ನಳಿನ್ ಕುಮಾರ್ ಕಟೀಲ್‌ಗೆ ಸಮನ್ಸ್ ಜಾರಿ
Team Udayavani, Jan 25, 2020, 3:03 AM IST
ಬೆಂಗಳೂರು: ಶಾಸಕ ರಿಜ್ವಾನ್ ಅರ್ಷದ್ ವಿರುದ್ಧ ನಕಲಿ ಮತದಾರರ ಚೀಟಿ ಮುದ್ರಿಸಿದ ಸುಳ್ಳು ಆರೋಪ ಮಾಡಿದ್ದಾರೆಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ. 2018ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಕಲಿ ಮತದಾರರ ಚೀಟಿ ದಂಧೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದ ರಿಜ್ವಾನ್ ಅರ್ಷದ್ ಭಾಗಿಯಾಗಿದ್ದಾರೆಂಬ ಆರೋಪದ ಟ್ವೀಟ್‌ನನ್ನು ಬಿಜೆಪಿ ಕರ್ನಾಟಕ ಖಾತೆಯಿಂದ ಟ್ವೀಟ್ ಮಾಡಲಾಗಿತ್ತು.
ಈ ಟ್ವೀಟ್‌ನನ್ನು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ರಿಟ್ವೀಟ್ ಮಾಡಿದ್ದರು. ಸುಳ್ಳು ಆರೋಪದ ಟ್ವೀಟ್ ಮಾಡಿ ಮಾನಹಾನಿ ಉಂಟು ಮಾಡಲಾಗಿದೆ ಎಂದು ಆರೋಪಿಸಿ ರಿಜ್ವಾನ್ ಅರ್ಷದ್, ಬಿಜೆಪಿ ರಾಜ್ಯಾಧ್ಯಕ್ಷರು ಮತ್ತಿತರರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ ಶುಕ್ರವಾರ ಆರೋಪಿತರಿಗೆ ಸಮನ್ಸ್ ಜಾರಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
MUST WATCH
ಹೊಸ ಸೇರ್ಪಡೆ
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.