ಮೇಲ್ಮನೆ ಶಿಕ್ಷಕ ಪ್ರತಿನಿಧಿಗಳೊಂದಿಗಿನ ಮಾತುಕತೆ ಯಶಸಿ
Team Udayavani, Sep 28, 2017, 12:48 PM IST
ಬೆಂಗಳೂರು: ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಯ ಶಿಕ್ಷಕರು, ಉಪನ್ಯಾಸಕರು, ಪ್ರಾಂಶುಪಾಲರು, ವಿದ್ಯಾರ್ಥಿಗಳು ಮತ್ತು ಆಡಳಿತ ಮಂಡಳಿಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ವಿಧಾನ ಪರಿಷತ್ತಿನ ಶಿಕ್ಷಕ ಕ್ಷೇತ್ರದ ಪ್ರತಿನಿಧಿಗಳು ನಡೆಸಿದ ಸಭೆ ಫಲಪ್ರದವಾಗಿದೆ.
ಶಿಕ್ಷಕ ಕ್ಷೇತ್ರದ ಪ್ರತಿನಿಧಿಗಳು ಮುಂದಿಟ್ಟಿದ್ದ 37 ಬೇಡಿಕೆಗಳ ಪೈಕಿ 30 ಬೇಡಿಕೆಗಳನ್ನು ಈಡೇರಿ ಸಲು ಸರ್ಕಾರ ಒಪ್ಪಿಕೊಂಡಿದೆ. ಇವುಗಳಲ್ಲಿ 1987ರಿಂದ 1995ರವರೆಗೆ ಪ್ರಾರಂಭವಾದ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ
ಕಾಲೇಜುಗಳನ್ನು ವೇತಾನುದಾನಕ್ಕೆ ಒಳಪಡಿಸಬೇಕು, ಸರ್ಕಾರಿ ನೌಕರರಿಗೆ ಇರುವಂತಹ ಜ್ಯೋತಿ ಸಂಜೀವಿನಿ ಯೋಜನೆಯನ್ನು ಎಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೂ ವಿಸ್ತರಿಸಬೇಕು ಎಂಬುದು ಪ್ರಮಖ ಬೇಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಸೆ. 15ರಂದು ಮುಂದೂಡಲಾಗಿದ್ದ ಆಹೋರಾತ್ರಿ ಧರಣಿಯನ್ನು ವಿಧಾನ ಪರಿಷತ್ತಿನ ಶಿಕ್ಷಕ ಕ್ಷೇತ್ರದ ಪ್ರತಿನಿಧಿಗಳು ಕೈಬಿಟ್ಟಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸಿಎಂ ಸಿದ್ದರಾಮಯ್ಯ, ಶಿಕ್ಷಣ ಸಚಿವ ತನ್ವೀರ್ ಸೇಠ್ಠ ಜತೆ ಶಿಕ್ಷಕ ಕ್ಷೇತ್ರದ ಪ್ರತಿನಿಧಿಗಳು ಶೈಕ್ಷಣಿಕ ಬೇಡಿಕೆಗಳ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದರು. ಈ ಸಂದರ್ಭ
ಬಹುತೇಕ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಒಪ್ಪಿಕೊಂಡಿದೆ.
ಸಲಹೆ ಪರಿಗಣಿಸಿ ತೀರ್ಮಾನ: ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ತನ್ವೀರ್ ಸೇಠ್ಠ “ಶಿಕ್ಷಕರು ಮತ್ತು ಉಪಸನ್ಯಾಸಕರ ವೇತನ ತಾರತಮ್ಯ ಸರಿಪಡಿಸಲು ಕ್ರಮ ಕೈಗೊಳ್ಳ ಲಾಗುವುದು. ಕಾಲ್ಪನಿಕ ವೇತನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅಪರ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ.
ವರ್ಗಾವಣೆ ಮಾನದಂಡಕ್ಕೆ ಸಂಬಂಧಿಸಿದಂತೆ ಶಿಕ್ಷಕ ಪ್ರತಿನಿಧಿಗಳ ಆಕ್ಷೇಪ, ಸಲಹೆಗಳನ್ನು ಪರಿಗಣಿಸಲು ಕೂಡ ತೀರ್ಮಾನಿಸಲಾಗಿದೆ. ಆದರೆ, ಖಾಸಗಿ ಶಾಲಾ ಶಿಕ್ಷಕರಿಗೂ ಸರ್ಕಾರಿ ಶಾಲಾ ವೇತನ ನೀಡಬೇಕು ಎಂಬ ಬೇಡಿಕೆ
ಈಡೇರಿಸಲು ಸಾಧ್ಯವಿಲ್ಲ ಎಂಬುದನ್ನು ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ’ ಎಂದು ಹೇಳಿದರು.
ಸೇವಾ ಜೇಷ್ಠತೆ ಮೇಲೆ ಪರಿಗಣನೆ: ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಮಾತನಾಡಿ, ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕ ಮತ್ತು ವಿದ್ಯಾರ್ಥಿಗಳ ಅನುಪಾತ 1:70 ರಿಂದ 1:50ಕ್ಕೆ ಇಳಿಸಲು, ಪದವಿ ಕಾಲೇಜುಗಳಲ್ಲಿ ಈ ಅನು ಪಾತವನ್ನು 1:110ರಿಂದ 1:70ಕ್ಕೆ ಇಳಿಸಲು ಸರ್ಕಾರ ಒಪ್ಪಿದೆ. ಇದರಿಂದಾಗಿ ಇನ್ನೂ ಹೆಚ್ಚಿನ ಅತಿಥಿ ಉಪನ್ಯಾಸಕರು ಅಗತ್ಯ ಬೀಳಲಿದ್ದು, ಹಲವು ವರ್ಷ ಸೇವೆ ಸಲ್ಲಿಸಿ ಈ ವರ್ಷ ಹೊರಗೆ ಉಳಿದಂತಹ ಅತಿಥಿ ಉಪನ್ಯಾಸಕರನ್ನು ಸೇವಾ ಜೇಷ್ಠತೆ ಮೇಲೆ ಪರಿಗಣಿಸುವಂತೆ ಮುಖ್ಯಮಂತ್ರಿ ಯವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆದರೆ, ಇದು ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.