಪ್ಪಿತಸ್ಥರನ್ನು ಕಾನೂನು ಪ್ರಕಾರವಾಗಿ ಬಂಧಿಸಿದ್ದಾರೆ. ಮುಂದಿನ ಪ್ರಕ್ರಿಯೆಗಳು ಕೂಡ ಕಾನೂನು ಅಡಿಯಲ್ಲೇ ನಡೆಯಬೇಕಾಗರುವುದರಿಂದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.
ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರಿಂದಲೇ ಆರೋಪಿಗಳನ್ನು ತಕ್ಷಣವೇ ಬಂಧಿಸಲು ಸಾದ್ಯವಾಗಿದೆ. ನಮ್ಮ ಪೊಲೀಸರು ಸಮರ್ಥರಾಗಿದ್ದರಿಂದ ಆರೋಪಿಗಳು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದರು.
ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಇದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ನಾನು ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆ ದೂರವಾಣಿಯಲ್ಲಿ ಮಾತನಾಡಿ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸುವಂತೆ ಸೂಚಿನೆ ಕೊಟ್ಟಿದ್ದೇನೆ. ಅದರಂತೆ ಪೊಲೀಸರು ಕೂಡಲೇ ವಿಶೇಷ ತಂಡವನ್ನು ರಚಿಸಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:ಲಡಾಖ್ ದುರಂತ: ಸೇನಾ ವಾಹನ ನದಿಗೆ ಉರುಳಿ ಬಿದ್ದು ಏಳು ಮಂದಿ ಯೋಧರು ಹುತಾತ್ಮ
ಪ್ರತಿಪಕ್ಷಗಳು ಸಾವಿನ ಪ್ರಕರಣವನ್ನು ಸಹ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವುದು ದುರದೃಷ್ಟಕರ. ನಾವು ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸಿ, ಕಾನೂನು ಪ್ರಕಾರವೇ ಆರೋಪಿಗಳಿಗೆ ಶಿಕ್ಷೆಯಾಗಲು ಪ್ರಯತ್ನಿಸುತ್ತಿದ್ದೇವೆ. ಆದರೆ ಕೆಲವರು ಇದರಲ್ಲೂ ಲಾಭನಷ್ಟದ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾನೂನು ಪ್ರಕಾರ ಪ್ರತಿಯೊಬ್ಬರಿಗೂ ಶಿಕ್ಷೆಯಾಗಲಿದೆ. ಇದರಲ್ಲಿ ಯಾವುದೇ ಕಾರಣಕ್ಕೂ ರಾಜೀಯಾಗುವುದಿಲ್ಲ ಎಂದು ನಿರಾಣಿ ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.