ಸೋಯಾಬಿನ್ಗೆ ಬೆಂಬಲ ಬೆಲೆ
Team Udayavani, Nov 12, 2019, 3:00 AM IST
ಬೆಂಗಳೂರು: ರಾಜ್ಯದಲ್ಲಿ ಬೆಳೆದಿರುವ ಸೋಯಾಬಿನ್ನ್ನು ಬೆಂಬಲ ಬೆಲೆ ನೀಡಿ ಖರೀದಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಬೆಳೆದ ಸೋಯಾಬಿನ್ ಬೆಳೆಗೆ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಸೋಯಾಬಿನ್ ಖರೀದಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ರಾಜ್ಯದಲ್ಲಿ ಮುಂಗಾರಿನಲ್ಲಿ 2019-20 ನೇ ಸಾಲಿನಲ್ಲಿ ಬೆಳೆದ ಸೋಯಾಬಿನ್ ಬೆಳೆಯನ್ನು ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಖರೀದಿಸಲು ನಿರ್ಧರಿಸಿದೆ.
ಈ ಕುರಿತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, 64,125 ಮೆಟ್ರಿಕ್ ಟನ್ ಸೋಯಾಬಿನ್ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಖರೀದಿಸಲು ಸೂಚಿಸಲಾಗಿದೆ. 15 ದಿನಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಿ 90 ದಿನಗಳವರೆಗೆ ಸೊಯಾಬಿನ್ ಖರೀದಿಸಲು ಸೂಚಿಸಲಾಗಿದೆ. ಸರ್ಕಾರ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಖರೀದಿಸಿರುವ ಸೋಯಾಬಿನ್ ದಾಸ್ತಾನು ಮಾಡಲು ರಾಜ್ಯ ಸರ್ಕಾರ ಸೂಕ್ತ ದಾಸ್ತಾನು ಮಳಿಗೆಗಳನ್ನು ಹೊಂದುವಂತೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.