ರಾಜ್ಯದಲ್ಲಿ ಕೋಮು ಸೌಹಾರ್ದತೆ ನೆಲೆಸಲಿ: ಮಂತ್ರಾಲಯದ ಸುಭುಧೇಂದ್ರ ಶ್ರೀಗಳು
Team Udayavani, Apr 8, 2022, 6:52 AM IST
ಬೆಂಗಳೂರು: ರಾಜ್ಯದಲ್ಲಿ ಕೋಮು ಸೌಹಾರ್ದತೆ ನೆಲೆಸಲಿ, ಹಿಂದುಗಳ ಜೊತೆಗೆ ಎಲ್ಲರಿಗೂ ಈ ದೇಶ ಅವಕಾಶ ಮಾಡಿಕೊಟ್ಟಿದೆ ಧರ್ಮ ಧರ್ಮಗಳ ನಡುವೆ ಕಚ್ಚಾಟ ಬೇಡ ಎಂದು ಮಂತ್ರಾಲಯ ಮಠದ ಸುಭುದೇಂದ್ರ ತೀರ್ಥ ಸ್ವಾಮೀಜಿ ಅಭಿಪ್ರಾಯ ಪಟ್ಟಿದ್ದಾರೆ.
ಬೆಂಗಳೂರಿನ ಮಂತ್ರಾಲಯ ಮಠದಲ್ಲಿ ತಮ್ಮನ್ನು ಸಿಎಂ ಭೇಟಿ ಮಾಡಿ ಆಶೀರ್ವಾದ ಪಡೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗ ಮುಖ್ಯವಾಗಿ ಕೋಮು ಸೌಹಾರ್ದತೆ ನೆಲೆ ಗೊಳ್ಳಬೇಕು. ಕರ್ನಾಟಕ ಶಾಂತಿಯ ಹೂ ದೋಟ ಇಲ್ಲಿಂದಲೇ ಶಾಂತಿ ಆರಂಭ ಆಗಬೇಕು. ನಮ್ಮ ಮನುಕುಲ ಉಳಿಯಬೇಕು ಅದಕ್ಕೆ ಮೊದಲ ಆದ್ಯತೆ. ಕೋವಿಡ್ ನಂತಹ ಸಂಕಷ್ಟದ ಸಂಧರ್ಭದಲ್ಲಿ ಹೀಗೆಲ್ಲಾ ಕೋಮು ಗಲಭೆ ಆಗಬಾರದು. ಎಲ್ಲರೂ ಸೌಹಾರ್ದಯುತವಾಗಿ ಬಾಳಬೇಕು ಎಂದರು.
ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂತ್ರಾಲಯಕ್ಕೆ ಬರಲು ಆಗಿರಲಿಲ್ಲ. ಇವತ್ತು ಬಂದಿದ್ದಾರೆ ಸಿಎಂ ನಮ್ಮ ಹಾವೇರಿ ಜಿಲ್ಲೆಯವರು. ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಧಾರ್ಮಿಕ ಸಂಘಟನೆ, ಆರೋಗ್ಯ ಬಗ್ಗೆ ಮಾತಾಡಿದ್ದೇವೆ. ಮಂತ್ರಾಲಯದಲ್ಲಿ 5 ಕೋಟಿಯ ಅನ್ನದಾಸೋಹಕ್ಕೆ ಕೊಡುಗೆ ಕೇಳಿದ್ದೇವೆ. ಅವರು ಕೂಡ ಕೊಡುಗೆ ನೀಡುವುದಾಗಿ ಘೋಷಿಸಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್ಐಟಿ: ಸಚಿವ ಸಂಪುಟ ನಿರ್ಧಾರ
MUST WATCH
ಹೊಸ ಸೇರ್ಪಡೆ
Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್ಎಫ್ಡಿಪಿ ಪೋರ್ಟಲ್ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.