ಏ.24ರಿಂದ ಮೇ 21ರವರೆಗೆ ಹೈಕೋರ್ಟ್‌ಗೆ ಬೇಸಿಗೆ ರಜೆ
Team Udayavani, Apr 22, 2022, 9:30 PM IST
ಬೆಂಗಳೂರು: ರಾಜ್ಯ ಹೈಕೋರ್ಟ್‌ಗೆ ಏ.24ರಿಂದ ಮೇ 21ರವರೆಗೆ ಬೇಸಿಗೆ ರಜೆ ಇರಲಿದೆ.
ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠ, ಧಾರವಾಡ ಹಾಗೂ ಕಲಬುರ್ಗಿ ಪೀಠಗಳಿಗೆ ಈ ಬೇಸಿಗೆ ರಜೆ ಅನ್ವಯವಾಗಲಿದೆ.
ಈ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆಗೆ ವಿವಿಧ ದಿನಾಂಕಗಳಂದು ಏಳು ದಿನ ರಜಾ ಕಾಲದ ನ್ಯಾಯಪೀಠಗಳು ಕಾರ್ಯನಿರ್ವಹಣೆ ಮಾಡಲಿದೆ.
ಏಪ್ರಿಲ್ 26, 28, ಮೇ 5, 10, 12, 17 ಮತ್ತು 19 ರಂದು ರಜಾ ಕಾಲದ ಪೀಠಗಳು ಕಾರ್ಯನಿರ್ವಹಿಸಲಿವೆ.
ಬೇಸಿಗೆ ರಜೆಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮಮೂರ್ತಿಗಳ ಆದೇಶಾನುಸಾರ ಹೈಕೋರ್ಟ್ ರಿಜಿಸ್ಟ್ರಾರ್ (ನ್ಯಾಯಾಂಗ) ಕೆ.ಎಸ್. ಭರತ್ ಕುಮಾರ್ ಅಧಿಸೂಚನೆ ಹೊರಡಿಸಿದ್ದಾರೆ.
ರಜಾ ಕಾಲದ ನ್ಯಾಯಪೀಠಗಳು ಬೆಂಗಳೂರು ಪ್ರಧಾನ ಪೀಠದಲ್ಲಿ ಕಾರ್ಯ ನಿರ್ವಹಿಸಲಿವೆ. ಧಾರವಾಡ ಹಾಗೂ ಕಲಬುರಗಿ ಪೀಠಗಳಲ್ಲಿ ಭೌತಿಕ ವಿಚಾರಣೆ ಇರುವುದಿಲ್ಲ.
ಬದಲಿಗೆ ಈ ಪೀಠಗಳಲ್ಲಿ ದಾಖಲಾಗುವ ತುರ್ತು ಪ್ರಕರಣಗಳು ಬೆಂಗಳೂರಿನ ಪ್ರಧಾನ ಪೀಠದಲ್ಲಿ ಆನ್‌ಲೈನ್ ಮೂಲಕ ವಿಚಾರಣೆ ನಡೆಯಲಿವೆ.
ಹಾಗಿದ್ದೂ, ಧಾರವಾಡ ಮತ್ತು ಕಲಬುರ್ಗಿ ಪೀಠಗಳಲ್ಲಿ ಪ್ರಕರಣ ದಾಖಲಿಸಲು ವಾರಪೂರ್ತಿ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 10 ರಿಂದ 12ರ ನಡುವೆ ನೇರವಾಗಿ ಅಥವಾ ಇ-ಫೈಲಿಂಗ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ:ಸಿದ್ದರಾಮಯ್ಯ ತಮ್ಮ ಘನತೆಗೆ ತಕ್ಕ ಮಾತನಾಡಲಿ: ಪ್ರಹ್ಲಾದ ಜೋಶಿ
ವಕೀಲರಿಗೆ ಸೂಚನೆ:
ರಜಾ ಕಾಲದ ಪೀಠಗಳಲ್ಲಿ ಪ್ರಕರಣದ ವಿಚಾರಣೆ ಕೋರಿ ಮನವಿ ಸಲ್ಲಿಸುವ ವಕೀಲರು ತುರ್ತು ವಿಚಾರಣೆಯ ಕುರಿತು ಉಲ್ಲೇಖಿಸಬೇಕು. ಇಲ್ಲದಿದ್ದರೆ ಅಂತಹ ಅರ್ಜಿಗಳನ್ನು ರಜಾ ಕಾಲದ ವಿಶೇಷ ಪೀಠಗಳ ಮುಂದೆ ವಿಚಾರಣೆಗೆ ನಿಗದಿಪಡಿಸಲಾಗುವುದಿಲ್ಲ. ಇನ್ನು ರಜಾ ಕಾಲದ ಪೀಠಗಳಲ್ಲಿ ತುರ್ತು ಅಗತ್ಯವಿರುವ ತಡೆಯಾಜ್ಞೆ ಕೋರಿಕೆ, ಮಧ್ಯಂತರ ನಿರ್ದೇಶನ, ತಾತ್ಕಾಲಿಕ ತಡೆಯಾಜ್ಞೆ ಮನವಿಗಳ ಹೊರತಾಗಿ ಸಿವಿಲ್ ಸ್ವರೂಪದ ಪ್ರಕರಣಗಳ ವಿಚಾರಣೆ ಪರಿಗಣಿಸುವುದಿಲ್ಲ. ಅದೇ ರೀತಿ ಕ್ರಿಮಿನಲ್ ಪ್ರಕರಣಗಳಲ್ಲಿಯೂ ತುರ್ತು ಆದೇಶಗಳ, ತಡೆಯಾಜ್ಞೆಗಳ ಕೋರಿಕೆಯನ್ನಷ್ಟೇ ಪರಿಗಣಿಸಲಾಗುತ್ತದೆ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.