D. K. Shivakumar ಜತೆ ಎಸ್‌ಟಿಎಸ್, ಡಾ.ಕೆ.ಸುಧಾಕರ್! ಕುತೂಹಲಕ್ಕೆ ಕಾರಣವಾದ ನಾಯಕರ ನಡೆ
ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸ
Team Udayavani, Dec 18, 2023, 8:37 PM IST
ಬೆಂಗಳೂರು: ಈಚೆಗೆ ಬೆಳಗಾವಿ ಅಧಿವೇಶನದ ವೇಳೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸದಸ್ಯರ ಔತಣಕೂಟದಲ್ಲಿ ಕಾಣಿಸಿಕೊಂಡು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದ ಬಿಜೆಪಿ ಶಾಸಕರು, ಮೂರ್‍ನಾಲ್ಕು ದಿನಗಳ ಅಂತರದಲ್ಲಿ ಕಾರ್ಯಕ್ರಮವೊಂದರಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜತೆ ಕಾಣಿಸಿಕೊಳ್ಳುವ ಮೂಲಕ ಮತ್ತೆ ಕುತೂಹಲಕ್ಕೆ ಕಾರಣರಾಗಿದ್ದಾರೆ.
ಈ ಬಾರಿ ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಎಸ್.ರವಿ ಅವರ ಪುತ್ರಿಯ ಮದುವೆ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಮತ್ತು ಮಾಜಿ ಸಚಿವ ಡಾ.ಕೆ. ಸುಧಾಕರ್ ಕಾಣಿಸಿಕೊಂಡಿದ್ದಾರೆ. ಮೂವರೂ ಕೆಲಹೊತ್ತು ಹರಟಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಶೇರ್ ಆಗುವುದರ ಜತೆಗೆ ರಾಜಕೀಯ ವಲಯದಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಬೆಳಗಾವಿ ಅಧಿವೇಶನದ ವೇಳೆ ಪ್ರತಿಪಕ್ಷ ಬಿಜೆಪಿ ಸಭಾತ್ಯಾಗ ಮಾಡಿದಾಗ, ನಾಯಕರನ್ನು ಶಾಸಕ ಎಸ್.ಟಿ. ಸೋಮಶೇಖರ್ ಹಿಂಬಾಲಿಸದೆ, ಕಲಾಪದಲ್ಲಿ ಕುಳಿತುಕೊಳ್ಳುವ ಮೂಲಕ ಸ್ಪಷ್ಟ ಸಂದೇಶ ರವಾನಿಸಿದ್ದರು. ಈ ಮಧ್ಯೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸೋಮಶೇಖರ್ ಮತ್ತು ಶಾಸಕ ಶಿವರಾಮ್ ಹೆಬ್ಬಾರ್ ಕಾಣಿಸಿಕೊಂಡಿದ್ದರು ಎಂಬ ವದಂತಿ ಕೇಳಿಬಂದಿತ್ತು. ನಂತರದಲ್ಲಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿರಲಿಲ್ಲ. ಶಾಸಕರಿಗೆ ಏರ್ಪಡಿಸಿದ್ದ ಔತಣಕೂಟಕ್ಕೆ ಮಾತ್ರ ಹಾಜರಾಗಿದ್ದರು ಎಂದು ಸ್ವತಃ ನಾಯಕರು ಸ್ಪಷ್ಟಪಡಿಸಿದ್ದರು.
ಮತ್ತೊಂದೆಡೆ ಅದೇ ಶಾಸಕಾಂಗ ಪಕ್ಷದ ಸಭೆಯಲ್ಲಿ ಆರಂಭದಿಂದ ಅಂತ್ಯದವರೆಗೂ ಮೇಲ್ಮನೆಯ ಬಿಜೆಪಿ ಸದಸ್ಯ ಎಚ್. ವಿಶ್ವನಾಥ್ ಹಾಜರಾಗಿದ್ದರು. ಈ ಎಲ್ಲ ಬೆಳವಣಿಗೆಗಳ ನಡುವೆ ಡಿ.ಕೆ. ಶಿವಕುಮಾರ್ ಜತೆ ಡಾ.ಕೆ. ಸುಧಾಕರ್ ಮತ್ತು ಎಸ್.ಟಿ. ಸೋಮಶೇಖರ್ ಕಾಣಿಸಿಕೊಂಡಿರುವುದು ಕುತೂಹಲ ಕೆರಳಿಸುವಂತೆ ಮಾಡಿದೆ. “ಆದರೆ, ಇದೊಂದು ಆಕಸ್ಮಿಕ ಭೇಟಿ ಅಷ್ಟೇ ಆಗಿತ್ತು. ಈ ಭೇಟಿ ವೇಳೆ ಉಭಯ ಕುಶಲೋಪರಿ, ರಾಜಕೀಯ ಬೆಳವಣಿಗೆಗಳು ಮತ್ತಿತರ ವಿಷಯಗಳು ಚರ್ಚೆಗೆ ಬಂದಿವೆ. ಯಾವುದೇ ಪಕ್ಷಾಂತರದ ಬಗ್ಗೆ ಗಂಭೀರ ಚರ್ಚೆಗಳೇನೂ ಈ ಸಂದರ್ಭದಲ್ಲಿ ನಡೆದಿಲ್ಲ’ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.