ಕೋವಿಡ್ ವಿರುದ್ಧ ಹೋರಾಟಕ್ಕೆ ಮತ್ತೆ 100 ಕೋಟಿ ರೂ. ಘೋಷಿಸಿದ ‘ಇನ್ಫೋಸಿಸ್’ ಸುಧಾಮೂರ್ತಿ
Team Udayavani, May 10, 2021, 8:21 AM IST
ಬೆಂಗಳೂರು: ಕಳೆದ ವರ್ಷ ಬೆಂಗಳೂರಿನಲ್ಲಿ ಕೋವಿಡ್ ಆಸ್ಪತ್ರೆಗಾಗಿ 100 ಕೋಟಿ ರೂ. ನೀಡಿದ್ದ ಇನ್ಫೋಸಿಸ್ ಫೌಂಡೇಶನ್ ಕೋವಿಡ್ ವಿರುದ್ಧದ ಹೋರಾಟಕ್ಕೆ ಇದೀಗ ಮತ್ತೆ 100 ಕೋಟಿ ರೂಪಾಯಿ ದೇಣಿಗೆ ನೀಡಲಿದೆ.
ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಭಾನುವಾರ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಕಳೆದ ವರ್ಷವೂ 100 ಕೋಟಿ ರೂಪಾಯಿ ನೀಡಲಾಗಿತ್ತು. ವೆಂಟಿಲೇಟರ್, ಆಕ್ಸಿಜನ್ ಯಂತ್ರ ಪೂರೈಕೆಗೆ ಬಳಕೆ, ಮೂಲಸೌಕರ್ಯ ಬಳಕೆಗೆ 100 ಕೋಟಿ ರೂಪಾಯಿ ನೀಡುವುದಾಗಿ ಸುಧಾಮೂರ್ತಿ ಘೋಷಿಸಿದ್ದಾರೆ. ಈ ಮೂಲಕ ಕೋವಿಡ್ ವಿರುದ್ಧದ ಭಾರತದ ಹೋರಾಟಕ್ಕೆ ಇಸ್ಫೋಸಿಸ್ ಒಟ್ಟಾರೆ 200 ಕೋಟಿ ರು. ದೇಣಿಗೆ ನೀಡಿದಂತಾಗಲಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಇಸ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ, ‘ಕಳೆದ ವರ್ಷ ಬೆಂಗಳೂರಿನಲ್ಲಿ ಕೋವಿಡ್ ಆಸ್ಪತ್ರೆ ಸ್ಥಾಪನೆಗೆ ನೆರವು ನೀಡಿದ್ದೆವು. ಈ ಆಸ್ಪತ್ರೆ ಇದೀಗ ಪರಿಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ. ಕಳೆದ ವರ್ಷ 100 ಕೋಟಿ ರೂ. ಪೈಕಿ ಶೇ.50ರಷ್ಟುಹಣವನ್ನು ಪಿಎಂ ಕೇರ್ಸ್‌ಗೆ ನೀಡಿದ್ದೆವು. ಆದರೆ ಈ ಸಲ 100 ಕೋಟಿ ರೂ. ಅನ್ನು ಮೂಲಭೂತ ಸೌಕರ್ಯಗಳ ಪೂರೈಕೆಗಾಗಿ ಬಳಕೆ ಮಾಡಿಕೊಳ್ಳಲಾಗುತ್ತದೆ’ಎಂದಿದ್ದಾರೆ.
ಅಲ್ಲದೆ ನಮ್ಮ ನೆರವಿನ ಹಸ್ತವನ್ನು ಇದೀಗ ನಮ್ಮ ಸಂಸ್ಥೆ ಇರುವ ಮಂಗಳೂರು, ಹೈದರಾಬಾದ್, ಪುಣೆ, ನಾಗ್ಪುರ, ತಿರುವನಂತಪುರ ಹಾಗೂ ದೆಹಲಿಯಲ್ಲೂ ಕೊರೋನಾ ನಿಯಂತ್ರಣಕ್ಕೆ ಬಳಸಲಿದ್ದೇವೆ. ಈ ನಗರಗಳಲ್ಲಿರುವ ಆಸ್ಪತ್ರೆಗಳಿಗೆ ಅಗತ್ಯವಿರುವ ವೆಂಟಿಲೇಟರ್‌ಗಳು, ಆಮ್ಲಜನಕದ ಕಾನ್ಸನ್‌ಟ್ರೇಟರ್‌ಗಳು, ಸ್ಯಾನಿಟೈಸರ್, ಪಿಪಿಇ ಕಿಟ್‌ಗಳು, ಎನ್-95 ಮಾಸ್ಕ್‌ಗಳು ಸೇರಿದಂತೆ ಇನ್ನಿತರ ಉಪಯುಕ್ತ ಉಪಕರಣಗಳನ್ನು ಪೂರೈಸುತ್ತೇವೆ. ಅಲ್ಲದೆ ಆಟೋ ಚಾಲಕರು, ದಿನಗೂಲಿ ಕಟ್ಟಡ ಕಾರ್ಮಿಕರಿಗೆ ಅಕ್ಕಿ, ಆಹಾರದ ಕಿಟ್‌ಗಳನ್ನು ಪೂರೈಸುತ್ತಿದ್ದೇವೆ. ಅಲ್ಲದೆ ಹಲವರು ಕೊರೋನಾದಿಂದ ರಕ್ಷಣೆ ನೀಡುವ ಲಸಿಕೆ ಪಡೆಯುತ್ತಿಲ್ಲ. ಹೀಗಾಗಿ ನಾವು ಲಸಿಕಾ ಜಾಗೃತಿಯನ್ನೂ ಮೂಡಿಸುತ್ತಿದ್ದೇವೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಮುಳಿಯಾರಿನಲ್ಲಿ ಮನೆ ಮುಂದೆ ಐದು ಚಿರತೆ ಪ್ರತ್ಯಕ್ಷ
INDIA ಕೂಟದಿಂದ ಕಾಂಗ್ರೆಸ್ ಹೊರಗಿಡಲು ಆಪ್ ಒತ್ತಾಯ!
Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.