ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರದಿಂದ ಪೂರಕ ಕ್ರಮ: ಸಿಂಎ ಯಡಿಯೂರಪ್ಪ
Team Udayavani, Jan 2, 2021, 3:05 PM IST
ಬೆಂಗಳೂರು: ರೈತರ ಆದಾಯ ದ್ವಿಗುಣಗೊಳಿಸುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಶಯವನ್ನು ಸಫಲವಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯವು ಹಮ್ಮಿಕೊಂಡಿರುವ ತೋಟಗಾರಿಕಾ ಮೇಳವನ್ನು ಆನ್ ಲೈನ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸಿಎಫ್ ಟಿ ಆರ್ ಐ ಹಾಗೂ ಭಾರತೀಯ ತೋಟಗಾರಿಕಾ ಸಂಸ್ಥೆಯ ಸಹಭಾಗಿತ್ವದೊಂದಿಗೆ ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆ, ಸಂಸ್ಕರಣೆ, ದಾಸ್ತಾನು ಮತ್ತು ಪ್ಯಾಕೇಜಿಂಗ್ ಗಳ ಬಗ್ಗೆ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸಲು ಉದ್ದೇಶಿಸಲಾಗಿದೆ. ಒಟ್ಟಾರೆ ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿಗಣಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದರು.
ಇದನ್ನೂ ಓದಿ:ಕೈಲಾಗದವರೆಲ್ಲರೂ ಕನ್ನಡಿಗರ ಮೇಲೆ ಸವಾರಿ ಮಾಡಲು ಬಂದಾರು…: ಕುಮಾರಸ್ವಾಮಿ ಎಚ್ಚರಿಕೆ
ಪ್ರಧಾನ ಮಂತ್ರಿಯವರು 100ನೇ ಕಿಸಾನ್ ರೈಲಿಗೆ ಇತ್ತೀಚೆಗಷ್ಟೇ ಚಾಲನೆ ನೀಡಿದ್ದಾರೆ. ಮೂರು ತಿಂಗಳ ಅವಧಿಯಲ್ಲಿ ಕಿಸಾನ್ ರೈಲುಗಳ ಮೂಲಕ 27 ಸಾವಿರ ಟನ್ ಕೃಷಿ ಉತ್ಪನ್ನಗಳನ್ನು ಸಾಗಿಸಲಾಗಿದೆ. ಶೀಘ್ರವಾಗಿ ಕೊಳೆತುಹೋಗಬಹುದಾದ ದಾಳಿಂಬೆ, ಕಿತ್ತಳೆ ಹಾಗೂ ಇತರ ತೋಟಗಾರಿಕಾ ಬೆಳೆಗಳನ್ನು ಇತರ ರಾಜ್ಯಗಳಿಗೆ ಸಾಗಿಸಲು ಕೃಷಿ ರೈಲ್ ಯೋಜನೆಯ ಸೌಲಭ್ಯವನ್ನು ಬಳಸಿಕೊಳ್ಳಲಾಗುವುದು. ತೋಟಗಾರಿಕಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯವು ತನ್ನ ಸ್ಥಾನವನ್ನು ಕಾಯ್ದುಕೊಂಡು ಇನ್ನೂ ಹೆಚ್ಚಿನ ಸಾಧನೆ ಮಾಡಲು ಪೂರಕ ಸಂಶೋಧನೆ, ವಿಸ್ತರಣೆ ಹಾಗೂ ಇತರ ಮೂಲಕಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.