![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jun 9, 2022, 10:27 AM IST
ಬೆಂಗಳೂರು: ರಾಜ್ಯಸಭಾ ಚುನಾವಣಾ ಅಖಾಡದಿಂದ ರಿಟೈರ್ಡ್ ಆಗುವ ಸಾಧ್ಯತೆಯನ್ನು ಜೆಡಿಎಸ್ ತಳ್ಳಿ ಹಾಕಿದ್ದು, ತಮ್ಮದೇ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕಾಂಗ್ರೆಸ್ ಗೆ ಮತ್ತೊಮ್ಮೆ ಮನವಿ ಮಾಡಿದೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಎಚ್.ಡಿ.ಕುಮಾರಸ್ವಾಮಿಯವರು, ಡಿ.ಕುಪೇಂದ್ರ ರೆಡ್ಡಿ ಅವರನ್ನು ರಾಜ್ಯಸಭೆ ಚುನಾವಣೆಗೆ ತನ್ನ ಮೊದಲ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಅವರು ಉದ್ದಿಮೆದಾರರು, ಸಮಾಜ ಸೇವಕರು ಮತ್ತು ಪ್ರಗತಿಪರ ಚಿಂತಕರು, ರಾಜ್ಯಸಭೆ ಸದಸ್ಯರಾಗಿ ಅನುಭವವುಳ್ಳ ಅವರನ್ನು ಎಲ್ಲ ಪಕ್ಷಗಳು ಮುಕ್ತ ಮನಸ್ಸಿನಿಂದ ಬೆಂಬಲಿಸಬೇಕು. ಜಾತ್ಯತೀತ ಶಕ್ತಿಗಳನ್ನು ಬಲಪಡಿಸಲು ಕಾಂಗ್ರೆಸ್ ಪಕ್ಷ ಕುಪೇಂದ್ರ ರೆಡ್ಡಿ ಅವರಿಗೆ ಪೂರ್ಣ ಬೆಂಬಲ ಕೊಡಬೇಕು. ಬಿಜೆಪಿಯನ್ನು ಸೋಲಿಸಲು, ತನಗಿಂತ ಹೆಚ್ಚು ಮತ ಹೊಂದಿರುವ ಜೆಡಿಎಸ್ ಅನ್ನು ಕಾಂಗ್ರೆಸ್ ಬೆಂಬಲಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಪ್ರಥಮ ಪಿಯುಸಿ ದಾಖಲಾತಿ ಅವಧಿ ವಿಸ್ತರಿಸಿದ ಪದವಿ ಪೂರ್ವ ಶಿಕ್ಷಣ ಇಲಾಖೆ
ಈ ಚುನಾವಣೆಯ ಪರಿಣಾಮಗಳ ಬಗ್ಗೆ ಇತಿಹಾಸ ಮತ್ತು ಜನತೆ ಭವಿಷ್ಯದ ದಿನಗಳಲ್ಲಿ ನಿರ್ಧರಿಸುತ್ತಾರೆ ಎಂಬುದರಲ್ಲಿ ಸಂಶಯವಿಲ್ಲ. ರಣದೀಪ್ ಸುರ್ಜೇವಾಲಾ ಅವರು ಈ ಅಂಶ ಅರ್ಥ ಮಾಡಿಕೊಳ್ಳುತ್ತಾರೆ ಎಂದು ನಂಬಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
He is an experienced Rajya Sabha member & All parties must extend support to him with open mind. To strengthen the secular forces Congress must fully support Kupendra Reddy. 2/3
— H D Kumaraswamy (@hd_kumaraswamy) June 9, 2022
ಶಾಸಕರು ರೆಸಾರ್ಟ್ ಗೆ: ರಾಜ್ಯಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ತನ್ನೆಲ್ಲ ಶಾಸಕರನ್ನು ಜೆಡಿಎಸ್ ರೆಸಾರ್ಟ್ ಗೆ ಸ್ಥಳಾಂತರಿಸಿದೆ.
ಎಷ್ಟೇ ಮಾತುಕತೆಯ ನಂತರವೂ ಕಾಂಗ್ರೆಸ್ ನಿಂದ ಸಹಕಾರ ಲಭ್ಯವಾಗದ ಹಿನ್ನೆಲೆಯಲ್ಲಿ ಜೆಡಿಎಸ್ ಈಗ ತನ್ನ ಮತ ಕಾಯ್ದುಕೊಳ್ಳುವುದಕ್ಕೆ ಮುಂದಾಗಿದೆ.ಎಲೆಕ್ಟ್ರಾನಿಕ್ ಸಿಟಿ ಸಮೀಪದ ರೆಸಾರ್ಟ್ ಗೆ ತನ್ನ ಶಾಸಕರನ್ನು ಸ್ಥಳಾಂತರಿಸಿದೆ. ವಿದೇಶ ಪ್ರವಾಸದಲ್ಲಿದ್ದ ಶಾಸಕ ಗೌರಿ ಶಂಕರ್ ಅವರನ್ನೂ ತುರ್ತಾಗಿ ವಾಪಾಸ್ ಕರೆಸಿಕೊಳ್ಳಲಾಗಿದೆ. ಒಂದಿಬ್ಬರು ಶಾಸಕರು ಮಾತ್ರ ಅಸಮಾಧಾನ ಹೊಂದಿದ್ದು, ಅವರು ಅಡ್ಡಮತದಾನ ಮಾಡುವ ಸಾಧ್ಯತೆ ಕಡಿಮೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.