“ಕಪಾಳಕ್ಕೆ ಹೊಡೆಯಿರಿ’ ಅಂತ ಹೇಳಿದ್ದು ಅರಿವು ಮೂಡಿಸಿ ಎಂಬರ್ಥದಲ್ಲಿ: ತಂಗಡಗಿ
ನೀವು ಹೇಳಿದ ದಿನ ನನ್ನ ತಾಯಿಯನ್ನು ಬಿಜೆಪಿ ಕಚೇರಿಗೆ ಕರೆದುಕೊಂಡು ಬರುತ್ತೇನೆ ಎಂದು ತಿರುಗೇಟು
Team Udayavani, Mar 26, 2024, 7:32 PM IST
ಬೆಂಗಳೂರು: ನಾನು ಪ್ರಧಾನಿ ಮೋದಿ ಅವರಿಗೆ ಕಪಾಳ ಮೋಕ್ಷ ಮಾಡಿ ಎಂದು ಹೇಳಿಲ್ಲ. ನಮ್ಮ ಮಕ್ಕಳ ದಾರಿ ತಪ್ಪಿಸುವವರ ವಿರುದ್ಧ ಮಾತನಾಡಿದ್ದೆ. ಅಷ್ಟಕ್ಕೂ ನಾನು ಕಪಾಳಕ್ಕೆ ಹೊಡೆಯಿರಿ ಎಂದು ಹೇಳಿದ್ದು ಅರಿವು ಮೂಡಿಸಿ ಎಂಬರ್ಥದಲ್ಲಿ ಎಂದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸಮಜಾಯಿಷಿ ನೀಡಿದ್ದಾರೆ.
ಮೋದಿ ಮೋದಿ ಎಂದು ಹೇಳುವ ಯುವಕರು, ವಿದ್ಯಾರ್ಥಿಗಳಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಅವರು ನೀಡಿದ್ದ ವಿವಾದಾತ್ಮಕ ಹೇಳಿಕೆ ಮತ್ತು ಈ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಮುಖಂಡ ಸಿ. ಟಿ. ರವಿ, ‘ತಂಗಡಗಿ ನೀವು ನಿಮ್ಮ ಅಪ್ಪನಿಗೇ ಹುಟ್ಟಿದ್ದರೆ ಕಪಾಳಕ್ಕೆ ಹೊಡೆದು ನೋಡಿ ಅಂತ ಕೇಳಬೇಕು ಅನಿಸಿತ್ತು. ಆದರೆ ಆದರೆ ನಾನು ಈ ಪ್ರಶ್ನೆ ಅವರಿಗೆ ಕೇಳಲ್ಲ. ತಂಗಡಗಿಗೆ ಸಂಸ್ಕೃತಿ ಇಲ್ಲ, ಮಂತ್ರಿ ಆಗಿರೋದಿಕ್ಕೆ ಯೋಗ್ಯತೆ ಇಲ್ಲ’ ಎಂದು ತೀವ್ರ ವಾಗ್ಧಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ತಮ್ಮ ಹೇಳಿಕೆ ಸಮರ್ಥಿಸಿಕೊಂಡ ತಂಗಡಗಿ, ಸಿ. ಟಿ. ರವಿ ಅವರಿಗೂ ತಿರುಗೇಟು ನೀಡಿದರು.
ನಾನು ಬಿಜೆಪಿಯವರಿಗೆ, ಸಿ.ಟಿ.ರವಿ ಅವರ ಕಪಾಳಕ್ಕೆ ಹೊಡೆಯಿರಿ ಎಂದು ಹೇಳಿದ್ದೇನೆಯೇ? ಬಿಜೆಪಿಯವರೇ ನನ್ನ ಭಾಷಣವನ್ನು ಪೂರ್ತಿ ಕೇಳಿ ನಂತರ ಮಾತನಾಡಲಿ ಎಂದು ತಂಗಡಗಿ ಹೇಳಿದ್ದಾರೆ.
ಸಿ.ಟಿ.ರವಿ ಅವರು ಅಪ್ಪನಿಗೆ ಹುಟ್ಟಿದ್ದರೇ ಎನ್ನುವ ಮಾತನ್ನು ಆಡಿದ್ದಾರೆ. ನಾನು ಸಹ ಯಾರಿಗೆ ಹುಟ್ಟಿದ್ದೀರಿ ಎಂದು ಕೇಳಬಹುದಿತ್ತು. ಆದರೆ ಅವರಷ್ಟು ಕೆಳಮಟ್ಟಕ್ಕೆ ನಾನು ಇಳಿಯಲು ಇಷ್ಟಪಡುವುದಿಲ್ಲ. ನಾವು ಯಾರಿಗೆ ಹುಟ್ಟಿದ್ದೇವೆ ಎಂದು ನಮ್ಮ ತಾಯಂದಿರಿಗೆ ಗೊತ್ತಿರುತ್ತದೆ. ನೀವು ಸವಾಲಿಗೆ ಸಿದ್ದರಿದ್ದರೆ ನೀವು ಹೇಳಿದ ದಿನ ನನ್ನ ತಾಯಿಯನ್ನು ಬಿಜೆಪಿ ಕಚೇರಿಗೆ ಕರೆದುಕೊಂಡು ಬರುತ್ತೇನೆ. 2 ಕೋಟಿ ಉದ್ಯೋಗ, ನರೇಗಾ ಅನ್ಯಾಯದ ಬಗ್ಗೆ ಉತ್ತರ ಕೊಡಲು ಸಿದ್ದರಿದ್ದೀರಾ? ಎಂದು ಸವಾಲೆಸೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.