![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 9, 2020, 8:23 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯಕ್ಕೆ ಏಪ್ರಿಲ್ ನಿಂದ ಜೂನ್ ತಿಂಗಳವರೆಗೆ ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿಯ ಪ್ರತಿ ತಿಂಗಳಿಗೆ 2.1 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯಗಳಂತೆ ಮೂರು ತಿಂಗಳ ಧಾನ್ಯ ಎತ್ತುವಳಿ ಮಾಡಲಾಗಿದೆ. ಕೇಂದ್ರ ಸರ್ಕಾರ ಈ ಯೋಜನೆಯಡಿ ರಾಜ್ಯಕ್ಕೆ 2351 ಕೋಟಿ ರೂ. ವೆಚ್ಚ ಭರಿಸುತ್ತಿದೆ. ಕರ್ನಾಟಕವು 302 ರೈಲು ಲೋಡ್ ಅಂದರೆ 8.03 ಲಕ್ಷ ಮೆಟ್ರಿಕ್ ಟನ್ ತೂಕದ ಆಹಾರ ಧಾನ್ಯಗಳನ್ನು ಸ್ವೀಕರಿಸಿದೆ ಎಂದು ಭಾರತ ಆಹಾರ ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಿ.ವಿ.ಪ್ರಸಾದ್ ತಿಳಿಸಿದ್ದಾರೆ.
ಭಾರತೀಯ ಆಹಾರ ನಿಗಮದ ಕರ್ನಾಟಕ ಪ್ರದೇಶವು ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಮತ್ತು ಸಾಮಾನ್ಯ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ
ಅಡಿಯಲ್ಲಿ ರಾಜ್ಯದ ಅಗತ್ಯತೆಗಳನ್ನು ಪೂರೈಸಲು ಇದುವರೆಗೆ ಪ್ರತಿದಿನ 7.48 ಲಕ್ಷ ಚೀಲಗಳನ್ನು ಸ್ವೀಕೃತಿ ವಿತರಣೆಯನ್ನು ಮಾಡಿದೆ. ಇದೇ ಅವಧಿಯಲ್ಲಿ, ಎನ್‌ಎಫ್‌ಎಸ್‌ಎ ಅಡಿಯಲ್ಲಿ ರಾಜ್ಯ ಸರ್ಕಾರವು 2.54 ಎಲ್ ಎಂಟಿ ಆಹಾರ ಧಾನ್ಯಗಳನ್ನು ಸಹ ಎತ್ತುವಳಿ ಮಾಡಿದೆ. ವಿವಿಧ ಯೋಜನೆಗಳ ಅಡಿಯಲ್ಲಿ
ವಿತರಣೆಗಾಗಿ ಲಾಕ್ ಡೌನ್ ಅವಧಿಯಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಪೂರೈಸಿದ ಒಟ್ಟು ಆಹಾರ ಧಾನ್ಯಗಳ ಪ್ರಮಾಣ 8.51 ಲಕ್ಷ ಮೆಟ್ರಿಕ್ ಟನ್ ಎಂದು ಹೇಳಿದ್ದಾರೆ .
You seem to have an Ad Blocker on.
To continue reading, please turn it off or whitelist Udayavani.