![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 19, 2023, 11:28 PM IST
ಚಿಕ್ಕಮಗಳೂರು: ರಾಜ್ಯದ ಜನತೆಯ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯನ್ನು 2023ರ ನವೆಂಬರ್ ಒಳಗೆ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ತಿಳಿಸಿದರು.
ಶನಿವಾರ ನಗರದ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಮತ್ತು ಶೈಕ್ಷಣಿಕ ವರದಿ ಸರ್ವೇ ಕಾರ್ಯ ಪೂರ್ಣಗೊಂಡಿದ್ದು, ಸಣ್ಣ ತೊಡಕುಗಳಿದ್ದ ಕಾರಣ ವರದಿ ಯನ್ನು ಸಲ್ಲಿಸಿರಲಿಲ್ಲ. ನನ್ನ ಅವಧಿ 2023 ನವೆಂಬರ್‌ಗೆ ಮುಕ್ತಾಯ ಆಗಲಿದ್ದು, ಅಷ್ಟರೊಳಗೆ ವರದಿ ಸಲ್ಲಿಸಲಾಗುವುದು ಎಂದರು.
ಅಧ್ಯಕ್ಷ ಅವಧಿ ಮುಗಿದ ಬಳಿಕ ರಾಜಕೀಯ ಮಾತು
ರಾಜಕೀಯ ಹೊರತಾಗಿ ಬೇರೆ ಬೇರೆ ಪಕ್ಷದವರು ನನ್ನನ್ನು ಭೇಟಿ ಯಾಗಿದ್ದಾರೆ. ಯಾರೇ ಬಂದರೂ ಅವರೊಂದಿಗೆ ಮಾತನಾಡುತ್ತೇನೆ. ನೀವು ಬನ್ನಿ, ಬರಬೇಡಿ ಎಂದು ಯಾರಿಗೂ ಹೇಳಿಲ್ಲ. ರಾಜಕೀಯ ಚರ್ಚೆ ನಡೆಸಿಲ್ಲ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ನನ್ನ ಅಧ್ಯಕ್ಷ ಅವಧಿ ಮುಂಬರುವ ನವೆಂಬರ್‌ಗೆ ಮುಗಿಯಲಿದೆ. ಅಲ್ಲಿಯವರೆಗೆ ರಾಜಕೀಯವಾಗಿ ಯಾವುದೇ ಚರ್ಚೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಹಿಂದಿನ ಸರಕಾರ ನನ್ನನ್ನು 3 ವರ್ಷಗಳಿಗೆ ಅಧ್ಯಕ್ಷನನ್ನಾಗಿ ಮಾಡಿತ್ತು. ಸರಕಾರ ಬದಲಾದಾಗ ರಾಜೀನಾಮೆ ಕೊಡುತ್ತೇನೆ ಎಂದಿದ್ದೆ. ಆದರೆ ಸಿಎಂ ಸಿದ್ದರಾಮಯ್ಯ ಅವರು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವಂತೆ ಹೇಳಿದರು. ಸೌಜನ್ಯಕ್ಕಾಗಿ ಸಿಎಂ ಕಚೇರಿಗೆ ಭೇಟಿ ನೀಡಿದ್ದರೂ ಅಧ್ಯಕ್ಷ ಸ್ಥಾನ ಮುಂದುವರಿಸುವಂತೆ ಕೇಳಿಲ್ಲ ಎಂದು ಸ್ಪಷ್ಟಪಡಿಸಿದರು.
You seem to have an Ad Blocker on.
To continue reading, please turn it off or whitelist Udayavani.